BGML ಜಮೀನು ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸಚಿವ ‌ನಿರಾಣಿ ಸೂಚನೆ

ನೂತನ ಕೈಗಾರಿಕಾ ಟೌನ್‍ಶಿಪ್ ಯೋಜನೆ

Team Udayavani, Nov 30, 2021, 9:00 PM IST

BGML ಜಮೀನು ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸಚಿವ ‌ನಿರಾಣಿ ಸೂಚನೆ

ಬೆಂಗಳೂರು : ಕೋಲಾರ ಜಿಲ್ಲೆಯ ಕೆಜಿಎಪ್ ನ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ( ಬಿಜಿಎಂಎಲ್ ) ಒಡೆತನದಲ್ಲಿರುವ ಭೂಮಿಯ ಸಮೀಕ್ಷಾ ವರದಿಯನ್ನು ಆದಷ್ಟು ಶೀಘ್ರವಾಗಿ
ನೀಡಬೇಕು ಎಂದು ಬೃಹತ್ ಮತ್ತು ‌ಮಧ್ಯಮ ಕೈಗಾರಿಕಾ ಸಚಿವ ‌ಮುರುಗೇಶ್ ಆರ್ ನಿರಾಣಿ ಅವರು ಸೂಚಿಸಿದ್ದಾರೆ.

ಮಂಗಳವಾರ ವಾಣಿಜ್ಯ ಮತ್ತು ಕೈಗಾರಿಕಾ, ಭಾರತ್ ಗೋಲ್ಡ್ ಮೈನ್ಸ್, ಭೂ ಮಾಪನ ಇಲಾಖೆ, ಗಣಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ನ ಬಳಕೆಯಾಗದೆ ಖಾಲಿ ಇರುವ ಸುಮಾರು 3212 ಎಕರೆ ಜಮೀನಿನಲ್ಲಿ ಹೊಸದಾಗಿ ಕೈಗಾರಿಕಾ ಟೌನ್‍ಶಿಪ್ ನಿರ್ಮಾಣ ಮಾಡುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ.

ಕೆಜಿಎಪ್ ಹಾಗೂ ಬಂಗಾರಪೇಟೆಯಲ್ಲಿ ಬಿಜಿಎಂಎಲ್ ನಲ್ಲಿರುವ ಭೂಮಿಯ ಸಮೀಕ್ಷೆ ನಡೆಸಿ ಅತೀ ಶೀಘ್ರವಾಗಿ ‌ ವರದಿಯನ್ನು ನೀಡಬೇಕು ‌ಎಂದು ಭೂಮಾಪನ ಕಂದಾಯ ಹಾಗೂ ಭೂ ದಾಖಲೆಗಳ ಆಯುಕ್ತ ಮನೀಷ್ ಮೌದ್ಗೀಲ್ ಅವರಿಗೆ ಸೂಚಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ವಿಳಂಬ ಮಾಡದೆ, ಕೂಡಲೇ ಸಮೀಕ್ಷಾ ಕಾರ್ಯವನ್ನು ಆರಂಭಿಸಬೇಕು.15 ದಿನದೊಳಗೆ ‌ವರದಿಯನ್ನು ನೀಡಿದರೆ, ಕೇಂದ್ರ ಸಚಿವ ‌ಸಂಪುಟ ಸಭೆಯ ತೀರ್ಮಾನವನ್ನು ‌ನೋಡಿಕೊಂಡು ನಂತರ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳೋಣ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಈಗಾಗಲೇ ಸುಮಾರು 2 ಸಾವಿರ ಎಕರೆ ಜಮೀನನ್ನು ಸಮೀಕ್ಷೆ ನಡೆಸಲಾಗಿದ್ದು, ಬಾಕಿ ಇರುವ ಅಂದಾಜು 3 ಸಾವಿರಕ್ಕೂ ಹೆಚ್ಚಿನ ಜಮೀನಿನ ‌ಸಮೀಕ್ಷಾ ಕಾರ್ಯ ಕೈಗೆತ್ತಿಕೊಳ್ಳಬೇಕು ಎಂದು ನಿದೇರ್ಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

ಇದೇ ಪ್ರದೇಶದಲ್ಲಿ ‌ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಕೂಡ ಇಲ್ಲಿಯೇ ಹಾದು ಹೋಗುವುದರಿಂದ ಕೈಗಾರಿಕಾ ಬೆಳವಣಿಗೆಗೆ ಸಾಕಷ್ಟು ಸಹಕಾರಿಯಾಗಲಿದೆ. ಟೌನ್ ಶಿಪ್ ನಿರ್ಮಾಣ ಮಾಡಲು ಯೋಗ್ಯವಾಗಿರುವುದರಿಂದ ತ್ವರಿತವಾಗಿ ಸಮೀಕ್ಷೆಯನ್ನು ‌ಮುಗಿಸಬೇಕು ಎಂದು ಸಭೆಯಲ್ಲಿ ಹೇಳಿದ್ದಾರೆ ಎಂದು ವಿಶ್ವಸನೀಯ ಮೂಲಗಳ ಖಚಿತಪಡಿಸಿವೆ.

