“ದೈವನರ್ತಕ’ರ ಮಾಸಾಶನ ಘೋಷಣೆಯಲ್ಲೇ ಬಾಕಿ? ಪ್ರತ್ಯೇಕ ಮಾರ್ಗಸೂಚಿ ಇಲ್ಲದೆ ಎದುರಾದ ತೊಡಕು


Team Udayavani, Feb 5, 2023, 8:00 AM IST

“ದೈವನರ್ತಕ’ರ ಮಾಸಾಶನ ಘೋಷಣೆಯಲ್ಲೇ ಬಾಕಿ? ಪ್ರತ್ಯೇಕ ಮಾರ್ಗಸೂಚಿ ಇಲ್ಲದೆ ಎದುರಾದ ತೊಡಕು

ಮಂಗಳೂರು : “ಕಾಂತಾರ’ ಚಲನಚಿತ್ರ ವಿಶ್ವದೆಲ್ಲೆಡೆ ತುಳುನಾಡಿನ ದೈವಾರಾಧನೆಯ ಮಹತ್ವವನ್ನು ಪ್ರಚುರಪಡಿಸಿದ ಬೆನ್ನಲ್ಲೇ ರಾಜ್ಯ ಸರಕಾರ ದೈವ ನರ್ತಕರಿಗೆ 2 ಸಾವಿರ ರೂ. ಮಾಸಾಶನ ಘೋಷಿಸಿತ್ತು. ಆದರೆ ಅದಿನ್ನೂ ಜಾರಿಯಾಗಲು ಮುಹೂರ್ತವೇ ಕೂಡಿ ಬಂದಿಲ್ಲ.

ಕರ್ನಾಟಕ ಜಾನಪದ ಅಕಾಡೆಮಿಯಿಂದ ಈ ಹಿಂದಿನಿಂದಲೂ ದೈವ ನರ್ತಕರನ್ನು ಒಳಗೊಂಡು ಕಲಾವಿದರಿಗೆ ನೀಡಲಾಗುವ ಮಾಸಾಶನದಡಿ ಈಗಲೂ ಅರ್ಜಿಗಳನ್ನು ಪಡೆಯಲಾಗುತ್ತಿದೆ. ಆದರೆ ದೈವ ನರ್ತಕರಿ ಗೆಂದು ಯಾವುದೇ ಹೊಸ ಅಥವಾ ಪ್ರತ್ಯೇಕ ಮಾರ್ಗಸೂಚಿಯನ್ನು ಸರಕಾರ ಪ್ರಕಟಿಸಿಲ್ಲ.

ಅಕಾಡೆಮಿಯು ಜಾನಪದ ಕಲಾವಿದರಿಗೆ 2000 ರೂ. ಮಾಸಾಶನ ನೀಡುತ್ತಿದ್ದು, ಕರಾ ವಳಿ ಜಿಲ್ಲೆಗಳಲ್ಲಿ ಸುಮಾರು 25 ಮಂದಿ ದೈವ ನರ್ತಕರು ಮಾಸಾಶನ ಪಡೆಯುತ್ತಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಲ್ಲಿ ವಿಚಾರಿಸಿದರೆ, ಹೊಸ ಮಾರ್ಗ ಸೂಚಿ ಪ್ರಕಟವಾಗಿಲ್ಲ. ಈ ಹಿಂದಿನಂತೆಯೇ ದೈವ ನರ್ತಕರ ಅರ್ಜಿಯನ್ನು ಅಕಾಡೆಮಿಗೆ ಕಳುಹಿಸಲಾಗು ತ್ತಿದೆ ಎನ್ನುತ್ತಾರೆ.

ಕಳೆದ ಅಕ್ಟೋಬರ್‌ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಅವರು ದೈವ ನರ್ತಕರಿಗೆ ತಲಾ 2 ಸಾವಿರ ರೂ. ಮಾಸಾಶನ ಘೋಷಿಸಿದ್ದರು. ದೈವ ನರ್ತಕರು ಸಂತಸವನ್ನೂ ವ್ಯಕ್ತಪಡಿಸಿದ್ದರು.

