ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಇಲ್ಲ?
Team Udayavani, Dec 12, 2019, 6:30 AM IST
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಬೇಕೋ, ಬೇಡವೋ ಎಂಬ ಕುರಿತು ಸರಕಾರಕ್ಕೆ ಇನ್ನೂ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಆದ್ದರಿಂದ ಈ ಬಾರಿ 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಯುವುದು ಸಂಶಯ.
ಬುಧವಾರ ನಗರದ ನೃಪತುಂಗ ರಸ್ತೆಯ ಸರ್ವಶಿಕ್ಷಾ ಅಭಿಯಾನದ ಕಚೇರಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಈ ಸಂಬಂಧವಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರೂ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ.
ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸ ಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಬಜೆಟ್ಗೆ ಸಂಬಂಧಿಸಿದಂತೆ ಹಲವು ವಿಚಾರಗಳ ಚರ್ಚೆ ಇದ್ದುದರಿಂದ ಏಳನೇ ತರಗತಿ ಪರೀಕ್ಷೆಯ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಅತೀ ಶೀಘ್ರದಲ್ಲಿ ಮತ್ತೆ ಸಭೆ ಸೇರಿ ತೀರ್ಮಾನ ತೆಗೆದುಕೊಳ್ಳಲಿದ್ದೇವೆ ಎಂದು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದರು.
ನೂತನ ವರ್ಗಾವಣೆ ನೀತಿ, ಹೊಸ ಯೋಜನೆ ಸೇರ್ಪಡೆ ಸೇರಿ ಮತ್ತಿತರ ಹಲವು ವಿಚಾರಗಳ ಬಗ್ಗೆ ಅಧಿಕಾರಿಗಳಿಂದ ಸಚಿವರು ಮುಂದಿನ ಬಜೆಟ್ ಹಿನ್ನೆಲೆಯಲ್ಲಿ ಸಲಹೆಗಳನ್ನು ಸಂಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