
ಉಡುಪಿ : ನಗರ ಪ್ರದೇಶದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ನಮ್ಮ ಕ್ಲಿನಿಕ್
Team Udayavani, Aug 28, 2022, 11:17 AM IST

ಉಡುಪಿ : ನಗರ ಪ್ರದೇಶದ ಸಾರ್ವಜನಿಕರಿಗೆ ಸರಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹೊರತುಪಡಿಸಿ, ನಗರ ಮತ್ತು ಪಟ್ಟಣ ಪ್ರದೇಶದ ವಾರ್ಡ್‌ನಲ್ಲಿ ಉತ್ತಮ, ತ್ವರಿತವಾಗಿ ಆರೋಗ್ಯ ಸೇವೆಗಳನ್ನು ದೊರಕಿಸುವ ಉದ್ದೇಶದಿಂದ ರಾಜ್ಯ ಸರಕಾರವು ರಾಜ್ಯಾದ್ಯಂತ ನಮ್ಮ ಕ್ಲಿನಿಕ್‌ಗಳನ್ನು ತೆರೆಯಲು ಉದ್ದೇಶಿಸಿದೆ. ಉಡುಪಿ ಜಿಲ್ಲೆಯಲ್ಲಿ 6 ನಮ್ಮ ಕ್ಲಿನಿಕ್ ಆರಂಭಕ್ಕೆ ಎಲ್ಲ ಸಿದ್ಧತೆ ನಡೆಯುತ್ತಿದೆ.
ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ 3, ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ 1 ಮತ್ತು ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ 2 ನಮ್ಮ ಕ್ಲಿನಿಕ್ ತೆರೆಯಲು ಸರಕಾರ ಅನುಮತಿ ನೀಡಿದೆ. ಸಿಬಂದಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಉತ್ತಮ ಗುಣಮಟ್ಟದ ಆರೋಗ್ಯ ಸೇವೆ, ನಿರಂತರ ಆರೋಗ್ಯ ಪಾಲನೆಯ ಜತೆಗೆ ಎಲ್ಲ ಹಂತದ ಸೇವೆಗಳನ್ನು ನೀಡುವ ಆಸ್ಪತ್ರೆಗಳಿಗೆ ರೆಫರಲ್ ಸೇವೆಗಳ ಸಂಪರ್ಕ ಕಲ್ಪಿಸುವ ಉದ್ದೇಶವನ್ನು ನಮ್ಮ ಕ್ಲಿನಿಕ್ ಹೊಂದಿದೆ. ನಗರ ಪ್ರದೇಶದಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ವಿಕೇಂದ್ರಿಕರಿಸುವ ಜತೆಗೆ ಸಾಂಕ್ರಾಮಿಕ ರೋಗಗಳ ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸಲಿದೆ.
ನಮ್ಮ ಕ್ಲಿನಿಕ್ ವಿಶೇಷತೆ
ನಮ್ಮ ಕ್ಲಿನಿಕ್‌ನಲ್ಲಿ ತಲಾ ಒಬ್ಬರು ವೈದ್ಯರು, ನರ್ಸ್, ಲ್ಯಾಬ್ ಟೆಕ್ನೀಶಿಯನ್ ಹಾಗೂ ಡಿ ಗ್ರೂಪ್ ಸಿಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಉಚಿತ ಆರೋಗ್ಯ ತಪಾಸಣೆ ಮತ್ತು ಔಷಧ ನೀಡಲಾಗುವುದು. ರಕ್ತ, ಮೂತ್ರ ಪರೀಕ್ಷೆ ಸೇರಿದಂತೆ ಲ್ಯಾಬ್‌ನಲ್ಲಿ 14 ರೀತಿಯ ಸೇವೆ ದೊರೆಯಲಿದೆ. ಬೆಳಗ್ಗೆ 9ರಿಂದ ಸಂಜೆ 4.30 ರವರೆಗೆ ಈ ಕ್ಲಿನಿಕ್ ಕಾರ್ಯ ನಿರ್ವಹಿಸಲಿದೆ. ಅಗತ್ಯ ಇದ್ದವರಿಗೆ ಇ-ಸಂಜೀವಿನಿ ಮತ್ತು ಟೆಲಿ ಕೌನ್ಸೆಲಿಂಗ್ ವ್ಯವಸ್ಥೆಯೂ ಲಭ್ಯವಿದೆ.
ಸಂದರ್ಶನ ಪೂರ್ಣ
ನಮ್ಮ ಕ್ಲಿನಿಕ್ ಆರಂಭದಿಂದ ನಗರ ಪ್ರದೇಶದ ಜನತೆ, ತ್ವರಿತವಾಗಿ ಉಚಿತ ಆರೋಗ್ಯ ತಪಾ ಸಣೆ, ಚಿಕಿತ್ಸೆ ಪಡೆದು ಉತ್ತಮ ಆರೋಗ್ಯ ಕಾಪಾಡಿ ಕೊಳ್ಳಲು ಸಾಧ್ಯವಾಗಲಿದೆ. ಉಡುಪಿ ಜಿಲ್ಲೆಯಲ್ಲಿ ನಮ್ಮ ಕ್ಲಿನಿಕ್ ಸಿಬಂದಿ ನೇಮಕಕ್ಕೆ ಈಗಾಗಲೇ ಸಂದರ್ಶನ ನಡೆಸಲಾಗಿದೆ. ಶೀಘ್ರವೇ ನಮ್ಮ ಕ್ಲಿನಿಕ್‌ಗಳು ಕಾರ್ಯಾರಂಭವಾಗಿ ವೈದ್ಯರು, ಸಿಬಂದಿ ನಗರದ ಜನರ ಆರೋಗ್ಯ ಸೇವೆಗೆ ಲಭ್ಯವಾಗಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಅಧಿ ಕಾರಿ ಡಾ| ನಾಗಭೂಷಣ ಉಡುಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
