ಗಂಡು ಮಗುವಿಗೆ ಜನ್ಮ ನೀಡಿದ ಟಿಎಂಸಿ ಸಂಸದೆ, ನಟಿ ನುಸ್ರತ್ ಜಹಾನ್
Team Udayavani, Aug 26, 2021, 6:50 PM IST
ಕೋಲ್ಕತ್ತಾ : ತೃಣಮೂಲ ಕಾಂಗ್ರೆಸ್ ಸಂಸದೆ, ನಟಿ ನುಸ್ರತ್ ಜಹಾನ್ ಗುರುವಾರ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಹೆರಿಗೆ ವೇಳೆ ನುಸ್ರತ್ ಸ್ನೇಹಿತ, ನಟ ಯಶ್ ದಾಸ್ ಗುಪ್ತಾ ಆಸ್ಪತ್ರೆಯಲ್ಲಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ನುಸ್ರತ್ ಅವರ ಪರಿತ್ಯಕ್ತ ಪತಿ ನಿಖೀಲ್ ಜೈನ್, “ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯಗಳು ಇರಬಹುದು. ಆದರೆ, ತಾಯಿ-ಮಗುವಿಗೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ’ ಎಂದಿದ್ದಾರೆ.
ಇದನ್ನೂ ಓದಿ :ಅವನು ಯೋಗಿ ಅಲ್ಲ, ಬೋಗಿ..ಅವನಿಗೆ ಚಪ್ಪಲಿಯಲ್ಲಿ ಹೊಡೆಯಬೇಕು : ಠಾಕ್ರೆ ವಿರುದ್ಧ ಬಿಜೆಪಿ ದೂರು