ದಲಿತ ಮುಖ್ಯಮಂತ್ರಿ ವಿಚಾರ ಅಲ್ಲಗಳೆದ ಸಿದ್ದರಾಮಯ್ಯ; ಕುಮಾರಸ್ವಾಮಿಗೆ ತಿರುಗೇಟು

Team Udayavani, Dec 3, 2019, 10:46 AM IST

ಮೈಸೂರು: ಮಲ್ಲಿಕಾರ್ಜುನ ಖರ್ಗೆ ಡಿಸೆಂಬರ್ 9ರ ನಂತರ ಸಿಹಿ ಹಂಚುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಹ ಯಾವುದೇ ವಿದ್ಯಮಾನ ಇಲ್ಲ ಎಂದಿದ್ದಾರೆ.

ಮೈಸೂರಿನ ಮಂಡಕಳ್ಳಿ ವಿಮಾನದಲ್ಲಿ ಮಾತನಾಡಿದ ಸಿದ್ದರಾಮಯ್ಯ,  ಸಿಹಿ ಹಂಚುತ್ತಾರೆ ಎಂದರೆ 15 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಅಂತ ಅರ್ಥ. ಕುಮಾರಸ್ವಾಮಿ ಏನು ಭಾಷಣ ಮಾಡಿದ್ದಾರೋ ಗೊತ್ತಿಲ್ಲ. ನಿಮಗೆ ಬೇಕಾದಂತೆ ಅರ್ಥ ಮಾಡಿಕೊಳ್ಳಬೇಡಿ ಎಂದು ಕಿಡಿಕಾರಿದರು.

ಮುಂಬೈ ದುಡ್ಡು, ಕಾಂಗ್ರೆಸ್‌ಗೆ ವೋಟು

ಬಿಜೆಪಿಯವರು ಸಿಕ್ಕಾಪಟ್ಟೆ ದುಡ್ಡು ಕೊಟ್ಟಿದ್ದಾರೆ. ಇವರೆಲ್ಲ ಮತದಾರರಿಗೆ ಬೇಕಾಬಿಟ್ಟಿಯಾಗಿ ಖರ್ಚು ಮಾಡುತ್ತಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಬೇಕಾದಷ್ಟು ಹಣ ಖರ್ಚು ಮಾಡುತ್ತಿದ್ದಾರೆ. ಆದರೆ ಜನ ದುಡ್ಡಿಗೆ ಕರಗುವುದಿಲ್ಲ. ಆದ್ದರಿಂದಲೇ ನಾನು ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ದುಡ್ಡು, ಕಾಂಗ್ರೆಸ್‌ಗೆ ವೋಟು ಅಂತ ಹೇಳಿದ್ದೇನೆ ಎಂದರು.

ಪ್ರಚಾರದ ಕೊನೆಯ ದಿನಕ್ಕೆ ತಲುಪಿದ್ದೇವೆ. ಎಷ್ಟು ಕ್ಷೇತ್ರ ಗೆಲ್ಲುತ್ತೇವೆ ಎನ್ನುವುದು ಪ್ರಶ್ನೆಯೇ ಅಲ್ಲ. ಎಲ್ಲ 15 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