ಈ ಪ್ರದೇಶವನ್ನು ಕೈಗಾರಿಕಾ ಬಳಕೆಗೆ ಬಳಸಿಕೊಳ್ಳುವ‌ ಸಂಬಂಧ ಕರ್ನಾಟಕದವರೇ ಆದ ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ್ ‌ಜೋಶಿ ಅವರದೊಂದಿಗೆ ತಾವು ಮತ್ತೊಮ್ಮೆ ಮಾತುಕತೆ ನಡೆಸುವುದಾಗಿ ಸಚಿವ ನಿರಾಣಿ ಅವರು ತಿಳಿಸಿದರು. ಕಳೆದ ಆಗಸ್ಟ್‌ ತಿಂಗಳ ನಲ್ಲಿಯೇ ಜೋಷಿ ಅವರನ್ನು ಭೇಟಿಯಾಗಿ ಕೆಜಿಎಪ್ ನಲ್ಲಿ ಟೌನ್‍ಶಿಪ್ ನಿರ್ಮಾಣ ಮಾಡುವ ಬಗ್ಗೆ ಮನವಿ ಪತ್ರದಲ್ಲಿ ಸುದೀರ್ಘವಾಗಿ ವಿವರಿಸಿದ್ದರು.

ಈ ಭೂಮಿಯನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಹಸ್ತಾಂತರ ಮಾಡಿದರೆ, ಹೆಚ್ಚಿನ ಬಂಡವಾಳ ಹೂಡಿಕೆ, ದೊಡ್ಡ ಮಟ್ಟದ ಕೈಗಾರಿಕೆಗಳು ಸ್ಥಾಪನೆಯಾಗಲಿದ್ದು, ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಸೇರಿದಂತೆ ಮತ್ತಿತರ ಭಾಗಗಳಲ್ಲಿ’ ಕೈಗಾರಿಕೆಗಳ ಉತ್ತೇಜನ ಸಾವಿರಾರು ಸ್ಥಳೀಯ ಜನರಿಗೆ ಉದ್ಯೋಗವಕಾಶಗಳು’ ಸೃಷ್ಟಿಯಾಗಲಿವೆ ಎಂದು ತಿಳಿಸಿದರು. ಕೆಜಿಎಪ್ ನಗರವು ರಾಜಧಾನಿ ಬೆಂಗಳೂರಿನಿಂದ ಸುಮಾರು 100 ಕಿ.ಮೀ ವ್ಯಾಪ್ತಿಯಲ್ಲಿದ್ದು, ವಿಶ್ವದರ್ಜೆಯ ರಾಷ್ಟ್ರೀಯ ಹೆದ್ದಾರಿಗಳು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅತ್ಯುತ್ತಮ ರೈಲ್ವೆ ಸಂಪರ್ಕ ಹೊಂದಿದೆ.

ಕೆಜಿಎಪ್ ಚಿನ್ನದ ಗಣಿಯು ಅತ್ಯಂತ ಪುರಾತನವಾದ ಗಣಿ ಪ್ರದೇಶವಾಗಿದ್ದು, ಬ್ರಿಟಿಷರ ಕಾಲದಿಂದಲೇ ಇಲ್ಲಿ ಗಣಿಗಾರಿಕೆಯನ್ನು ನಡೆಸಲಾಗುತ್ತಿತು. 2001 ರಿಂದ ‌ ಬಿಜಿಎಂಎಲ್ ಸಂಪೂರ್ಣವಾಗಿ ಬಂದ್ ಆಗಿರುವ ಸ್ಥಗಿತಗೊಂಡಿದೆ.

