Mulki: ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಗೂಡ್ಸ್ ಲಾರಿ
Team Udayavani, Apr 14, 2024, 12:22 AM IST
ಮೂಲ್ಕಿ: ಇಲ್ಲಿನ ಬಸ್ನಿಲ್ದಾಣ ಸಮೀಪ ಗೂಡ್ಸ್ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಲಾರಿ ಜಖಂಗೊಂಡಿದೆ.
ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಪುಣೆಯಿಂದ ಬಂದಿರುವ ಈ ಲಾರಿ ಗೂಡ್ಸ್ ಖಾಲಿ ಮಾಡಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.