ಆನ್‌ಲೈನ್‌ ಮೂಲಕ ಸಿಇಟಿ ಸದ್ಯಕ್ಕಿಲ್ಲ ಹಿಂದಿನ ಕ್ರಮದಲ್ಲೇ ಪ್ರವೇಶ ಪರೀಕ್ಷೆ

Team Udayavani, Jan 22, 2020, 7:17 PM IST

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್‌) ಆನ್‌ಲೈನ್‌ ಮೂಲಕ ನಡೆಸುವ ಮಾದರಿಯಲ್ಲೇ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದಾಗಿತ್ತಾದರೂ ಸರಕಾರದಿಂದ ಅನುಮತಿ ಸಿಕ್ಕಿಲ್ಲ.

ಎಂಜಿನಿಯರಿಂಗ್‌, ಕೃಷಿ ವಿಜ್ಞಾನ, ಪಶುವೈದ್ಯಕೀಯ ವಿಜ್ಞಾನ, ಬಿ-ಫಾರ್ಮಾ, ಡಿ-ಫಾರ್ಮಾ ಸಹಿತ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರತಿ ವರ್ಷ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುತ್ತದೆ. ಇತ್ತೀಚಿನ ವರ್ಷಗಳ ಬಹುತೇಕ ಎಲ್ಲ ಪ್ರವೇಶ ಪರೀಕ್ಷೆಗಳು ಆನ್‌ಲೈನ್‌ನಲ್ಲೇ ನಡೆಯುತ್ತಿರುವುದರಿಂದ ಸಾಮಾನ್ಯ ಪ್ರವೇಶ ಪರೀಕ್ಷೆ ಕೂಡ ಆನ್‌ಲೈನ್‌ನಲ್ಲಿ ನಡೆಸುವ ಸಂಬಂಧ 2019ನೇ ಸಾಲಿನಲ್ಲಿಯೇ ಪ್ರಾಧಿಕಾರ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲಿಯೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಜತೆಗೆ ದಾಖಲಾತಿ ಪರೀಶಿಲನೆಯನ್ನು ಬಹುತೇಕ ಆನ್‌ಲೈನ್‌ನಲ್ಲೇ ಮಾಡಿಸುವ ವ್ಯವಸ್ಥೆಗೆ ಚಾಲನೆ ನೀಡಿದೆ. ಅಲ್ಲದೆ ಮೊಬೈಲ್‌ ಮೂಲಕ ಅರ್ಜಿಯನ್ನು ಸಲ್ಲಿಸಲು ವ್ಯವಸ್ಥೆ ಮಾಡಿತ್ತು.

2020-21ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಆನ್‌ಲೈನ್‌ ಮೂಲಕ ನಡೆಸಲು ಪ್ರಾಧಿಕಾರ ಆರಂಭದಿಂದಲೂ ಚರ್ಚೆ, ಮಾತುಕತೆ ನಡೆಸುತ್ತಲೇ ಬಂದಿದೆ. ಆದರೆ ಈ ಪ್ರಸ್ತಾವನೆಗೆ ಈವರೆಗೂ ಸರಕಾರ ಅನುಮತಿ ನೀಡದೇ ಇರುವುದರಿಂದ ಪ್ರಸಕ್ತ ಸಾಲಿನಲ್ಲಿ ಸಿಇಟಿಯನ್ನು ಹಿಂದಿನ ಪದ್ಧತಿಯಂತೆ ಮುಂದುವರಿಸಲು ನಿರ್ಧರಿಸಿದೆ.

ಈಗಾಗಲೇ ಸಿಇಟಿ ದಿನಾಂಕವನ್ನು ಪ್ರಕಟಿಸಲಾಗಿದೆ. ಎ.22 ಮತ್ತು 23ರಂದು ಸಿಇಟಿ ನಡೆಯಲಿದೆ. ಇದಕ್ಕೆ ಬೇಕಾದ ಸಿದ್ಧತೆಯನ್ನು ಮಾಡಿಕೊಂಡಿದೆ. ವಿದ್ಯಾರ್ಥಿಗಳಿಗೂ ಸಿಇಟಿ ಮಾಹಿತಿಯನ್ನು ನೀಡಲಾಗಿದೆ. ಸರಕಾರದಿಂದ ಆನ್‌ಲೈನ್‌ ಪರೀಕ್ಷೆಗೆ ಅನುಮತಿ ದೊರೆಯದೇ ಇರುವುದರಿಂದ ಹಿಂದಿನ ಕ್ರಮದಲ್ಲೇ ಮಾಡುವ ಬಗ್ಗೆಯೂ ಸಿಇಟಿ ಅಭ್ಯರ್ಥಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಆಡಳಿತಾಧಿಕಾರಿ ಹುದ್ದೆ ಖಾಲಿ
ಪ್ರಾಧಿಕಾರದಲ್ಲಿ ಆಡಳಿತಾಧಿಕಾರಿ ಹುದ್ದೆಗೆ ಬಹಳಷ್ಟು ಪ್ರಾಮುಖ್ಯತೆಯಿದೆ. ಬಹುತೇಕ ನಿರ್ಧಾರಗಳ ಜತೆಗೆ ನಿತ್ಯ ಅನೇಕ ಸಮಸ್ಯೆಗಳನ್ನು ಹೊತ್ತು ಬರುವ ವಿದ್ಯಾರ್ಥಿಗಳಿಗೆ ಆಡಳಿತಾಧಿಕಾರಿಗಳೇ ಪರಿಹಾರ ನೀಡಬೇಕು. ಆದರೆ ಕಳೆದ ಐದಾರು ತಿಂಗಳುಗಳಿಂದ ಆಡಳಿತಾಧಿಕಾರಿ ಹುದ್ದೆ ಖಾಲಿಯಿದೆ.

ಸದ್ಯಕ್ಕೆ ಆನ್‌ಲೈನ್‌ನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುವ ಯಾವ ನಿರ್ಧಾರವೂ ಸರಕಾರದ ಮುಂದೆ ಇಲ್ಲ. ಹಿಂದಿನ ಪದ್ಧತಿಯಂತೆ ಪ್ರವೇಶ ಪರೀಕ್ಷೆ ನಡೆಯಲಿದೆ.
-ಡಾ|ಅಶ್ವತ್ಥ್ ನಾರಾಯಣ್‌, ಉನ್ನತ ಶಿಕ್ಷಣ ಸಚಿವ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