ಇದನ್ನೂ ಓದಿ : ಗುರುದ್ವಾರದಲ್ಲಿ ಪೋಸ್‌ ಕೊಟ್ಟು ಪಜೀತಿಗೆ ಸಿಲುಕಿದ ಪಾಕ್‌ ಮಾಡೆಲ್‌

ಸಭೆಯಲ್ಲಿ ಹಾಜರಿದ್ದ ಭೂ ಮಾಪನ ಹಾಗೂ ಭೂ ದಾಖಲೆಗಳ‌ ಆಯುಕ್ತ ಮನೀಷ್ ಮೌದ್ಗಲ್ , ಆಧುನಿಕ ತಂತ್ರಜ್ಞಾನದ ನೆರವು ಪಡೆದುಕೊಂಡು ಎಷ್ಟು ಸಾಧ್ಯವೋ, ಅಷ್ಟು ಬೇಗ ಸಮೀಕ್ಷೆಯನ್ನು ನಡೆಸಿ ವರದಿಯನ್ನು ನೀಡುವುದಾಗಿ ಸಭೆಗೆ ತಿಳಿಸಿದರು ಇಲಾಖೆಯ ನಂಬಲರ್ಹ ಮೂಲಗಳಿಂದ ತಿಳಿದು ಬಂದಿದೆ.

ಕೇಂದ್ರ ಸರ್ಕಾರದ ಖನಿಜ ಪರಿಶೋಧನೆ ನಿಗಮದ ವ್ಯವಸ್ಥಾಪಕ ನಿದೇರ್ಶಕ ಡಾ. ರಂಜನ್ ರಾಥ್ ಮಾತನಾಡಿ, ಪ್ರಸ್ತುತ ಸದ್ಯಕ್ಕೆ ಇಲ್ಲಿ ಚಿನ್ನದ ನಿಕ್ಷೇಪ ಸಿಗದಿರುವ ಕಾರಣ, ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ ಎಂದು ‌ತಿಳಿಸಿದರು.

ಸಭೆಯಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ,ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಗಣಿ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ‌ಪಾಂಡೆ ಕೆಐಎಡಿಬಿ ಸಿಇಒ ಡಾ.ಶಿವಶಂಕರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಪರ್ಯಾಯ ಶ್ರೀಗಳಿಂದ ಉಗ್ರಾಣ ವೀಕ್ಷಣೆ

ಪರ್ಯಾಯ ಶ್ರೀಗಳಿಂದ ಉಗ್ರಾಣ ವೀಕ್ಷಣೆ

ದಂಡತೀರ್ಥ ಮಠ: ಕೃಷ್ಣಾಪುರ ಶ್ರೀಗಳ ತೀರ್ಥಸ್ನಾನಕ್ಕೆ ಸಜ್ಜು

ದಂಡತೀರ್ಥ ಮಠ: ಕೃಷ್ಣಾಪುರ ಶ್ರೀಗಳ ತೀರ್ಥಸ್ನಾನಕ್ಕೆ ಸಜ್ಜು

ನೊವಾಕ್‌ ಜೊಕೋವಿಕ್‌ ಇಲ್ಲದ ಆಸ್ಟ್ರೇಲಿಯನ್‌ ಓಪನ್‌

ನೊವಾಕ್‌ ಜೊಕೋವಿಕ್‌ ಇಲ್ಲದ ಆಸ್ಟ್ರೇಲಿಯನ್‌ ಓಪನ್‌

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ ಮೇಲೆ ಸವಾರಿ ಮಾಡಿದ ಪಾಟ್ನಾ ಪೈರೇಟ್ಸ್‌

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ ಮೇಲೆ ಸವಾರಿ ಮಾಡಿದ ಪಾಟ್ನಾ ಪೈರೇಟ್ಸ್‌

ಮಣಿಪಾಲ: ಮಂಚಿಯ ರಾಜೀವನಗರದ ಮೀಸಲು ಅರಣ್ಯದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ದುರಂತ

ಮಣಿಪಾಲ: ಮಂಚಿ ರಾಜೀವನಗರದ ಮೀಸಲು ಅರಣ್ಯದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ದುರಂತ

ಫೇಸ್‌ಬುಕ್‌ ಸರಿಪಡಿಸಿ ಕೊಡುವುದಾಗಿ ವಂಚನೆ

ಫೇಸ್‌ಬುಕ್‌ ಸರಿಪಡಿಸಿ ಕೊಡುವುದಾಗಿ ವಂಚನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಫೇಸ್‌ಬುಕ್‌ ಸರಿಪಡಿಸಿ ಕೊಡುವುದಾಗಿ ವಂಚನೆ

ಫೇಸ್‌ಬುಕ್‌ ಸರಿಪಡಿಸಿ ಕೊಡುವುದಾಗಿ ವಂಚನೆ

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಸಾಧ್ಯವಿಲ್ಲ: ಡಾ| ಅಶ್ವತ್ಥ ನಾರಾಯಣ

