ಕಲಘಟಗಿ ಅಭಿವೃದ್ಧಿಗೆ ಪಟ್ಟಣ ಪಂಚಾಯಿತಿ ಮುಂದಡಿ

Team Udayavani, Feb 8, 2023, 8:03 PM IST

ಕಲಘಟಗಿ ಅಭಿವೃದ್ಧಿಗೆ ಪಟ್ಟಣ ಪಂಚಾಯಿತಿ ಮುಂದಡಿ

– ಜನರಿಗೆ ಶುದ್ಧ ಕುಡಿಯುವ ನೀರು
– ಸ್ವತ್ಛತೆ-ಘನತ್ಯಾಜ್ಯ ವಿಲೇವಾರಿಗೆ ಒತ್ತು
– ಸಾಕಷ್ಟು ಅನುದಾನ ನೀಡಿದ ಶಾಸಕ ಸಿ.ಎಂ.ನಿಂಬಣ್ಣವರ
– ಸರ್ವಾಂಗ ಸುಂದರವಾಗಿ ರೂಪಗೊಳ್ಳುತ್ತಿರುವ ಪಟ್ಟಣ

ಕಲಘಟಗಿ ಪಟ್ಟಣವನ್ನು ಸರ್ವಾಂಗ ಸುಂದರ ಹಾಗೂ ಸ್ವತ್ಛತೆ ಹೊಂದಿದ ಪಟ್ಟಣವನ್ನಾಗಿಸಲು ಶಾಸಕ ಸಿ.ಎಂ. ನಿಂಬಣ್ಣವರ ಅವರ ಸಹಕಾರದಿಂದ ಇಲ್ಲಿಯ ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿ, ಮುಖ್ಯಾ ಧಿಕಾರಿಗಳು ಹಾಗೂ ಸಿಬ್ಬಂದಿ ಹಗಲಿರುಳು ಶ್ರಮಿಸಿ ಯಶಸ್ವಿಯಾಗಿದ್ದಾರೆ.

ಪಟ್ಟಣದಲ್ಲಿ ಸ್ವತ್ಛತೆ, ಬೀದಿದೀಪ, ಗಟಾರು, ಕಾಂಕ್ರೀಟ್‌ ರಸ್ತೆ, ಮನೆ ಮನೆಗೆ ನಲ್ಲಿ ಸಂಪರ್ಕ ಕಲ್ಪಿಸಿ ಶುದ್ಧ ಕುಡಿಯುವ ನೀರೊದಗಿಸುವಂತಹ ಮೂಲಭೂತ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಕಲ್ಪಿಸುವುದರ ಜತೆಗೆ ಸ್ವತ್ಛತೆಗೆ ಹೆಚ್ಚು ಒತ್ತು ನೀಡಿ ಕಾರ್ಯೋನ್ಮುಖವಾಗಿದೆ. ಘನತ್ಯಾಜ್ಯ ವಿಲೇವಾರಿ ಘಟಕದ ಅಭಿವೃದ್ಧಿಗೆ ಸಂಪೂರ್ಣ ರೂಪರೇಷೆಯೊಂದಿಗೆ ಗುಣಮಟ್ಟದ ನಿರ್ವಹಣೆಗೆ ಹೆಚ್ಚು ಮಹತ್ವ ನೀಡಲಾಗಿದೆ.

