ಸೆಪ್ಟಂಬರ್ ಮೊದಲ ವಾರ ಎನ್‌ಇಪಿ ಪಠ್ಯಕ್ರಮ : ಸಚಿವ ಡಾ| ಅಶ್ವತ್ಥನಾರಾಯಣ
Team Udayavani, Aug 28, 2021, 6:50 AM IST
ಬೆಂಗಳೂರು: ಪದವಿ ವಿದ್ಯಾರ್ಥಿಗಳಿಗೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯ ಪಠ್ಯಕ್ರಮ ಸೆಪ್ಟಂಬರ್ ಮೊದಲ ವಾರದಲ್ಲಿ ಸಿದ್ಧವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ ಹೇಳಿದ್ದಾರೆ.
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಸಂಬಂಧಿಸಿ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ಶುಕ್ರವಾರ ನಡೆದ ಪತ್ರಿಕಾ ಸಂಪಾದಕರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.
ನಮ್ಮ ರಾಜ್ಯದಲ್ಲೇ ಮೊದಲು ಎನ್‌ಇಪಿ ಅನುಷ್ಠಾನ ಆಗಬೇಕು ಎಂಬ ತರಾತುರಿ ಇಲ್ಲ. ಕೋವಿಡ್ ಸವಾಲುಗಳ ಮಧ್ಯೆ ಅನುಷ್ಠಾನ ಕಾರ್ಯ ಸದ್ದಿಲ್ಲದೆ ನಡೆದಿದೆ. ಎನ್‌ಇಪಿ ಅನುಷ್ಠಾನಕ್ಕೆ 15 ವರ್ಷಗಳ ಕಾಲಾವಕಾಶವಿದೆ. ಆದರೆ ರಾಜ್ಯ ದಲ್ಲಿ 10 ವರ್ಷಗಳೊಳಗೆ ಇದನ್ನು ಅನುಷ್ಠಾನಗೊಳಿಸಬೇಕು ಎಂಬ ಗುರಿ ನಮ್ಮದು. ವಿದ್ಯಾರ್ಥಿಗಳ ಭವಿಷ್ಯವನ್ನು ಕೇಂದ್ರೀಕರಿಸಿ ಹೊಸ ಶೈಕ್ಷಣಿಕ ನೀತಿ ರೂಪಿಸಲಾಗಿದೆ ಎಂದರು.
ಶಿಕ್ಷಣ ಕ್ಷೇತ್ರದಲ್ಲಿ ಆಯ್ಕೆ
ಎನ್‌ಇಪಿ ಶಿಕ್ಷಣ ಕ್ಷೇತ್ರದಲ್ಲಿ ಆಯ್ಕೆಗಳನ್ನು ನೀಡಲಿದ್ದು, ವಿದ್ಯಾರ್ಥಿಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಅನುಕೂಲವಾಗಲಿದೆ ಎಂದರು.
ಪೂರ್ವ ಪ್ರಾಥಮಿಕ ಹಂತದಲ್ಲಿ ಎನ್‌ಇಪಿ ಅನುಷ್ಠಾನ ಸಂಬಂಧ ಕಲಬುರಗಿಯಲ್ಲಿ ಪ್ರಾಯೋಗಿಕ ತರಗತಿ ನಡೆಯುತ್ತಿದೆ ಎಂದು ಸಚಿವರು ತಿಳಿಸಿದರು.
ಅತಿಥಿ ಉಪನ್ಯಾಸಕರ ನೇಮಕ
ರಾಜ್ಯದಲ್ಲಿ ಈಗಾಗಲೇ ಸ್ಮಾರ್ಟ್ ಕ್ಲಾಸ್ ರೂಮ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸುಮಾರು 8 ಸಾವಿರ ಶಿಕ್ಷಕರ ಅಗತ್ಯವಿದೆ. 17 ಸಾವಿರ ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆ ಮುಂದಿನ ದಿನಗಳಲ್ಲಿ ನಡೆಯಲಿದೆ. ಶಿಕ್ಷಣ ವ್ಯವಸ್ಥೆಯನ್ನು ತರಗತಿಯ ಕೋಣೆಯಾಚೆ ಒಯ್ಯಬೇಕು ಎಂಬುದು ನಮ್ಮ ಆಶಯ. ಕಾಲೇಜುಗಳಲ್ಲಿ ಉಪನ್ಯಾಸಕರಿಗೆ ತರಬೇತಿ ನೀಡಲಾಗುತ್ತಿದ್ದು, ವಿ.ವಿ. ಉಪಕುಲಪತಿಗಳ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ನೇಮಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಐದು ಮಂದಿ ಪ್ರಾಣಾಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