Rain ಕರಾವಳಿಯಲ್ಲಿ ಹಿಂಗಾರು ಬಿರುಸು ಸಾಧ್ಯತೆ: ನಿರೀಕ್ಷೆ ಹುಸಿಗೊಳಿಸಿದ ಮುಂಗಾರು

Team Udayavani, Oct 15, 2023, 6:45 AM IST

Rain ಕರಾವಳಿಯಲ್ಲಿ ಹಿಂಗಾರು ಬಿರುಸು ಸಾಧ್ಯತೆ: ನಿರೀಕ್ಷೆ ಹುಸಿಗೊಳಿಸಿದ ಮುಂಗಾರು

ಮಂಗಳೂರು: ಕರಾವಳಿಯಲ್ಲಿ ಈ ಬಾರಿಯ ಮುಂಗಾರು ನಿರೀಕ್ಷೆ ಹುಸಿಗೊಳಿಸಿ ನಿರ್ಗಮಿಸಿದೆ. ಇದೀಗ ಹಿಂಗಾರು ಪ್ರವೇಶ ಪಡೆದುಕೊಳ್ಳುತ್ತಿದ್ದು, ಬಿರುಸಿನ ವಾಡಿಕೆ ಮಳೆ ನಿರೀಕ್ಷಿಸಲಾಗಿದೆ.

ಕರಾವಳಿ ಭಾಗದಲ್ಲಿ ಈ ಬಾರಿ ಮುಂಗಾರು ದುರ್ಬಲಗೊಂಡು ವಾಡಿಕೆಗಿಂತ ಶೇ. 19ರಷ್ಟು ಕಡಿಮೆ ಮಳೆ ಸುರಿದಿತ್ತು. ಇದೀಗ ಹಿಂಗಾರು ಕೆಲವೆಡೆ ಆರಂಭದಲ್ಲಿಯೇ ಬಿರುಸು ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಸಾಮಾನ್ಯವಾಗಿ ಮುಂಗಾರು ಅವಧಿಯಲ್ಲಿ ಕಡಿಮೆ ಪ್ರಮಾಣದಲ್ಲಿ ಮಳೆ ಸುರಿದರೆ, ಹಿಂಗಾರು ವೇಳೆ ವಾಡಿಕೆಯಂತೆ ಅಥವಾ ವಾಡಿಕೆಗಿಂತ ಅಧಿಕ ಮಳೆ ಸುರಿಯುತ್ತದೆ. ಕಳೆದ ಬಾರಿ ಕರಾವಳಿಯಲ್ಲಿ ಮುಂಗಾರು ವಾಡಿಕೆಯ ಮಳೆ ಸುರಿದ ಪರಿಣಾಮ ಹಿಂಗಾರು ವಾಡಿಕೆಗಿಂತ ಶೇ.14ರಷ್ಟು ಕ್ಷೀಣಿಸಿತ್ತು. ಆದರೆ, ಈ ಬಾರಿ ಮಳೆ ಕೊರತೆಯ ಪರಿಣಾಮ ಹಿಂಗಾರು ಅವಧಿಯಲ್ಲಿ ಯಥೇತ್ಛ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ತಜ್ಞರ ಅಭಿಪ್ರಾಯಪಟ್ಟಿದ್ದಾರೆ.

ಸದ್ಯ ಮುಂಗಾರು ಕೊನೆಗೊಂಡು ಹಿಂಗಾರು ಆರಂಭದ ಕಾಲ. ಅಕ್ಟೋಬರ್‌ ಎರಡನೇ ವಾರದಿಂದಲೇ ಈ ಬೆಳವಣಿಗೆ ನಡೆಯುತ್ತದೆ. ಈ ಅವಧಿಯಲ್ಲಿ ಬಂಗಾಲಕೊಲ್ಲಿ ಕಡೆಯಿಂದ ಹಿಂಗಾರು ಮಾರುñ ‌ ಗಳು ಆಗಮಿಸುತ್ತವೆ. ಮುಂಗಾರು ಅವಧಿಯಲ್ಲಿ ಮಳೆ ಸರಾಸರಿ ಗಿಂತ ಕಡಿಮೆ ಬಂದಾಗ ವಾತಾವರಣ ದಲ್ಲಿ, ಭೂಮಿಯಲ್ಲಿ ನೀರಿನ ಅಂಶ ಕಡಿಮೆ ಇರುತ್ತದೆ. ಆಗ ಉಷ್ಣಾಂಶ ತನ್ನಿಂತಾನೇ ಏರಿಕೆಯಾಗುತ್ತದೆ. ಆ ವೇಳೆ ವಾತಾವರಣದಲ್ಲಿ ಒತ್ತಡ ಕಡಿಮೆ ಯಾಗುತ್ತದೆ. ಆಗ ಸುತ್ತಲಿನ ಮೋಡ ಚಲನೆಯಿಂದಾಗಿ ಮಳೆಯಾ ಗುತ್ತದೆ. ಇದೇ ಕಾರಣಕ್ಕೆ ಮುಂಗಾರು ಕಡಿಮೆಯಾದ ವರ್ಷಗಳಲ್ಲಿ ಹಿಂಗಾರು ಜಾಸ್ತಿ ಇರುತ್ತದೆ.

