ಮಾತಲ್ಲಷ್ಟೇ ಅಲ್ಲ, ಕೃತಿಯಲ್ಲೂ ಪರಿಸರ ರಕ್ಷಣೆಯ ಕೆಲಸವಾಗಬೇಕು


Team Udayavani, Jun 5, 2021, 7:00 AM IST

Not only the work, but the work must also be the work of environmental protection

ಇಂದು(ಶನಿವಾರ) ವಿಶ್ವ ಪರಿಸರ ದಿನ. ಜಾಗತಿಕವಾಗಿ ವಿಶ್ವಸಂಸ್ಥೆ ಕಡೆಯಿಂದಲೇ ಪರಿಸರ ದಿನವನ್ನು ಆಚರಿಸಲಾಗುತ್ತಿದ್ದು, ಪರಿಸರ ವ್ಯವಸ್ಥೆಯ ಪುನರ್‌ ನಿರ್ಮಾಣ ಸಾರವನ್ನು ತೆಗೆದುಕೊಳ್ಳಲಾಗಿದೆ. ಇದು ಮುಂದಿನ 10 ವರ್ಷಗಳ ಯೋಜನೆಯಾಗಿದ್ದು, ಜಗತ್ತಿನಾದ್ಯಂತ ಅರಣ್ಯ ಬೆಳೆಸಲು ಪ್ರೋತ್ಸಾಹಿಸಲಾಗುತ್ತದೆ. ಅಷ್ಟೇ ಅಲ್ಲ, ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡುವ ಕುರಿತಂತೆಯೂ ಈ 10 ವರ್ಷ ಅರಿವು ಮೂಡಿಸಲಾಗುತ್ತದೆ.

ವಿಶ್ವ ಪರಿಸರ ದಿನವನ್ನು 1972ರಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಜಗತ್ತಿನಲ್ಲಿ ಅರಣ್ಯದ ವಿನಾಶ ಹೆಚ್ಚುತ್ತಿರುವುದನ್ನು ಮನಗಂಡ ವಿಶ್ವ ಸಂಸ್ಥೆಯು ಪರಿಸರವನ್ನು ಉಳಿಸಲು ಪ್ರತೀ ವರ್ಷದ ಜೂ.5ರಂದು ಪರಿಸರ ದಿನವನ್ನು ಆಚರಿಸುತ್ತಿದೆ. ಹಾಗೆಯೇ ಪ್ರತೀ ವರ್ಷವೂ ಒಂದೊಂದು ದೇಶ ಇದನ್ನು ಆಚರಿಸುವ ಹೊಣೆ ಹೊತ್ತುಕೊಳ್ಳುತ್ತಿದ್ದು, ಈ ವರ್ಷ ಪಾಕಿಸ್ಥಾನ ಆತಿಥ್ಯ ವಹಿಸಿಕೊಂಡಿದೆ.

ಪ್ರತಿಯೊಂದು ದೇಶವು ಪರಿಸರ ರಕ್ಷಣೆಗೆ ಪಣ ತೊಡಬೇಕಿದ್ದು, ಮಾಲಿನ್ಯಕ್ಕೊಳಗಾಗುತ್ತಿರುವ ನಮ್ಮ ನಗರಗಳು, ಕರಾವಳಿಗಳ ಮೇಲೆ ಹಾವಳಿ ಮತ್ತು ಅರಣ್ಯ ನಾಶವನ್ನು ತಡೆಗಟ್ಟಬೇಕಾಗಿದೆ ಎಂದು ವಿಶ್ವಸಂಸ್ಥೆ ಈ ವರ್ಷದ ಸಂದೇಶದಲ್ಲಿ ತಿಳಿಸಿದೆ. ಒಂದು ವೇಳೆ ನಾವು ಇವುಗಳ ರಕ್ಷಣೆ ಮಾಡಿದಲ್ಲಿ ಬಡತನ ನಿರ್ಮೂಲನೆ ಮಾಡಬಹುದಾಗಿದ್ದು, ಹಸಿವು, ನಿರಾಶ್ರಿತ ಸಮಸ್ಯೆ ಮತ್ತು ರೋಗಗಳಿಂದ ಮುಕ್ತಿ ಪಡೆಯಬಹುದಾಗಿದೆ ಎಂದೂ ಹೇಳಿದೆ.

