Movie Release: ರಾಜ್ಯಾದ್ಯಂತ “ಪಯಣ್’ ಸಿನೆಮಾ ಸೆ.20ರಂದು ತೆರೆಗೆ
Team Udayavani, Sep 18, 2024, 12:35 AM IST
ಮಂಗಳೂರು: ಸಂಗೀತ್ ಘರ್ ಮಂಗಳೂರು ಬ್ಯಾನರ್‌ನಡಿ ತಯಾರಾದ ಕೊಂಕಣಿ ಚಲನ ಚಿತ್ರ “ಪಯಣ್’ (ಪ್ರಯಾಣ) ಸೆ. 20ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಮಂಗಳೂರು, ಸುರತ್ಕಲ್, ಪಡುಬಿದ್ರಿ, ಉಡುಪಿ, ಕುಂದಾಪುರ ಹಾಗೂ ಪುತ್ತೂರಿನಲ್ಲಿ ಏಕಕಾಲದಲ್ಲಿ ಪಯಣ್ ಬಿಡುಗಡೆಯಾಗಲಿದೆ. ಮುಂಬಯಿ ಹಾಗೂ ಗಲ್ಫ್ ದೇಶಗಳಲ್ಲಿ ಬಿಡುಗಡೆಯಾಗುವ ದಿನಾಂಕಗಳೂ ನಿಗದಿಯಾಗಿವೆ.
ಮುಹೂರ್ತದಿಂದಲೇ ಕುತೂಹಲ ಸೃಷ್ಟಿಸಿದ್ದ ಈ ಚಿತ್ರದ ಟೀಸರ್ ಬಿಡುಗಡೆಯಾದದ್ದೇ ಕೊಂಕಣಿ ಚಲನಚಿತ್ರ ಪ್ರೇಮಿ ಗಳಿಂದ ಪ್ರಸಂಶೆಯ ಸುರಿಮಳೆ ಸುರಿದಿತ್ತು. ಈಗಾಗಲೇ ಮಂಗಳೂರು ಮತ್ತು ಪುತ್ತೂರಿನಲ್ಲಿ ಪ್ರೀಮಿಯರ್ ಶೋಗಳು ಹೌಸ್‌ಫುಲ್ ಪ್ರದರ್ಶನ ಕಂಡಿವೆ ಮತ್ತು ವೀಕ್ಷಕರಿಂದ ಕೊಂಕಣಿ ಚಲನಚಿತ್ರ ದ ಇತಿಹಾಸದಲ್ಲಿ “ಪಯಣ್’ ಒಂದು ಮೈಲಿಗಲ್ಲು ಎಂದು ಹೇಳಲಾಗುತ್ತಿದೆ.
ನೀಟಾ ಜೋನ್ ಪೆರಿಸ್ ಈ ಚಿತ್ರದ ನಿರ್ಮಾಪಕರು. ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕ ಜೊಯೆಲ್ ಪಿರೇರಾ ಬರೆದಿದ್ದು, ಮೆಲ್ವಿನ್ ಪೆರಿಸ್ ಸಾಹಿತ್ಯ ಹಾಗೂ ರೋಶನ್ ಡಿ’ಸೋಜಾ ಆಂಜೆಲೊರ್ ಸಂಗೀತ ನಿರ್ದೇಶನ ನೀಡಿದ್ದಾರೆ. ಪುತ್ತೂರಿನ ಯುವ ಪ್ರತಿಭೆ ಬ್ರಾಯನ್ ಸಿಕ್ವೇರ ನಾಯಕನಾಗಿ ಹಾಗೂ ಜಾಸ್ಮಿನ್ ಡಿ’ಸೋಜಾ, ಕೇಟ್ ಪಿರೇರಾ ಮತ್ತು ಶೈನಾ ಡಿ’ಸೋಜಾ ನಾಯಕಿಯರಾಗಿ ನಟಿಸಿದ್ದಾರೆ.
ನಟರಾದ ರೈನಲ್ ಸಿಕ್ವೇರಾ, ಲೆಸ್ಲಿ ರೇಗೊ, ಜೆರಿ ರಸ್ಕಿನ್ಹಾ, ವಾಲ್ಟರ್ ನಂದಳಿಕೆ, ಜೀವನ್ ವಾಸ್, ಜೊಸ್ಸಿ ರೇಗೊ, ಮೆಲಿಶಾ ಪಿಂಟೊ ಮುಖ್ಯ ಭೂಮಿಕೆಯಲ್ಲಿದ್ದಾರೆ. ಛಾಯಾಗ್ರಹಣ ವಿ. ರಾಮಾಂಜನೇಯ ಮತ್ತು ಸಂಕಲನ ಮೆವಿನ್ ಜೋಯೆಲ್ ಪಿಂಟೊ ಶಿರ್ತಾಡಿ ಇವರದ್ದು. ಮಂಗಳೂರು, ಉಡುಪಿ ಸುತ್ತಮುತ್ತ ಚಿತ್ರೀಕರಣ ನಡೆದಿದೆ.
ಪಯಣ್… ಜೀವನದ ನಿಜವಾದ ಸಾಮರಸ್ಯಕ್ಕೆ ಸಂಗೀತ ಕಲೆಯ ನಿಪುಣತೆಗಿಂತಲೂ ಹೆಚ್ಚಿನದ್ದು ಬೇಕು ಎಂಬುದನ್ನು ಕಂಡುಹಿಡಿಯುವ ಸಂಗೀತಗಾರನ ಹೋರಾಟದ ಪ್ರಯಾಣ ಕಥೆ. ಅವರು ಸಂಗೀತ ಉದ್ಯಮದ ಸವಾಲುಗಳನ್ನು ಎದುರಿಸಿ ಮುನ್ನಡೆಯುವಾಗ – ವೈಯಕ್ತಿಕ ಪೈಶಾಚಿಕತೆಯನ್ನು ಎದುರಿಸು ವುದರೊಂದಿಗೆ ವಂಚನೆ ಮತ್ತು ಅನಿರೀಕ್ಷಿತ ಜಾಲಗಳನ್ನು ಎದುರಿಸುತ್ತಾರೆ. ಸಂಗೀತ ಕ್ಷೇತ್ರದಲ್ಲಿ ಪಡಿಯಚ್ಚನ್ನು ಒತ್ತಿ, ತನ್ನ ಹಿಂದೆ ಪರಂಪರೆಯೊಂದನ್ನು ಬಿಟ್ಟು ಹೋಗುವ ಬಯಕೆಯಿಂದ ಪ್ರೇರೇಪಿಸಲ್ಪಟ್ಟ ಅವರು ತನ್ನ ಸಂಗೀತ ಜೀವನದಲ್ಲಿ ಎದುರಿಸು ತ್ತಿರುವ ಸವಾಲುಗಳನ್ನು ಕೇಂದ್ರಬಿಂದುವಾಗಿಸಿಕೊಂಡ ಕಥೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.