ಸಾರಿಗೆ ಬಸ್ಸುಗಳಲ್ಲಿ ಅಪಘಾತ ಮುನ್ಸೂಚನೆಗೆ ಆಧುನಿಕ ವ್ಯವಸ್ಥೆ ಜಾರಿ: ಡಿಸಿಎಂ ಸವದಿ

Team Udayavani, Oct 7, 2020, 6:03 PM IST

ಸಾರಿಗೆ ಬಸ್ಸುಗಳಲ್ಲಿ ಅಪಘಾತ ಮುನ್ಸೂಚನೆಗೆ ಆಧುನಿಕ ವ್ಯವಸ್ಥೆ ಜಾರಿ: ಡಿಸಿಎಂ ಸವದಿ

ಬೆಂಗಳೂರು : ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಅಪಘಾತಗಳನ್ನು ತಪ್ಪಿಸಲು ವಿಶೇಷ ವ್ಯವಸ್ಥೆ ಜಾರಿಗೆ ಬರಲಿವೆ. ಈಗ ಪ್ರಾಯೋಗಿಕ ಹಂತದಲ್ಲಿರುವ ಈ ಕ್ರಮಗಳು ಅನುಷ್ಠಾನಗೊಂಡರೆ ಬಸ್ಸುಗಳ ಎದುರು ಆಕಸ್ಮಿಕವಾಗಿ ಇತರ ವಾಹನಗಳು ಅಥವಾ ವ್ಯಕ್ತಿಗಳು ಅಡ್ಡ ಬಂದಲ್ಲಿ ಚಾಲಕರಿಗೆ ಎಚ್ಚರಿಕೆಯ ಸೂಚನೆ ನೀಡುವ ಮತ್ತು ಸ್ವಯಂಚಾಲಿತವಾಗಿಯೇ ಬ್ರೇಕ್ ಹಾಕಿ ಅಪಘಾತ ತಪ್ಪಿಸುವುದಕ್ಕೆ ಸಹಾಯವಾಗುತ್ತದೆ ಎಂದು ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಅವರು ಮಾತನಾಡಿದರು.

ಇದನ್ನೂ ಓದಿ:ಅಕ್ರಮ ಆಸ್ತಿ ಸಂಪಾದಿಸಿದ ಡಿಕೆ ಸಹೋದರರನ್ನು ಜೈಲಿಗೆ ಹಾಕಿ : ಸರಕಾರಕ್ಕೆ ಹಿರೇಮಠ ಆಗ್ರಹ

ಅಪಘಾತಗಳ ಪರಿಹಾರವಾಗಿ ರಾಜ್ಯದಲ್ಲಿ ಪ್ರತಿವರ್ಷ ಸುಮಾರು 100 ಕೋಟಿ ರೂಪಾಯಿಗಿಂತ ಹೆಚ್ಚು ಹಣ ನಮ್ಮ ಸಾರಿಗೆ ಸಂಸ್ಥೆಗಳಿಂದ ವ್ಯಯವಾಗುತ್ತಿದೆ. ಅಷ್ಟೇಅಲ್ಲ, ಅನೇಕ ಸಾವು-ನೋವುಗಳಿಗೂ ಈ ಅಪಘಾತಗಳು ಕಾರಣವಾಗುತ್ತಿವೆ. ಹಲವು ಸಂದರ್ಭಗಳಲ್ಲಿ ಇತರ ವಾಹನ ಚಾಲಕರು ನಡೆಸುವ ನಿರ್ಲಕ್ಷ್ಯದ ಚಾಲನೆಯಿಂದಾಗಿ ಉಂಟಾಗುವ ಅಪಘಾತಗಳಲ್ಲಿ ವಿನಾಕಾರಣ ನಮ್ಮ ಸರ್ಕಾರಿ ಸಾರಿಗೆ ಸಂಸ್ಥೆಗಳು ಪರಿಹಾರ ನೀಡುವಂತಹ ಸಂದರ್ಭಗಳೂ ಎದುರಾಗಿವೆ. ಇವುಗಳನ್ನು ತಪ್ಪಿಸಲು ಅಪಘಾತಗಳ ಮುನ್ಸೂಚನೆ ನೀಡುವಂಥ ಉಪಕರಣಗಳನ್ನು ಬಸ್ಸುಗಳಲ್ಲಿ ಅಳವಡಿಸಲು ಸೂಚಿಸಲಾಗಿತ್ತು. ಅದರಂತೆ ಕೆಲವು ಹೈಟೆಕ್ ಸಂಸ್ಥೆಗಳೊಂದಿಗೆ ನಮ್ಮ ಸಾರಿಗೆ ಅಧಿಕಾರಿಗಳು ಕಾರ್ಯನಿರತರಾಗಿದ್ದಾರೆ. ಈಗಾಗಲೇ ಇಂತಹ ಉಪಕರಣಗಳನ್ನು ಅಭಿವೃದ್ಧಿಪಡಿಸಿದ ಸಂಸ್ಥೆಗಳ ಸಹಯೋಗದೊಂದಿಗೆ ಪ್ರಾಯೋಗಿಕವಾಗಿ ಈ ತಂತ್ರಜ್ಞಾನವನ್ನು ಶೀಘ್ರದಲ್ಲಿಯೇ ಪಡೆದುಕೊಳ್ಳಲು ಚಿಂತಿಸಲಾಗಿದೆ ಎಂದು ಶ್ರೀ ಸವದಿ ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ:ಸ್ನೇಹಿತರ ಜೊತೆ ಈಜಲು ಹೋದ ಯುವಕ ನೀರಿನ ಸುಳಿಗೆ ಸಿಲುಕಿ ಸಾವು

