ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿಯಲ್ಲಿ ರಾತ್ರೋ ರಾತ್ರಿ ಹೈಡ್ರಾಮಾ: ಪಿಡಿಓ ಎತ್ತಂಗಡಿ, ಆದೇಶ ವಾಪಾಸ್
Team Udayavani, Jan 31, 2023, 8:02 PM IST
ತೀರ್ಥಹಳ್ಳಿ: ತಾಲೂಕಿನ ಅತೀ ದೊಡ್ಡ ಗ್ರಾಮಪಂಚಾಯಿತಿಗಳಲ್ಲಿ ಒಂದಾಗಿರುವ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿಯಲ್ಲಿ ಹಲವು ದಿನಗಳಿಂದ ಗಲಾಟೆ ನೆಡೆಯುತ್ತಿದ್ದು ಇದಕ್ಕೆ ಸಂಬಂಧಪಟ್ಟಂತೆ ಸೋಮವಾರ ರಾತ್ರಿ ಹೈಡ್ರಾಮವೊಂದು ನೆಡೆದಿದೆ.
ಗ್ರಾಮಪಂಚಾಯಿತಿಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಯ ನೆಡೆಯುತ್ತಿದ್ದ ಮುಸುಕಿನ ಗುದ್ದಾಟ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಅದರಲ್ಲೂ ಅಲ್ಲಿನ ಅಭಿವೃದ್ಧಿ ಅಧಿಕಾರಿಯನ್ನು ಎತ್ತಂಗಡಿ ಮಾಡಬೇಕು ಇಲ್ಲದಿದ್ದರೆ ಗ್ರಾಮಪಂಚಾಯಿತಿಗೆ ಬರುವುದಿಲ್ಲ ಎಂದು ಅಧ್ಯಕ್ಷರು ಹಾಗೂ ಕೆಲವು ಸದಸ್ಯರು ಹೇಳಿದ್ದರು. ಇದರಿಂದ ಗ್ರಾಮಪಂಚಾಯಿತಿ ಆವರಣದಲ್ಲಿ ಸೋಮವಾರ ಸಾರ್ವಜನಿಕರಿಂದ ಪ್ರತಿಭಟನೆ ಕೂಡ ನೆಡೆದಿತ್ತು.
ಪಿಡಿಓ ಎತ್ತಂಗಡಿ
ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮತ್ತು ಕೆಲವು ಸದಸ್ಯರು ಈಓ ಬಳಿ ಹೋಗಿ ಪಿಡಿಓ ಬಗ್ಗೆ ದೂರು ನೀಡಿದ್ದಾರೆ ಎನ್ನಲಾಗುತ್ತಿದ್ದೂ ಈಓ ವಿಷಯವನ್ನು ಹಿಂದೂ ಮುಂದೆ ನೋಡದೆ ರಾತ್ರೋ ರಾತ್ರಿ ಪಿಡಿಓ ಅವರನ್ನು ತಾಲೂಕು ಪಂಚಾಯತ್ ಕಚೇರಿಗೆ ವರ್ಗಾವಣೆ ಮಾಡಲು ಆದೇಶ ಮಾಡಿದ್ದರು.
ಗೃಹಸಚಿವರ ಆದೇಶ – ವರ್ಗಾವಣೆ ವಾಪಾಸ್
ಈ ವಿಷಯ ತಿಳಿದ ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷರಾದ ಅನಿಲ್ ಅವರು ಗೃಹಸಚಿವರಿಗೆ ಮಾಹಿತಿ ನೀಡಿ ಮೇಲಿನ ಕುರುವಳ್ಳಿ ಗ್ರಾಮಪಂಚಾಯಿತಿ ಪಿಡಿಓ ದಕ್ಷ ಅಧಿಕಾರಿಯಾಗಿದ್ದು ಅವರನ್ನು ವರ್ಗಾವಣೆ ಮಾಡಲು ಆದೇಶಿಸಿದ್ದಾರೆ. ಈ ರೀತಿ ಮಾಡಬಾರದು ಎಂದು ಗೃಹಸಚಿವರ ಬಳಿ ಮನವಿ ಮಾಡಿದ್ದರು. ನಂತರ ಗೃಹಸಚಿವರು ಈಓ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ತಾವೇ ನೀಡಿದ್ದ ಆದೇಶವನ್ನು ಈಓ ವಾಪಾಸ್ ಪಡೆದಿದ್ದಾರೆ. ಒಟ್ಟಿನಲ್ಲಿ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿಯಲ್ಲಿ ರಾತ್ರೋ ರಾತ್ರಿ ಹೈಡ್ರಾಮ ನೆಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ
ಕೇಂದ್ರ ಸರಕಾರದಿಂದ ಉತ್ತರ ಕನ್ನಡ ಜಿಲ್ಲೆಗೆ 232 ಕೋ.ರೂ. ಅನುದಾನ
ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ ಮೋದಿ ಕೈ ಬಲಪಡಿಸಿ: ಅಮಿತ್ ಶಾ
ಎಪ್ರಿಲ್ ಮೊದಲ ವಾರ ಬಿಜೆಪಿ ಪಟ್ಟಿ: ಬಿಡುಗಡೆ ಭಾಗ್ಯ ಕಾಣದ ಕಾಂಗ್ರೆಸ್ ಪಟ್ಟಿ
ಅಂತಿಮವಾಗದ ಸಿದ್ದರಾಮಯ್ಯ ಕ್ಷೇತ್ರ: ಇಂದು ಬಾದಾಮಿಯಲ್ಲಿ 2. ಕಿ. ಮೀ. ರೋಡ್ ಶೋ
MUST WATCH
ಹೊಸ ಸೇರ್ಪಡೆ
ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ
ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್
ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ: ಡಾ.ಯತೀಂದ್ರ
64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ
ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