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಸಾಧ್ಯವಿಲ್ಲ: ಡಾ| ಅಶ್ವತ್ಥ ನಾರಾಯಣ

11ನೇ ವಯಸ್ಸಿಗೆ 50ಕೆ.ಜಿ ಭಾರ ಎತ್ತುವ ಮೂಲಕ ಭವಿಷ್ಯದ ಭರವಸೆ ಮೂಡಿಸಿದ ಅವಳಿ ಸಹೋದರರು

11ನೇ ವಯಸ್ಸಿಗೆ 50ಕೆ.ಜಿ ಭಾರ ಎತ್ತಿದ ಅವಳಿ ಸಹೋದರರು : ಇಬ್ಬರ ಸಾಹಸಕ್ಕೆ ಭಾರಿ ಮೆಚ್ಚುಗೆ

Covid test

ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ 20% ಸಮೀಪಕ್ಕೆ : ಇಂದು 13 ಸಾವು

ಕುಳಗೇರಿ ಕ್ರಾಸ್ : ಹೆಸರಿಗಷ್ಟೇ ವೀಕೆಂಡ್ ಕರ್ಫ್ಯೂ, ಯಾವ ಕಾನೂನಿಗೂ ಇಲ್ಲಿ ಡೋಂಡ್ ಕೇರ್

ಕುಳಗೇರಿ ಕ್ರಾಸ್ : ಹೆಸರಿಗಷ್ಟೇ ವೀಕೆಂಡ್ ಕರ್ಫ್ಯೂ, ಯಾವ ಕಾನೂನಿಗೂ ಇಲ್ಲಿ ಡೋಂಡ್ ಕೇರ್

MUST WATCH

udayavani youtube

ಸಾಲಿಗ್ರಾಮ ಗುರುನರಸಿಂಹ, ಆಂಜನೇಯ ರಥೋತ್ಸವ ಸಂಪನ್ನ

udayavani youtube

ನನ್ನಮ್ಮ ಸೂಪರ್ ಸ್ಟಾರ್ ‘ಸಮನ್ವಿ’ ಅಸ್ತಿ ಕಾವೇರಿ ನದಿಯಲ್ಲಿ ವಿಸರ್ಜನೆ

udayavani youtube

ಮೈಸೂರು ಮೃಗಾಲಯದಲ್ಲಿ ಹುಟ್ಟುಹಬ್ಬ ಆಚರಣೆಗೊರಿಲ್ಲಾ ‘Demba’ ಗೆ ಖುಷಿಯೋ ಖುಷಿ

udayavani youtube

ವಿವಿಧ ಮುಹೂರ್ತಗಳು ಪರ್ಯಾಯದ ವಿಶೇಷತೆ

udayavani youtube

ಮೂಡಿಗೆರೆ : ಇಡೀ ಹಳ್ಳಿಯ ಜನರಿಗೆ ಕೆಮ್ಮು! ಇದು ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಫಲ

ಹೊಸ ಸೇರ್ಪಡೆ

“ಸಂಸ್ಕೃತದಲ್ಲಿ ಅಭಿನಂದನೆ ಹೆಮ್ಮೆಯ ವಿಚಾರ’

“ಸಂಸ್ಕೃತದಲ್ಲಿ ಅಭಿನಂದನೆ ಹೆಮ್ಮೆಯ ವಿಚಾರ’

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಅಶ್ವತ್ಥ ಎಲೆಯಲ್ಲಿ ಮೂಡಿಬಂದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು

ಅಶ್ವತ್ಥ ಎಲೆಯಲ್ಲಿ ಮೂಡಿಬಂದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು

ಪರ್ಯಾಯ ಶ್ರೀಗಳಿಂದ ಉಗ್ರಾಣ ವೀಕ್ಷಣೆ

ಪರ್ಯಾಯ ಶ್ರೀಗಳಿಂದ ಉಗ್ರಾಣ ವೀಕ್ಷಣೆ

ದಂಡತೀರ್ಥ ಮಠ: ಕೃಷ್ಣಾಪುರ ಶ್ರೀಗಳ ತೀರ್ಥಸ್ನಾನಕ್ಕೆ ಸಜ್ಜು

ದಂಡತೀರ್ಥ ಮಠ: ಕೃಷ್ಣಾಪುರ ಶ್ರೀಗಳ ತೀರ್ಥಸ್ನಾನಕ್ಕೆ ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.