ಭಾರತೀಯರನ್ನು ನಿಂದಿಸಿ ಟ್ವೀಟ್ ಮಾಡಿದ್ದರೇ ಮಾರ್ಗನ್, ಬಟ್ಲರ್?
Team Udayavani, Jun 10, 2021, 12:29 AM IST
ಲಂಡನ್: ಇಂಗ್ಲೆಂಡ್ ತಂಡ ಮತ್ತೂ ಒಂದು ಟ್ವೀಟ್ ಸುಳಿಗೆ ಸಿಲುಕಿದೆ. ಇಯಾನ್ ಮಾರ್ಗನ್ ಮತ್ತು ಜಾಸ್ ಬಟ್ಲರ್ ಭಾರತೀಯ ಆಟಗಾರರ ವಿರುದ್ಧ ಜನಾಂಗೀಯ ನಿಂದನೆಯ ಟ್ವೀಟ್ ಮಾಡಿದ್ದಾರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಇಸಿಬಿ ತನಿಖೆ ಆರಂಭಿಸಿದೆ.
2019ರ ಏಕದಿನ ವಿಶ್ವಕಪ್ ವಿಜೇತ ತಂಡದ ನಾಯಕ ಇಯಾನ್ ಮಾರ್ಗನ್ ಹಾಗೂ ಜಾಸ್ ಬಟ್ಲರ್ ಅವರು ಭಾರತೀಯರನ್ನು ಅಪಹಾಸ್ಯ ಮಾಡಲು “ಸರ್’ ಹಾಗೂ ಕೆಲವು ರಹಸ್ಯ ಇಂಗ್ಲಿಷ್ ಪದಗಳನ್ನು ಬಳಸಿದ್ದಾರೆಂಬ ಆರೋಪವನ್ನು ಎದುರಿಸುತ್ತಿದ್ದಾರೆ. 2017- 18ರಲ್ಲಿ ಇವರಿಬ್ಬರೂ ಈ ರೀತಿಯ ಟ್ವೀಟ್ ಮಾಡಿದ್ದರೆಂದು “ಟೆಲಿಗ್ರಾಫ್’ ವರದಿ ಮಾಡಿದೆ.
ಈ ಕುರಿತು ಮಾತನಾಡಿದ ಇಸಿಬಿ ವಕ್ತಾರ ರೊಬ್ಬರು, “ನಮ್ಮ ಕ್ರೀಡೆಯಲ್ಲಿ ತಾರತಮ್ಯಕ್ಕೆ ಜಾಗವಿಲ್ಲ. ಇಂತಹ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ನಾವು ಬದ್ಧರಾಗಿದ್ದೇವೆ. ಪ್ರತಿಯೊಂದು ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ಪರಿಶೀಲಿಸಿ ಇಸಿಬಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