ಸಂಜೀವಿನಿ ಯೋಜನೆಯ ಅನುಷ್ಠಾನದಲ್ಲಿ ಉಡುಪಿ ರಾಜ್ಯಕ್ಕೇ ಮಾದರಿ: ಜಿಲ್ಲಾಧಿಕಾರಿ

Team Udayavani, Mar 29, 2022, 6:20 AM IST

ಸಂಜೀವಿನಿ ಯೋಜನೆಯ ಅನುಷ್ಠಾನದಲ್ಲಿ ಉಡುಪಿ ರಾಜ್ಯಕ್ಕೇ ಮಾದರಿ: ಜಿಲ್ಲಾಧಿಕಾರಿ

ಮಣಿಪಾಲ: ಜಿಲ್ಲಾ ಪಂಚಾಯತ್‌ನ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ, ಸಂಜೀವಿನಿ ಯೋಜನೆಯಡಿ ಉಡುಪಿಜಿಲ್ಲೆಯಲ್ಲಿ ಕೈಗೊಳ್ಳುತ್ತಿರುವ ಕಾರ್ಯಕ್ರಮ ಗಳು ಇಡೀ ರಾಜ್ಯಕ್ಕೆ ಮಾದರಿಯಾಗಿವೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಹೇಳಿದರು.

ಮಣಿಪಾಲದ ಸಿಂಡಿಕೇಟ್‌ ಬ್ಯಾಂಕ್‌ ಗೋಲ್ಡನ್‌ ಜುಬಿಲ್‌ ಹಾಲ್‌ನಲ್ಲಿ ಜಿ.ಪಂ., ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಲಜೀವನ್‌ ಮಿಷನ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕೆನರಾ ಬ್ಯಾಂಕ್‌ ವೃತ್ತ ಕಚೇರಿ ಸಹಯೋಗದಲ್ಲಿ ಸೋಮ ವಾರ ನಡೆದ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟಗಳು ಹಾಗೂ ಉಪಸಮಿತಿಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಗ್ರಾಮೀಣ ಜೀವನೋ ಪಾಯದ ಸಂಜೀವಿನಿ ಯೋಜನೆಯಡಿ, ಮಹಿಳೆಯರು ಆರಂಭಿಸಿರುವ ಚಿಕ್ಕಿ ತಯಾರಿಕಾ ಘಟಕದ ಮೂಲಕ ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಚಿಕ್ಕಿ ಪೂರೈಕೆ, ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳಲ್ಲಿ ಸಂಜೀವಿನಿ ಉತ್ಪನ್ನಗಳ ಮಾರಾಟ ಮಳಿಗೆ, ಮೊಬೈಲ್‌ ಕ್ಯಾಂಟೀನ್‌, ಎಚ್‌ಐವಿ ಸೋಂಕಿತರು ಮತ್ತು ತೃತೀಯ ಲಿಂಗಿಗಳಿಗೆ ವಿವಿಧ ಯೋಜನೆಯಲ್ಲಿ ತೊಡಗಿಕೊಳ್ಳಲು ಅವಕಾಶ, ಪ್ರಮುಖ ಉತ್ಸವಗಳಲ್ಲಿ ಸಂಜೀವಿನಿ ತಂಡದ ಮಹಿಳೆಯರು ತಮ್ಮ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ನೀಡುತ್ತಿದ್ದು, ಇದರಲ್ಲಿ ಮಹಿಳೆಯರ ಭಾಗವಹಿಸುವಿಕೆ ಸಹ ಉತ್ತಮವಾಗಿದೆ ಎಂದರು.

ಉಚಿತ ಕಾನೂನು ನೆರವು
ಹಿರಿಯ ಸಿವಿಲ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಮಾತನಾಡಿ, ಮಹಿಳೆಯರು ತಮ್ಮ ಮೇಲೆ ನಡೆಯುವ ದೌರ್ಜನ್ಯಗಳ ಕುರಿತು ಉಚಿತ ಕಾನೂನು ನೆರವು ಪಡೆಯಬಹುದು. ಮಹಿಳೆಯರು ಸಂವಿಧಾನ ನೀಡಿರುವ ಹಕ್ಕುಗಳನ್ನು ಸದುಪ ಯೋಗಪಡಿಸಿಕೊಳ್ಳಬೇಕು ಎಂದರು.

139 ಕೋ.ರೂ. ಸಾಲ ವಿತರಣೆ
ಕೆನರಾ ಬ್ಯಾಂಕ್‌ ಮಣಿಪಾಲ ವೃತ್ತ ಕಚೇರಿ ಜನರಲ್‌ ಮ್ಯಾನೇಜರ್‌ ರಾಮ ನಾಯ್ಕ ಮಾತನಾಡಿ, ಮಹಿಳಾ ಸ್ವ-ಸಹಾಯ ಸಂಘಗಳು ಸಾಲವನ್ನು ಸಕಾಲದಲ್ಲಿ ಮರುಪಾವತಿಸು ತ್ತಿದ್ದು, ಈ ವೃತ್ತದ 5 ಜಿಲ್ಲೆಗಳಲ್ಲಿ 4,070 ಗುಂಪುಗಳ 61,000 ಸದಸ್ಯರಿಗೆ ಒಟ್ಟು 139 ಕೋ.ರೂ. ಸಾಲ ವಿತರಿಸಲಾ ಗಿ ದೆ. ಹೆಚ್ಚಿನ ಸಾಲ ಪಡೆದು ಹೆಚ್ಚಿನ ಅಭಿವೃದ್ಧಿ ಚಟು ವಟಿಕೆಗಳನ್ನು ಕೈಗೊಳ್ಳಬೇಕು ಎಂದರು.