ಪಪಂ ಅಧ್ಯಕ್ಷ-ಉಪಾಧ್ಯಕ್ಷರಾದಿಯಾಗಿ ಪ್ರತಿ ವಾರ್ಡ್‌ ಸದಸ್ಯರ ಮತ್ತು ನಾಮನಿರ್ದೇಶಿತ ಸದಸ್ಯರ ಸಹಭಾಗಿತ್ವದಲ್ಲಿ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಮುಂದಡಿ ಇರಿಸಲಾಗಿದೆ. ಜತೆಗೆ ಆಡಳಿತದ ದೂರದರ್ಶಿತ್ವದ ಕಲ್ಪನೆಯುಳ್ಳ ಪಪಂ ಮುಖ್ಯಾ ಧಿಕಾರಿ ವಾಯ್‌.ಜಿ. ಗದ್ದಿಗೌಡರ ಅವರ ಕಳಕಳಿ ಹಾಗೂ ಇಂಜಿನಿಯರ್‌ ಸೇರಿದಂತೆ ನೌಕರ ವರ್ಗದವರ ಕ್ರಿಯಾತ್ಮಕತೆ ಜನಮೆಚ್ಚುಗೆ ಗಳಿಸಿದೆ. ಶಾಸಕ ಸಿ.ಎಂ.ನಿಂಬಣ್ಣವರ ಅವರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿ ಮಾರ್ಗದರ್ಶನ ನೀಡುತ್ತಿದ್ದಾರೆ.

ಘನತ್ಯಾಜ್ಯ ನಿರ್ವಹಣೆ, ಅಗತ್ಯ ಮೂಲಸೌಕರ್ಯ ಪೂರ್ಣಗೊಳಿಸುವ ಯೋಜನೆ ಮತ್ತು ಸಂಗ್ರಹಣೆ, ಸಂಸ್ಕರಣೆ ಇದರಿಂದ ಬರುವ ಆದಾಯ ಉತ್ಪಾದನೆಯಲ್ಲಿ ಉತ್ತಮ ಪ್ರಗತಿ ಸಾಧಿ ಸಲಾಗುತ್ತಿದೆ. 2011ನೇ ಜನಗಣತಿ ಪ್ರಕಾರ ಪಟ್ಟಣದಲ್ಲಿ 16,917 ಜನಸಂಖ್ಯೆಯ ಅನುಗುಣವಾಗಿ 5 ಕಂದಾಯ ವಾರ್ಡ್‌, 17 ಚುನಾವಣಾ ವಾರ್ಡ್‌ಗಳನ್ನು ಹೊಂದಿದೆ. ಪ್ರತಿ ವಾರ್ಡ್‌ನ ಮನೆ ಮನೆಗೆ ತೆರಳಿ ಹಸಿ ಕಸ, ಒಣ ಕಸ ತ್ಯಾಜ್ಯ ಬೇರ್ಪಡಿಸುವುದರೊಂದಿಗೆ ಸಂಗ್ರಹಿಸಿ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಲಾಗುತ್ತಿದ್ದು, ಪ್ರತಿ ನಿತ್ಯ 6 ರಿಂದ 7 ಟನ್‌ ಘನ ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ. ಅಂದಿನ ಕಸವನ್ನು ಅಂದೇ ವಿಲೇವಾರಿ ಮಾಡಲು ಸಹಕಾರಿಯಾಗಿ ಎರೆಹುಳ ಗೊಬ್ಬರ ತಯಾರಿಕೆ ಘಟಕ ಆರಂಭಿಸಲಾಗಿದೆ ಅಲ್ಲದೇ ತಯಾರಾದ ಗೊಬ್ಬರ ಮಾರಾಟ ಮಾಡಲಾಗುತ್ತದೆ. ಒಣ ಕಸದಿಂದ ಬರುವ ಮರು ಬಳಕೆ ತ್ಯಾಜ್ಯಗಳನ್ನು ಪ್ಲಾಸ್ಟಿಕ್‌ ಹಾಗೂ ಆರ್‌ಡಿಎಫ್‌ ಕಸ ಬೇರ್ಪಡಿಸಿ ಸಿಮೆಂಟ್‌ ಕಾರ್ಖಾನೆಗಳಿಗೆ ಕಳುಹಿಸಲಾಗುತ್ತಿದೆ. ಈಗಾಗಲೇ ಹಲವಾರು ವರ್ಷಗಳಿಂದ ಸಂಗ್ರಹಿಸಿಟ್ಟಿದ್ದ ಪಾರಂಪರಿಕ ತ್ಯಾಜ್ಯ ಅಂದಾಜಿಸಲಾಗಿದ್ದು, ಸುಮಾರು ಏಳು ಸಾವಿರ ಟನ್‌ನಷ್ಟು ದಾಸ್ತಾನಿದೆ. ಅದನ್ನು ವಿಲೇವಾರಿ ಮಾಡಲು ಸೂಕ್ತ ಕ್ರಮ ಜರುಗಿಸಲಾಗುತ್ತಿದೆ. ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯನ್ನು ಸಿಸಿ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲಾಗಿದೆ.

