ಮನೆಮದ್ದು: ಆರೋಗ್ಯದ ಹಲವು ಸಮಸ್ಯೆಗಳಿಗೆ ಔಷಧೀಯ ಗುಣದ “ದಾಸವಾಳ ಹೂ” ರಾಮಬಾಣ

ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.

Team Udayavani, Jan 17, 2023, 5:40 PM IST

thumnail-web-kavya

ಸಾಮಾನ್ಯವಾಗಿ ಹೂವುಗಳನ್ನು ಪೂಜೆಗೆ ಮಾತ್ರ ಬಳಸಲಾಗುತ್ತದೆ. ಅದರಲ್ಲೂ ಎಲ್ಲೆಂದರಲ್ಲಿ ಬೆಳೆಸಲಾಗುವ ದಾಸವಾಳ ಹೂವು ದೇವರ ನಿತ್ಯ ಪೂಜೆಗೆ ಬಳಕೆಯಾಗುತ್ತದೆ. ಆದರೆ ಈ ಹೂವಿನಲ್ಲಿ ಔಷಧೀಯ ಗುಣಗಳಿವೆ ಎಂಬುದು ಹಲವರಿಗೆ ಗೊತ್ತಿರಲ್ಲಿಕ್ಕಿಲ್ಲ.

ಹೂವು ಅನೇಕ ಆರೊಗ್ಯ ಸಮಸ್ಯೆಗಳನ್ನು ದೂರ ಮಾಡುತ್ತದೆ. ಕೂದಲು, ಹೊಟ್ಟೆ, ಕೊಲೆಸ್ಟ್ರಾಲ್, ಕ್ಯಾನ್ಸರ್, ಹೃದಯ, ರಕ್ತನಾಳದ ಕಾಯಿಲೆ ಸೇರಿದಂತೆ ಸ್ತ್ರೀಯರ ಅನೇಕ ಸಮಸ್ಯೆಗಳು ಹೂವಿನಿಂದ ಪರಿಹಾರವಾಗುತ್ತದೆ. ಇಂತಹ ಕೆಲವು ಸಮಸ್ಯೆ-ಪರಿಹಾರಗಳ ಬಗ್ಗೆ ತಿಳಿದುಕೊಳ್ಳೋಣ.

ಮಧುಮೇಹ ನಿವಾರಣೆಗೆ:

ಮಧುಮೇಹ ಸಮಸ್ಯೆ ಇರುವವರು ನಿಯಮಿತವಾಗಿ ದಾಸವಾಳ ಹೂವಿನ ಚಹಾ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ರಕ್ತದೊತ್ತಡವನ್ನು ನಿವಾರಣೆ:

ರಕ್ತದೊತ್ತಡ ಸಾಮಾನ್ಯ ಕಾಯಿಲೆಯಾಗಿದ್ದರು ಕೂಡ ಇದು ಅಪಾಯಕಾರಿ.  ಈ ಹೂವಿನ ರಸದ ಕಷಾಯವನ್ನು ಕುಡಿದರೆ ದೇಹದಲ್ಲಿನ ಅತಿಯಾದ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರುತ್ತದೆ. ದಾಸವಾಳದ ಹೂವಿನ ಟೀ ಮಾಡಿ ಕುಡಿದರೆ ಅಥವಾ ಅದರ ರಸವನ್ನು ಸೇವಿಸಿದರೆ, ಹೃದಯ ಸ್ತಂಭನಕ್ಕೆ ಕಾರಣವಾಗುವ, ರಕ್ತದಲ್ಲಿ ಸೇರಿಕೊಂಡ ಅನಗತ್ಯ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಈ ಮೂಲಕ ಹೃದಯ ಸ್ತಂಭನದ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.

ತೂಕ ಇಳಿಕೆ:

ದೇಹದಲ್ಲಿರುವ ಅನಗತ್ಯ ಬೊಜ್ಜನ್ನು ಕರಗಿಸುವಲ್ಲಿ ದಾಸವಾಳ ಹೆಚ್ಚು ಪ್ರಯೋಜನ. ದಾಸವಾಳ ಹೂವಿನ ಚಹಾ ಕುಡಿಯುವುದರಿಂದ ತೂಕವನ್ನು ಕಳೆದುಕೊಳ್ಳಬಹುದು. ದಾಸವಾಳದಲ್ಲಿನ ಸಾರಗಳು ಕೊಬ್ಬಿನ ಕೋಶಗಳನ್ನು ಸಂಗ್ರಹಿಸುವುದನ್ನು ತಡೆಯಲು ಸಹಾಯ ಮಾಡುತ್ತದೆ. ದಾಸವಾಳ ಆ್ಯಂಟಿಆಕ್ಸಿಡೆಂಟ್ ಅಂಶವಿದ್ದು, ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.

