ಮೈಸೂರು: ಅಪರಿಚಿತ ವ್ಯಕ್ತಿಯ ಕೊಲೆ ಶಂಕೆ! ಸ್ಥಳದಲ್ಲಿತ್ತು 10ಕ್ಕೂ ಹೆಚ್ಚು ಗುರುತಿನ ಚೀಟಿಗಳು
ರಕ್ತದ ಮಡುವಿನಲ್ಲಿ ಬಿದ್ದ ವ್ಯಕ್ತಿ: ಕೊಲೆ ಶಂಕೆ
Team Udayavani, Sep 30, 2020, 12:42 PM IST
ಮೈಸೂರು : ಮೈಸೂರು: ನಗರದ ಮೆಟ್ರೋಪೋಲ್ ವೃತ್ತದ ಬಸ್ ನಿಲ್ದಾಣದಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದ್ದು ಮೇಲ್ನೋಟಕ್ಕೆ ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ಅಪರಿಚಿತ ವ್ಯಕ್ತಿ ಮಾನಸಿಕ ಅಸ್ವಸ್ಥ ಹಾಗೂ ಭಿಕ್ಷುಕ ಇರಬಹುದು ಎನ್ನಲಾಗಿದೆ. ಮೆಟ್ರೊಪೋಲ್ ಬಸ್ ನಿಲ್ದಾಣದ ಬಳಿ ರಕ್ತದ ಮಡುವಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಅಲ್ಲದೇ, ಮೃತ ವ್ಯಕ್ತಿಯ ದೇಹದ ಬಳಿ ಹತ್ತಕ್ಕೂ ಹೆಚ್ಚು ಜನರ ವಿವಿಧ ಗುರುತಿನ ಚೀಟಿಗಳು (ಬೇರೆಯವರ ಆಧಾರ್, ಮತದಾನ ಗುರುತಿನ ಚೀಟಿ, ಡ್ರೈವಿಂಗ್ ಲೈಸೆನ್ಸ್) ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.
ಇಷ್ಟೊಂದು ಗುರುತಿನ ಚೀಟಿಗಳು ಈತನ ಕಿಸೆಯೊಳಗೆ ಹೇಗೆ ಬಂದಿದೆ ಎಂಬುದೇ ವಿಚಿತ್ರ, ಎಲ್ಲದಕ್ಕೂ ತನಿಖೆ ಬಳಿಕವೇ ಉತ್ತರ ಸಿಗಬೇಕಾಗಿದೆ.
ಇದನ್ನೂ ಓದಿ:ಬಾಬ್ರಿ ಅಂತಿಮ ತೀರ್ಪಿನಲ್ಲೇನಿದೆ?: ರಿಲೀಫ್-ಆಡ್ವಾಣಿ ಸೇರಿ ಎಲ್ಲಾ ಆರೋಪಿಗಳಿಗೆ ಕ್ಲೀನ್ ಚಿಟ್
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಜರಂಗದಳದ ಬಗ್ಗೆ ಮಾತಾನಾಡುವ ನೈತಿಕ ಹಕ್ಕು ಇವರಿಗಿಲ್ಲ: ರಘು ಸಕಲೇಶಪುರ ವಾಗ್ದಾಳಿ
ರಾಷ್ಟ್ರಗೀತೆಯನ್ನು ನಮಗೆ ಮುತಾಲಿಕ್ ಹೇಳಿ ಕೊಡಬೇಕಾ?: ಜಮೀರ್ ಅಹ್ಮದ್ ಕಿಡಿ
ಒಬಿಸಿಗಳಿಗೆ ಆದ್ಯತೆ ನೀಡಿದ್ರೂ; ನ್ಯಾಯ ಸಿಗೋದು ಅನುಮಾನ
ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಕದ್ದವ ಮೂರು ತಿಂಗಳ ಬಳಿಕ ಸಿಕ್ಕಿ ಬಿದ್ದಿದ್ದೇಗೆ ?
ಸೈದ್ದಾಂತಿಕ ಬದ್ಧತೆಯ ಬಗ್ಗೆ ರಾಹುಲ್ ಗಾಂಧಿ ಬಿಡಿಸಿ ಹೇಳಬೇಕು: ಕುಮಾರಸ್ವಾಮಿ