ಜೈಲಿನ ಹಕ್ಕಿಗಳಿಗೂ ರೇಡಿಯೋ ಜಾಕಿ ಭಾಗ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಮುದಾಯ ರೇಡಿಯೋ

Team Udayavani, Oct 10, 2019, 6:15 AM IST

ssss

ಬೆಂಗಳೂರು,: ಜೈಲು ಹಕ್ಕಿಗಳಿಗೂ ರೇಡಿಯೋ ಜಾಕಿ (ಆರ್‌ಜೆ) ಭಾಗ್ಯ!ಕೊಲೆ, ದರೋಡೆ, ಸುಲಿಗೆ ಹೀಗೆ ಹಲವು ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿರುವ ಕೈದಿಗಳ ಮನಃಪರಿವರ್ತನೆಗಾಗಿ ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಕಾರಾಗೃಹ ಇಲಾಖೆ, ಇದೇ ಮೊದಲ ಬಾರಿಗೆ ಶಿಕ್ಷಾಬಂದಿಗಳಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಪ್ರತ್ಯೇಕ ಸಮುದಾಯ ಬಾನುಲಿ (ಕಮ್ಯೂನಿಟಿ ರೇಡಿಯೋ) ಆರಂಭಿಸಲು ಸಿದ್ದತೆ ನಡೆಸಿದೆ. ಈ ಮೂಲಕ ಕೈದಿಗಳು ಕೂಡ ರೇಡಿಯೋ ಜಾಕಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ.

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ 1,500 ಸಜಾಬಂದಿಗಳು, 3,600 ವಿಚಾರಣಾಧೀನ ಕೈದಿಗಳು ಸೇರಿ ಐದು ಸಾವಿರಕ್ಕೂ ಅಧಿಕ ಕೈದಿಗಳಿದ್ದಾರೆ. ಎಲ್ಲರಿಗೂ ವಾರಾಂತ್ಯದಲ್ಲಿ ಎನ್‌ಜಿಒಗಳ ಕಡೆಯಿಂದ ಯೋಗ, ಧ್ಯಾನ ಇನ್ನಿತರ ಕಾರ್ಯಕ್ರಮಗಳ ಮೂಲಕ ಮನಃಪರಿವರ್ತನೆ ಮಾಡಲಾಗುತ್ತಿದೆ. ಈ ವೇಳೆ ಕೆಲವು ಕೈದಿಗಳಲ್ಲಿ ಕಂಡು ಬಂದ ಸುಪ್ತಪ್ರತಿಭೆಗಳನ್ನು ಕಂಡು ಅಚ್ಚರಿಗೊಂಡ ಕಾರಾಗೃಹ ಇಲಾಖೆ ಅಧಿಕಾರಿಗಳು ಈ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ.

20 ಮಂದಿ ಆಯ್ಕೆ
ತಿಳಿದೋ ತಿಳಿಯದೆಯೋ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಸಾಕಷ್ಟು ವಿದ್ಯಾವಂತರು, ಪದವೀಧರರು, ಎಂಜಿನಿಯರ್‌ಗಳು ಜೈಲು ಸೇರಿದ್ದಾರೆ. ಅವರಲ್ಲಿರುವ ಭಾಷಾಜ್ಞಾನ, ಆಸಕ್ತಿ, ವಿದ್ಯಾರ್ಹತೆ, ಭಾಷಣಕಾರರು, ಹಾಡುಗಾರರು, ವಾಕ್ಚಾತುರ್ಯ ಉಳ್ಳ ಅರ್ಹ ಕೈದಿಗಳಿಗೆ ನಾನಾ ಹಂತದಲ್ಲಿ ಪರೀಕ್ಷೆಗಳನ್ನು ನಡೆಸಿ ಈ ಮೂಲಕ ಆರು ಮಂದಿ ಮಹಿಳೆಯರು ಸೇರಿ 20 ಮಂದಿಯನ್ನು ಆಯ್ಕೆ ಮಾಡಲಾಗಿದೆ.

ರೇಡಿಯೋದಲ್ಲಿ ಏನೆಲ್ಲ ಇರುತ್ತೆ?
ಒಂದು ವರ್ಷದ ಯೋಜನೆಯನ್ನು ಈಗ ಕಾರ್ಯರೂಪಕ್ಕೆ ತರಲಾಗಿದೆ. ಮುಂದಿನ ಒಂದೆರಡು ತಿಂಗಳಲ್ಲಿ ಸಮುದಾಯ ರೇಡಿಯೋ ಸಂಪೂರ್ಣವಾಗಿ ಕಾರ್ಯಾರಂಭ ಮಾಡಲಿದೆ. ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆವರೆಗೆ ನಿರಂತರವಾಗಿ ವಿವಿಧ ಕಾರ್ಯಕ್ರಮಗಳು ಪ್ರಸಾರವಾಗಲಿವೆ.

ಕಾರ್ಯನಿರ್ವಹಣೆ ಹೇಗೆ?
ಕಾರಾಗೃಹ ವ್ಯಾಪ್ತಿಯಲ್ಲಿ ಸಮುದಾಯ ರೇಡಿಯೋ ಕಾರ್ಯನಿರ್ವಹಿಸಲಿದ್ದು, 16 ಬ್ಯಾರಕ್‌ಗಳಲ್ಲಿಯೂ ಧ್ವನಿವರ್ಧಕ ಅಳವಡಿಸಲಾಗಿದೆ. ಕಾರಾಗೃಹದ ಆಡಳಿತ ಕಚೇರಿ ಪಕ್ಕದಲ್ಲೇ ರೇಡಿಯೋ ಸ್ಟೇಷನ್‌ ನಿರ್ಮಾಣ ಮಾಡಲಾಗುತ್ತದೆ. ಕೈದಿಗಳು ಅಲ್ಲಿ ಆರ್‌ಜೆ ಜತೆ ಮಾತನಾಡಬಹುದು.

- ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.