ಕ್ಯಾನ್ಸರ್‌:

ದಾಸವಾಳ ಹೂವಿನಲ್ಲಿರುವ ಗುಣ ಕ್ಯಾನ್ಸರ್ ಕಣಗಳ ವಿರುದ್ಧ ಹೋರಾಡುತ್ತದೆ. ದಾಸವಾಳ ಹೂವಿನ ಟೀ ಮಾಡಿ ಕುಡಿಯುವುದು ತುಂಬಾ ಒಳ್ಳೆಯದು. ಬಿಳಿ ದಾಸವಾಳ ಎಲ್ಲಕ್ಕಿಂತ ಹೆಚ್ಚು ಔಷಧೀಯ ಗುಣಗಳನ್ನು ಹೊಂದಿದೆ. ಹೂವುಗಳನ್ನು ಬೇವಿನ ಮರದ ಅಡಿ (ನೆರಳಿನಲ್ಲಿ) ಒಣಗಿಸುವುದು ಉತ್ತಮ. ನಂತರ ಇದನ್ನು ಪುಡಿ ಮಾಡಿ ಸೇವಿಸಿದರೆ ಎಲ್ಲ ಬಗೆಯ ಕ್ಯಾನ್ಸರ್‌ಗಳಿಗೆ ಉಪಶಮನಕಾರಿ.

ತಲೆ ಕೂದಲಿನ ಸಮಸ್ಯೆ:

ಈ ಹೂವಿನ ದಳಗಳನ್ನು ಅರೆದು ಅದರಲ್ಲಿ ಸಂಗ್ರಹಿಸಲಾದ ಲೋಳೆಯನ್ನು ಕೂದಲ ಬುಡಕ್ಕೆ ಹಚ್ಚುವುದು ಕೂದಲ ಪೋಷಣೆಗೆ ಒಂದು ಉತ್ತಮ ವಿಧಾನ. ಎಣ್ಣೆಯಲ್ಲಿ ದಾಸವಾಳ ಹೂವನ್ನು ಹಾಕಿ ಕಾಯಿಸಿ, ಆ ಎಣ್ಣೆಯನ್ನು ಬಳಸಿದರೆ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಪ್ರತೀದಿನ ಕೂದಲಿಗೆ ಈ ಎಣ್ಣೆ ಹಚ್ಚಿದರೆ ಕೂದಲು ಕಪ್ಪು ಬಣ್ಣ ಪಡೆಯುತ್ತದೆ.

ಹಲವು ನೈಸರ್ಗಿಕ ಕೂದಲ ಉತ್ಪನ್ನಗಳಲ್ಲಿ ಇದನ್ನು ಬಳಸಲಾಗುತ್ತದೆ. ಇದರ ಗಿಡದ ಚೆಕ್ಕೆ ಪುಡಿಯನ್ನು ಶಾಂಪೂ ಮೂಲಕ ಬಳಸುವುದು ತಲೆಯ ಚರ್ಮ ಒಣಗುವುದಕ್ಕೆ ಹಾಗೂ ತಲೆಯಲ್ಲಿ ಹೊಟ್ಟಾಗುವುದರಿಂದ ರಕ್ಷಿಸಬಹುದು.

ಚರ್ಮದ ಆರೈಕೆಗೆ:

ದಾಸವಾಳ ಹೂವಿನ ತೈಲದ ಬಳಕೆಯಿಂದ ಚರ್ಮಕ್ಕೆ ಹೊಳಪು ಬರುತ್ತದೆ. ಹೂವು ಹಾಗೂ ಎಲೆಗಳನ್ನು ಒಣಗಿಸಿ, ಸುಟ್ಟ ಬಳಿಕ ಸಿಗುವ ಬೂದಿಯನ್ನು ಹಚ್ಚಿದರೆ, ಕಣ್ಣಹುಬ್ಬುಗಳು ಹೊಳಪು ಪಡೆಯುತ್ತವೆ. ಈ ಸಸ್ಯದ ಬೇರುಗಳನ್ನು ಎಣ್ಣೆಯಲ್ಲಿ ಹಾಕಿ, ಬೇರಿನಲ್ಲಿರುವ ನೀರಿನ ಅಂಶ ಆವಿಯಾಗುವವರೆಗೂ ಕುದಿಸಬೇಕು. ಗಾಯಗಳಿಗೆ ಈ ಎಣ್ಣೆ ಲೇಪಿಸಿದರೆ ಗುಣಮುಖವಾಗುವುದು.

ಕಾವ್ಯಶ್ರೀ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.