ಯಾವ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ, ಅತೃಪ್ತ ಶಾಸಕರ ಆರೋಪಕ್ಕೆ ರೇವಣ್ಣ

Team Udayavani, Jul 17, 2019, 2:12 PM IST

ಬೆಂಗಳೂರು: ಸಿಲಿಕಾನ್ ನಗರದ ಔಟರ್ ರಿಂಗ್ ರೋಡ್, ಎಲಿವೇಟೆಡ್ ರಸ್ತೆ ಹಾಗೂ ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಸಚಿವ ಎಚ್.ಡಿ.ರೇವಣ್ಣ ಹಸ್ತಕ್ಷೇಪ ನಡೆಸುತ್ತಿದ್ದಾರೆ ಎಂಬ ಅತೃಪ್ತ ಶಾಸಕರ ಆರೋಪಕ್ಕೆ ಬುಧವಾರ ಸ್ಪಷ್ಟನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇವಣ್ಣ, ಎಲಿವೇಟೆಡ್ ರಸ್ತೆ ವಿಚಾರದಲ್ಲಿ ಶಾಸಕ ಮುನಿರತ್ನ ಒಮ್ಮೆ ನನ್ನ ಭೇಟಿಯಾಗಿ ಮನವಿ ಮಾಡಿದ್ದು ನಿಜ.

ಆದರೆ ನಾನು ಈ ಸಂದರ್ಭದಲ್ಲಿ ಸಂಸದ ಡಿಕೆ ಸುರೇಶ್ ಅವರನ್ನು ಭೇಟಿಯಾಗಿ ಚರ್ಚಿಸಿ ಎಂದು ಹೇಳಿದ್ದೆ. ಆ ಬಳಿಕ ಅವರು ನನ್ನ ಬಳಿ ಬಂದಿಲ್ಲ. ಇದರಲ್ಲಿ ನನ್ನ ಕೈವಾಡವೇನೂ ಇಲ್ಲ ಎಂದು ತಿಳಿಸಿದ್ದಾರೆ.

ನನ್ನ ಇಲಾಖೆ ಬಿಟ್ಟು ನಾನು ಬೇರೆ ಯಾವ ಇಲಾಖೆಯ ಕೆಲಸದಲ್ಲೂ ಹಸ್ತಕ್ಷೇಪ ಮಾಡಿಲ್ಲ. ವರ್ಗಾವಣೆ ವಿಚಾರದಲ್ಲಿಯೂ ನಾನು ಕೈಹಾಕಿಲ್ಲ ಎಂದು ಅತೃಪ್ತ ಶಾಸಕರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