ಪಟ್ಟಣದ ಅಭಿವೃದ್ಧಿಗೆ ಸಹಕಾರಿಯಾಗುವಂತಹ ಯಂತ್ರೋಪಕರಣಗಳುಳ್ಳ ವಾಹನಗಳನ್ನು ಖರೀದಿಸಲಾಗಿದ್ದು, ಅವೆಲ್ಲವುಗಳ ಸದ್ಬಳಕೆ ಪಡೆಯಲಾಗುತ್ತಿದೆ. ಪಟ್ಟಣದ ಹೃದಯ ಭಾಗದಲ್ಲಿದ್ದ ಚಾವಡಿ ಜಾಗೆಯನ್ನು ಪಪಂದಿಂದ ಅಭಿವೃದ್ಧಿ ಪಡಿಸಿ, ಸುಸಜ್ಜಿತ ಶೌಚಾಲಯಗಳೊಂದಿಗೆ ನಿರ್ಮಿಸುತ್ತಿರುವ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ. ನಗರೋತ್ಥಾನ ಯೋಜನೆಯಡಿಯಲ್ಲಿ ಶಾಸಕರ ಪರಿಶ್ರಮದಿಂದ ಯುವಶಕ್ತಿ ಸರ್ಕಲ್‌ ಬಳಿಯಲ್ಲಿನ ಕಂದಾಯ ಇಲಾಖೆ ಜಾಗೆಯನ್ನು ಪಟ್ಟಣ ಪಂಚಾಯಿತಿಗೆ ಪಡೆದು ಎರಡು ಕೋಟಿ ರೂ.ಗಳ ವೆಚ್ಚದಲ್ಲಿ ಸುಸಜ್ಜಿತ ಆಡಿಟೋರಿಯಂ ನಿರ್ಮಾಣಕ್ಕೆ ಈಗಾಗಲೇ ಯೋಜನೆ ತಯಾರಿಸಿದ್ದು ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ.

ಅಮೃತ ನೈರ್ಮಲ್ಯ ಯೋಜನೆಯಡಿಯಲ್ಲಿ ಪಪಂ ಅಭಿವೃದ್ಧಿ ಮತ್ತು ಸೌಂದಯೀìಕರಣಕ್ಕೆ ಸರಕಾರ ಒಂದು ಕೋಟಿ ರೂ.ಗಳ ವಿಶೇಷ ಅನುದಾನ ನೀಡಿದ್ದು, ಅದರಲ್ಲಿ ವಿಶೇಷವಾಗಿ ಹಳಿಯಾಳ ರಸ್ತೆಯಲ್ಲಿನ ಎರಡು ಉದ್ಯಾನವನಗಳ ಅಭಿವೃದ್ಧಿ ಪಡಿಸುವ ಮೂಲಕ ಸೌಂದಯೀìಕರಣ ಇಮ್ಮಡಿಗೊಳಿಸಿರುವುದಲ್ಲದೇ ವಾಯು ವಿಹಾರಿಗಳಿಗೆ ಅನುಕೂಲ ಕಲ್ಪಿಸಲಾಗಿದೆ. ಪಟ್ಟಣ ವ್ಯಾಪ್ತಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿಸಿ ದಾರಿದೀಪಗಳಿಂದ ಬೆಳಗಿಸಿರುವುದು ಪಟ್ಟಣದ ಸೌಂದಯೀìಕರಣದ ಮೆರಗು ಇಮ್ಮಡಿಗೊಳಿಸಿದೆ.

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.