ದೈವ ನರ್ತಕರ ಕುರಿತು ಪ್ರತ್ಯೇಕ ಸಮೀಕ್ಷೆ ನಡೆದಿಲ್ಲ. ಇಲಾಖೆಯಲ್ಲೂ ನಿಖರ ಅಂಕಿ ಆಂಶಗಳಿಲ್ಲ. ದೈವಾರಾಧಕರಾಗಿ ದೈವ ನರ್ತಕರು, ಜೀಟಿಗೆ ಹಿಡಿಯುವವರು, ಪಾತ್ರಿಗಳು ಸೇರಿದಂತೆ ಹಲವರು ಈ ಕ್ಷೇತ್ರದಲ್ಲಿ ಇರುವ ಕಾರಣ ಯಾರನ್ನು ದೈವ ನರ್ತಕರಾಗಿ ಪರಿಗಣಿಸಬಹುದು ಎಂಬ ಬಗ್ಗೆ ಸ್ಪಷ್ಟತೆಯೂ ಇಲ್ಲ.

ಅಂದಾಜಿನ ಪ್ರಕಾರ ಕರಾವಳಿಯಲ್ಲಿ ಐದು ಸಾವಿರದಷ್ಟು ಮಂದಿ ದೈವನರ್ತಕರಿದ್ದಾರೆ ಎನ್ನಲಾಗಿದೆ.

ದ.ಕ. ಜಿಲ್ಲೆಯಲ್ಲಿ ಸುಮಾರು 10 ಹಾಗೂ ಉಡುಪಿ ಜಿಲ್ಲೆಯಲ್ಲಿ 15 ಮಂದಿ ದೈವ ನರ್ತಕರು ಮಾಸಾಶನ ಪಡೆಯುತ್ತಿದ್ದಾರೆ.

3 ತಿಂಗಳಿನಿಂದೀಚೆಗೆ ಮಾಸಾಶನಕ್ಕಾಗಿ 10ರಷ್ಟು ಅರ್ಜಿಗಳು ಬಂದಿವೆ.

ಅದನ್ನು ಜನಪದ ಅಕಾಡೆಮಿಗೆ ರವಾನಿಸಲಾಗಿದೆ ಎನ್ನುತ್ತಾರೆ ಇಲಾಖೆಯ ಅಧಿಕಾರಿಗಳು. ಉಡುಪಿ ಜಿಲ್ಲೆಯಲ್ಲೂ ಕೆಲವರು ಅರ್ಜಿ ಪಡೆದಿದ್ದಾರೆ ಎನ್ನುತ್ತಾರೆ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ.

ವಿವಿಧ ಜಾನಪದ ಕಲೆಗಳ ಕಲಾವಿದರ ಪಟ್ಟಿ ಇದ್ದು, ಇವರಿಗೂ‌ ಕಲಾವಿದರ ಪಟ್ಟಿಯಿದ್ದು, ಮಾಸಾಶನ ಲಭ್ಯವಾಗುತ್ತಿದೆ. ಮಾನದಂಡದ ಪ್ರಕಾರ ಇದನ್ನು ಪಡೆಯಲು ಈಗಾಗಲೇ ವೃದ್ಧಾಪ್ಯ ಸೇರಿದಂತೆ ಇತರ ಪಿಂಚಣಿ ಪಡೆಯುವವರು ಅರ್ಹರಲ್ಲ. ಈ ಯಾವುದೇ ಸೌಲಭ್ಯ ಹೊಂದಿರದ ದೈವ ನರ್ತಕರ ಅರ್ಜಿಗಳನ್ನು ಮಾತ್ರ ಮಾಸಾಶನಕ್ಕೆ ಪರಿಗಣಿಸಲಾಗುತ್ತಿದೆ. ಇದನ್ನು ಪಡೆಯಲು 60 ವರ್ಷವಾಗಿರಬೇಕು. ತಹಶೀಲ್ದಾರರಿಂದ ದೃಢೀಕರಣವನ್ನು ಹೊಂದಿರಬೇಕಾಗುತ್ತದೆ.