ದ.ಕ.ದಲ್ಲಿ ಮುನ್ನಡೆ, ಉಡುಪಿಯಲ್ಲಿ ಹಿನ್ನಡೆ
ಹಿಂಗಾರು ಆರಂಭದಲ್ಲಿ ತುಸು ಹಿನ್ನಡೆ ಕಂಡರೂ ಸದ್ಯ ಉತ್ತಮ ಮಳೆ ಆರಂಭಗೊಂಡಿದೆ. ಅ.1ರಿಂದ 13ರ ವರೆಗೆ ದ.ಕ. ಜಿಲ್ಲೆಯಲ್ಲಿ ಶೇ.31ರಷ್ಟು ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಉಡುಪಿಯಲ್ಲಿ ಶೇ. 37 ಕಡಿಮೆ ಮಳೆಯಾಗಿದೆ. ಆದರೆ, ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಬಿರುಸಿನ ಮಳೆ ನಿರೀಕ್ಷೆ ಇದೆ.

ಈ ಬಾರಿ ಚಳಿ ಅವಧಿ ಹೆಚ್ಚಳ
ಕರಾವಳಿ ಭಾಗದಲ್ಲಿ ಸದ್ಯ ಬಿಸಿಲು, ಸೆಕೆ, ಮಳೆ ಇದ್ದು, ಕೆಲವು ಕಡೆ ಬೆಳಗ್ಗಿನ ಜಾವ ತುಸು ಚಳಿಯ ವಾತಾವರಣವೂ ಇದೆ. ಸದ್ಯದ ಮಾಹಿತಿಯ ಪ್ರಕಾರ ನವೆಂಬರ್‌ ಎರಡನೇ ವಾರದಿಂದ ಚಳಿ ಆರಂಭವಾಗಬಹುದು. ಮುಂಗಾರು ಅವಧಿಯಲ್ಲಿ ವಾಡಿಕೆ ಮಳೆ ಬಂದರೆ ಚಳಿ ಅವಧಿ ಮತ್ತು ಪ್ರಮಾಣ ಸಾಮಾನ್ಯವಾಗಿರುತ್ತಿತ್ತು. ಆದರೆ, ಹಿಂಗಾರು ಜಾಸ್ತಿಯಾದರೆ ವಾತಾವರಣದಲ್ಲಿ ನೀರಿನ ಅಂಶ ಹೆಚ್ಚಾಗುತ್ತದೆ. ಕಾರಣ ಚಳಿ ಬೇಗ ಆರಂಭವಾಗಿ, ಚಳಿಯ ಅವಧಿ ಕೂಡ ಜಾಸ್ತಿ ಇರುವ ಸಾಧ್ಯತೆ ಇದೆ ಎನ್ನುತ್ತಾರೆ ಹವಾಮಾನ ಇಲಾಖೆ ಅಧಿಕಾರಿಗಳು.

ಕರಾವಳಿ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆ ಸುರಿದಿತ್ತು. ಇದೇ ಕಾರಣಕ್ಕೆ ಹಿಂಗಾರು ಅವಧಿಯಲ್ಲಿ ಉತ್ತಮ ಮಳೆ ಸುರಿಯಬಹುದು ಎಂದು ಅಂದಾಜಿಸಲಾಗಿದೆ. ಈ ಹಿಂದೆ ಮುಂಗಾರು ಕಡಿಮೆ ಸುರಿದ ವೇಳೆ ಹಿಂಗಾರು ಯಥೇತ್ಛವಾಗಿತ್ತು. ಹಿಂಗಾರು ಉತ್ತಮವಿದ್ದರೆ ಚಳಿಗಾಲದಲ್ಲಿಯೂ ವ್ಯತ್ಯಾಸವಾಗುವ ಸಾಧ್ಯತೆ ಇದೆ.
– ಡಾ| ರಾಜೇಗೌಡ, ಕೃಷಿ ವಿ.ವಿ. ಬೆಂಗಳೂರು ಹವಾಮಾನ ವಿಜ್ಞಾನಿ

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.