ಇಂದಿನ ಪರಿಸ್ಥಿತಿಯಲ್ಲಿ ಪರಿಸರ ಸಂರಕ್ಷಣೆ ಜಾಗತಿಕವಾಗಿ ಚಿಂತಿಸಬೇಕಾದ ವಿಷಯವೇ. ಆದರೆ ಭಾರತದ ವಿಚಾರಕ್ಕೆ ಬಂದರೆ ಈ ಬಗ್ಗೆ ಗಂಭೀರವಾಗಿ ಚಿಂತನೆ ಮಾಡುವ ಅಗತ್ಯವಿದೆ. ಜಾಗತಿಕ ಹವಾಮಾನ ಬದಲಾವಣೆ ವಿಚಾರದಲ್ಲಿ ಭಾರತ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದೆ. ಹೊಸದಿಲ್ಲಿಯೂ ಸೇರಿದಂತೆ ದೇಶದ ಹಲವಾರು ನಗರಗಳಲ್ಲಿ ಮಿತಿ ಮೀರಿದ ಮಾಲಿನ್ಯವಿದೆ. ಹೆಚ್ಚುತ್ತಿರುವ ವಾಹನಗಳ ಸಂಖ್ಯೆ, ಪರಿಸರ ಸಂರಕ್ಷಣೆ ವಿಚಾರದಲ್ಲಿ ನಮ್ಮ ನಿಷ್ಕಾಳಜಿ ಹೆಚ್ಚು ಮಾಲಿನ್ಯ ಸೃಷ್ಟಿಗೆ ಕಾರಣವಾಗುತ್ತಿದೆ. ಅಂತೆಯೇ ಕೈಗಾರಿಕೆಗಳ ಕಲ್ಮಶ ನೀರನ್ನು ಎಗ್ಗಿಲ್ಲದೇ ನದಿ, ಕೆರೆಗಳಿಗೆ ಸೇರಿಸುತ್ತಿದ್ದೇವೆ. ಕರಾವಳಿಯಲ್ಲಿ ಸಮುದ್ರ ಕೊರೆತ ಹೆಚ್ಚಾಗುತ್ತಿದೆ. ತಾಪಮಾನ ಏರಿಕೆ ಕಾರಣದಿಂದಾಗಿ ಸಮುದ್ರ ಮಟ್ಟವೂ ಏರಿಕೆಯಾಗುತ್ತಿದೆ.

ಇದಿಷ್ಟೇ ಅಲ್ಲ, ನೈಸರ್ಗಿಕ ವಿಕೋಪಗಳಿಗೂ ಪರೋಕ್ಷವಾಗಿ ಜಾಗತಿಕ ತಾಪಮಾನ ಬದಲಾವಣೆಯೂ ಕಾರಣವಾಗಿದೆ. 2011ರಿಂದ 2020ರ ವರೆಗೆ ದೇಶ 33 ಚಂಡಮಾರುತಗಳನ್ನು ಕಂಡಿದೆ. ಪ್ರವಾಹ, ಬಿರುಗಾಳಿ, ಚಂಡಮಾರುತಗಳ ಅಬ್ಬರ ಜೋರಾಗಿಯೇ ಇದೆ. 2008ರಿಂದ 2020ರ ವರೆಗೆ ಸುಮಾರು 37 ಲಕ್ಷ ಮಂದಿ ನಿರಾಶ್ರಿತರಾಗಿದ್ದಾರೆ. ಭಾರತದಲ್ಲಿ ಮುಂಗಾರು ಕಾಲದಲ್ಲೇ ಹೆಚ್ಚು ಪ್ರವಾಹದಂಥ ಸ್ಥಿತಿ ತಲೆದೋರಿದೆ.

ಇನ್ನು ಕೃಷಿ ಚಟುವಟಿಕೆಗಳ ಮೇಲೂ ಈ ನೈಸರ್ಗಿಕ ವಿಕೋಪಗಳ ಪರಿಣಾಮವಾಗಿದೆ. ತಾಪಮಾನ ಬದಲಾವಣೆಯಿಂದಾಗಿಯೇ ಕಾಲ ಕಾಲಕ್ಕೆ ಸರಿಯಾಗಿ ಮಳೆಯಾಗುತ್ತಿಲ್ಲ. ಇದು ರೈತನ ಜೀವನದ ಮೇಲೆ ಅಡ್ಡಪರಿಣಾಮ ಬೀರಿದೆ. ಹೀಗಾಗಿ ಸರಕಾರಗಳ ಜತೆಗೆ ಜನರೂ ಪರಿಸರ ಸಂರಕ್ಷಣೆಯಲ್ಲಿ ಕೈಜೋಡಿಸಬೇ ಕಾಗಿರುವುದು ಅನಿವಾರ್ಯವಾಗಿದೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.