ಕೊರೊನಾ ವೈರಸ್: ಜನರು ಆತಂಕ ಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ ಶ್ರೀರಾಮುಲು
Team Udayavani, Mar 3, 2020, 3:03 PM IST
ಬೆಂಗಳೂರು: ನಗರದಿಂದ ತೆಲಂಗಾಣಗೆ ತೆಳಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಆ ವ್ಯಕ್ತಿ ಕೆಲಸ ನಿರ್ವಹಿಸುತ್ತಿದ್ದ ಕಂಪನಿಯ ಎಲ್ಲಾ ಸಹೋದ್ಯೋಗಿಗಳು, ಆತನ ಜತೆ ರೂಮ್ ನಲ್ಲಿ ವಾಸವಿದ್ದ ವ್ಯಕ್ತಿ ಹಾಗೂ ಅಪಾರ್ಟ್ ಮೆಂಟ್ ನಿವಾಸಿಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಹೋದ್ಯೋಗಿಗಳನ್ನು 28 ದಿನಗಳವರೆಗೆ ನಿಗಾ ಇರಿಸಲಾಗುವುದು. ಇಲ್ಲಿಯವರೆಗೂ ವಿದೇಶದಿಂದ ಬಂದ 40 ಸಾವಿರ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದ್ದು ಯಾರಲ್ಲೂ ಸೋಂಕು ದೃಢಪಟ್ಟಿಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ಕೊರೊನ ಸೋಂಕು ಹರಡದಂತೆ ಆರೋಗ್ಯ ಇಲಾಖೆ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ರಾಜ್ಯದಲ್ಲಿ ಎಲ್ಲಾ ಸರಕಾರಿ ಅಸ್ಪತ್ರೆಗಳಲ್ಲಿ ಐಸೋಲೇಷನ್ ವಾರ್ಡ್ ಗಳನ್ನು ಮಾಡಿ, ಒಟ್ಟು 630 ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಶಂಕಿತ ರೋಗಿಗಳನ್ನು 24 ಗಂಟೆಗಳ ಕಾಲ ನಿಗಾ ವಹಿಸಲು ಆರೋಗ್ಯ ಇಲಾಖೆ ಸಜ್ಜಾಗಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