ಕೆಲವು ದುಬಾರಿ ಖಾಸಗಿ ಕಾರುಗಳಲ್ಲಿ ಇಂತಹ ತಂತ್ರಜ್ಞಾನ ಅಳವಡಿಸಿರುವುದರಿಂದ ರಾತ್ರಿ ವೇಳೆಯಲ್ಲಿ ಒಂದು ವೇಳೆ ಚಾಲಕರಿಗೆ ನಿದ್ದೆಯ ಮಂಪರು ಕವಿದಂತಾದರೆ ತಕ್ಷಣವೇ ಎಚ್ಚರಿಕೆಯ ಸೂಚನೆ ನೀಡುವಂತಹ ಮತ್ತು ಆಕಸ್ಮಿಕವಾಗಿ ವಾಹನಗಳು ಅಥವಾ ವ್ಯಕ್ತಿಗಳು ಎದುರಿಗೆ ಅಡ್ಡಬಂದರೆ ತಂತಾನಾಗಿಯೇ ಬ್ರೇಕ್ ಹಾಕುವಂತಹ ವ್ಯವಸ್ಥೆ ಜಾರಿಗೆ ಬಂದಿದೆ. ಇಂತಹ ಆಧುನಿಕ ಪ್ರಯೋಗ ನಮ್ಮ ಸರ್ಕಾರಿ ಸಾರಿಗೆ ಬಸ್ಸುಗಳಲ್ಲೂ ಯಶಸ್ವಿಯಾದರೆ ಹಲವು ರೀತಿಯ ಅನುಕೂಲ ಸಾಧ್ಯವೆಂದು ಶ್ರೀ ಸವದಿ ಅವರು ತಿಳಿಸಿದರು.

ಇದನ್ನೂ ಓದಿ:ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳ: ಲಾಕ್‌ಡೌನ್‌ ಸಮಯದಲ್ಲಿ ಪ್ರಕರಣಗಳಲ್ಲಿ ಏರಿಕೆ !

ಲಾಕ್‍ಡೌನ್ ನಂತರದಲ್ಲಿ ಈಗಾಗಲೇ ಶೇಕಡಾ 60 ರಷ್ಟು ಬಸ್ ಸಂಚಾರಗಳನ್ನು ಪ್ರಾರಂಭಿಸಲಾಗಿದೆ. ಮುಂದಿನ ತಿಂಗಳು ಕೊರಿಯರ್ ಸೇವೆಯನ್ನೂ ನಮ್ಮ ಸಾರಿಗೆ ಸಂಸ್ಥೆಗಳ ಮೂಲಕ ಪ್ರಾರಂಭಿಸಲಾಗುವುದು. ಈಗಾಗಲೇ ಸಾರಿಗೆ ಸಂಸ್ಥೆಗಳಲ್ಲಿ ಉಳಿತಾಯದ ಕ್ರಮವಾಗಿ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಲಾಗಿದೆ. ಹೊಸ ಸಿಬ್ಬಂದಿಗಳ ನೇಮಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಶ್ರೀ ಸವದಿ ಅವರು ವಿವರಿಸಿದರು.

ಇಂದಿನ ಸಭೆಯಲ್ಲಿ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಾದ ಶ್ರೀ ಅಂಜುಂ ಪರ್ವೇಜ್, ಕ.ರಾ.ರ.ಸಾ.ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಶಿವಯೋಗಿ ಕಳಸದ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಭದ್ರತಾ ಮತ್ತು ಜಾಗೃತಾ ನಿರ್ದೇಶಕರಾದ ಡಾ. ಅರುಣ್, ಈ.ಕ.ರ.ಸಾ.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೂರ್ಮಾರಾವ್, ವಾ.ಕ.ರ.ಸಾ.ಸಂಸ್ಥೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.