ಮೆಹಬೂಬಾ ಮುಫ್ತಿ ಜತೆ ಬಿಜೆಪಿ ಸರಕಾರ ರಚಿಸಿತ್ತಲ್ಲ? : ಸಂಜಯ್ ರಾವುತ್ ಪ್ರಶ್ನೆ
ಅಫ್ಜಲ್ ಗುರು ಮತ್ತು ಬುರ್ಹಾನ್ ವಾನಿ ಬೆಂಬಲಿಸಿದವರೊಂದಿಗೆ ಕೈಜೋಡಿಸಿದ್ದೇಕೆ?
Team Udayavani, Mar 27, 2022, 11:49 AM IST
ಮುಂಬಯಿ: ಮೆಹಬೂಬಾ ಮುಫ್ತಿ ಬಿಜೆಪಿಯ ಉತ್ತಮ ಸ್ನೇಹಿತರಾಗಿದ್ದು, ಆಕೆ ಅಫ್ಜಲ್ ಗುರು ಮತ್ತು ಬುರ್ಹಾನ್ ವಾನಿಯನ್ನು ಬೆಂಬಲಿಸಿದ ಹೊರತಾಗಿಯೂ, ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಅವರೊಂದಿಗೆ ಸರ್ಕಾರವನ್ನು ರಚಿಸಿದ್ದೇಕೆ ಎಂದು ಶಿವಸೇನೆ ನಾಯಕ ಸಂಜಯ್ ರಾವುತ್ ಪ್ರಶ್ನಿಸಿದ್ದಾರೆ.
ಪ್ರಧಾನಿ ಮೋದಿ ಮತ್ತು ಕಾಶ್ಮೀರ ಫೈಲ್ಸ್ ಚಿತ್ರದ ವಿರುದ್ಧ ವಾಗ್ದಾಳಿ ನಡೆಸಿದ ರಾವುತ್, ಮುಫ್ತಿ ಅವರು ಕಾಶ್ಮೀರ ಸಮಸ್ಯೆ ಬಗೆಹರಿಸಲು ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಬೇಕು ಎಂದು ಹೇಳಿಕೆ ನೀಡಿದ್ದಾರೆ. ಹಾಗಾಗಿ ಈ ಪಾಪ ಬಿಜೆಪಿಯವರದ್ದು. ಹಾಗಾಗಿ ಅದಕ್ಕೆ ಅವರೇ ಜವಾಬ್ದಾರರು. ಬಿಜೆಪಿ ಮೊದಲಿನಿಂದಲೂ ಮೆಹಬೂಬಾ ಮುಫ್ತಿ ಜತೆ ವಿಶೇಷ ದೋಸ್ತಿ ಹೊಂದಿದೆ. ಮುಫ್ತಿ ಅವರ ಪಕ್ಷ ಪ್ರತ್ಯೇಕತಾವಾದಿಗಳಿಗೆ ಸಹಾಯ ಮಾಡುತ್ತಿದೆ ಎಂದು ತಿಳಿದಿದ್ದರೂ, ಅವರ ಜೊತೆ ಬಿಜೆಪಿ ಅಧಿಕಾರಕ್ಕೆ ಬಂದಿತು. ಅದರಿಂದಲೇ ಮುಫ್ತಿ ಪಕ್ಷಕ್ಕೆ ಬಲ ಬಂದಿದ್ದು ಎಂದು ಕಿಡಿ ಕಾರಿದರು.
ಇಂದು ಮುಫ್ತಿ ಏನೇ ಹೇಳುತ್ತಿದ್ದರೂ ಅದಕ್ಕೆ ಬಿಜೆಪಿಯೇ ಹೊಣೆ. ನಮ್ಮ ಪಕ್ಷ ಇದನ್ನು ವಿರೋಧಿಸುತ್ತಲೇ ಇರುತ್ತದೆ. ಕಾಶ್ಮೀರವನ್ನು ಪಾಕಿಸ್ಥಾನಕ್ಕೆ ಸೇರಿಸುವ ಉಗ್ರರ ಬಗ್ಗೆ ಸಹಾನುಭೂತಿ ಹೊಂದಿರುವ ಮುಫ್ತಿ ಪಕ್ಷವನ್ನು ಬಲಪಡಿಸಲು ಬಿಜೆಪಿ ಶ್ರಮಿಸುತ್ತಿದೆ ಎಂದು ಸಂಜಯ್ ರಾವುತ್ ಗಂಭೀರ ಆರೋಪ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