ಪ್ರಶಸ್ತಿ ವಿತರಣೆ
ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ನವಶಕ್ತಿ ಸಂಜೀವಿನಿ ಗ್ರಾ.ಪಂ. ಒಕ್ಕೂಟ ಬಡಾ ನಿಡಿಯೂರು ಅವರಿಗೆ ಪ್ರಶಸ್ತಿ ವಿತರಿಸಲಾಯಿತು. ಜಿ.ಪಂ. ಯೋಜನಾ ನಿರ್ದೇಶಕ ಬಾಬು ಪ್ರಸ್ತಾವನೆಗೈದರು. ಜಲ ಜೀವನ್‌ ಮಿಷನ್‌ ಯೋಜನೆಯ ಮುಖ್ಯಸ್ಥ ಗಿರೀಶ್‌, ನ್ಯಾಯವಾದಿ ಪ್ರದೀಪ್‌ ಹಾಜರಿದ್ದರು.

ರಾ. ಗ್ರಾಮೀಣ ಜೀವನೋಪಾಯ ಅಭಿಯಾನದ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್‌ ಸ್ವಾಗತಿಸಿ, ಜಿ.ಪಂ. ಸಹಾಯಕ ಯೋಜನಾಧಿಕಾರಿ ಜೇಮ್ಸ್‌ ಡಿ’ಸಿಲ್ವಾ ವಂದಿಸಿದರು. ಅಶ್ವಿ‌ನಿ ಬಾರಕೂರು, ಗಣೇಶ್‌ ನಾಯ್ಕ ನಿರೂಪಿಸಿದರು.

ಉದ್ಯೋಗಿಗಳೀಗ ಉದ್ಯಮಿಗಳು!
ಅಧ್ಯಕ್ಷತೆ ವಹಿಸಿದ್ದ ಜಿ.ಪಂ. ಸಿಇಒ ಡಾ| ನವೀನ್‌ ಭಟ್‌ ಮಾತನಾಡಿ, ಒಂದು ವರ್ಷದಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಗೆ ರಾಷ್ಟ್ರ ಮಟ್ಟದ ಪ್ರಾಮುಖ್ಯ ದೊರೆತ ಕಾರಣ, ಉದ್ಯೋಗಿಗಳೆಲ್ಲ ಉದ್ಯಮಿಗಳಾಗಿ ಎಂಬಂತೆ ಮಹಿಳೆಯರು ವಿವಿಧ ಕಾರ್ಯಕ್ರಮಗಳಲ್ಲಿ ತೊಡಗಿಕೊಂಡಿದ್ದಾರೆ ಎಂದರು.

ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು ಸಂಜೀವಿನಿ ಸಂತೆಗಳನ್ನು ಆಯೋಜಿಸಲಾಗಿದೆ. 60 ಮಂದಿ ಚಾಲನೆ ಪರವಾನಿಗೆ ಪಡೆದು ಸ್ವ-ಉದ್ಯೋಗಿಗಳಾಗಿದ್ದಾರೆ. ಸಂಚಾರಿ ಕ್ಯಾಂಟೀನ್‌ ಆರಂಭ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕ್ಯಾಂಟೀನ್‌ ನಿರ್ವಹಣೆ, ಬ್ಯಾಂಕಿಂಗ್‌ ನೆರವು ನೀಡುವ ಸಖೀಯರಾಗಿ 110 ಕ್ಕೂ ಅಧಿಕ ಮಂದಿ ಕಾರ್ಯನಿರ್ವಹಣೆ, ಹಡಿಲು ಭೂಮಿ ಕೃಷಿ ಕಾರ್ಯ, ಹೈನುಗಾರಿಕೆ, ಕೃಷಿ ಯಂತ್ರೋಪಕರಣ ಕೇಂದ್ರದ ನಿರ್ವಹಣೆ, ಉದ್ಯೋಗ ಮೇಳದ ಮೂಲಕ 600ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಲಾಗಿದೆ. ಪ್ರತೀ ತಾಲೂಕಿನಲ್ಲಿ ತಲಾ 2 ಸಂಜೀವಿನಿ ನರ್ಸರಿ, ಸಂಜೀವಿನಿ ಕಲಾತಂಡ ರಚನೆ, ಬ್ಯೂಟಿ ಪಾರ್ಲರ್‌, ಸೂಪರ್‌ ಮಾರ್ಕೆಟ್‌ ಆರಂಭಿಸುವ ಜತೆಗೆ ಆಹಾರ ಉತ್ಪನ್ನಗಳ ಸರಬರಾಜು ಮಾಡುವ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಆರಂಭಿಸುವ ಮೂಲಕ ಜಿಲ್ಲೆಯ ಮಹಿಳೆಯರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಹೆಚ್ಚಿನ ಸಶಕ್ತರನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.