ಈ ಮಧ್ಯೆ, ದೈವ ನರ್ತಕರು 50 ವರ್ಷ ಬಳಿಕ ನರ್ತನ ಮಾಡಲಾರರು. ಹಾಗಾಗಿ ಮಾಸಾಶನಕ್ಕಿರುವ ವಯೋಮಿತಿಯನ್ನು 50 ವರ್ಷಕ್ಕೆ ಇಳಿಸಬೇಕು ಎನ್ನುವುದು ಹಲವರ ಆಗ್ರಹ. ಈ ಕುರಿತಂತೆ ಸಚಿವರು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳಿಗೆ ಬೇಡಿಕೆಯೂ ದೈವನರ್ತಕರಿಂದ ಸಲ್ಲಿಕೆಯಾಗಿದೆ.

ನಿಯಮಾವಳಿಯಂತೆ 60 ವರ್ಷ ಮೇಲ್ಪಟ್ಟ ದೈವನರ್ತಕರು ಮಾಸಾಶನ ಪಡೆಯಲು ಪ್ರತ್ಯೇಕ ಮಾರ್ಗಸೂಚಿ ಅಗತ್ಯವಿಲ್ಲ. ಜನಪದ ಅಕಾಡೆಮಿಯಡಿ ನೀಡಲಾಗುವ ಕಲಾವಿದರಿಗೆ ನೀಡಲಾಗುತ್ತಿದ್ದು, ಇದೀಗ ದೈವನರ್ತಕರನ್ನು ಸೇರಿಸಲು ಸರಕಾರ ಸೂಚಿಸಿದೆ. ವಯೋಮಿತಿಯನ್ನು 60 ರಿಂದ 55ಕ್ಕೆ ಇಳಿಸುವಂತೆ ಬೇಡಿಕೆ ಇದೆ.
– ಸುನಿಲ್‌ ಕುಮಾರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು

“ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷನಾಗಿದ್ದಾಗ ಅವಿಭಜಿತ ದ.ಕ. ಜಿಲ್ಲೆಯ ಮಾಶಾಸನಕ್ಕೆ ಅರ್ಹ 1500ರಷ್ಟು ನೈಜ ದೈವನರ್ತಕರ ಪಟ್ಟಿಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ಸಂದಿಪಾಡªನ ಗೊತ್ತಿದ್ದು, ದೈವಕಲೆಯ ವೇಷಭೂಷಣದೊಂದಿಗೆ ದೈವನರ್ತಕರಾಗಿ ಸೇವೆ ಸಲ್ಲಿಸುವವರಿಗೆ ಮೊದಲು ಸೌಲಭ್ಯ ನೀಡಬೇಕು. ಪ್ರತ್ಯೇಕ “ದೈವಾರಾಧಕರ ಅಕಾಡೆಮಿ’ ಸ್ಥಾಪಿಸಿ, ದಾಖಲೀಕರಣ ಆಗಬೇಕು. ಇದರಿಂದ ಸಂಶೋಧನೆ ಸಾಧ್ಯ’

– ದಯಾನಂದ ಕತ್ತಲಸಾರ್‌, ನಿಕಟಪೂರ್ವ ಅಧ್ಯಕ್ಷರು, ತುಳು ಸಾಹಿತ್ಯ ಅಕಾಡೆಮಿ

– ಸತ್ಯಾ ಕೆ.

ಟಾಪ್ ನ್ಯೂಸ್

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ

1-w-ewqewqeq

ಐಪಿಎಲ್ 2023: ವರ್ಣರಂಜಿತ ಚಾಲನೆ; ಟಾಸ್ ಗೆದ್ದ ಗುಜರಾತ್ ಟೈಟಾನ್ಸ್

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌. ಒನ್‌ ಎ. 2ರಂದು ಲೋಕಾರ್ಪಣೆ

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಲೋಕಾರ್ಪಣೆ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

sss

ತಂದೆಯ ಸಾವಿನ ದುಃಖದಲ್ಲೂ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದ ಮಗಳು

Food

ವಾವ್! ಏನ್ ರುಚಿ ಈ ಸಿಗಡಿ ಘೀ ರೋಸ್ಟ್..ಸಿಗಡಿ ತಂದರೆ ಒಮ್ಮೆ ಹೀಗೆ ಮಾಡಿ ನೋಡಿ…ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

narendra nayak

ವಿಚಾರವಾದಿ ನರೇಂದ್ರ ನಾಯಕ್‌ ಗನ್‌ಮ್ಯಾನ್‌ ಹಿಂಪಡೆತ

drejjing

ಆದ್ಯಪಾಡಿ, ಶಂಭೂರು ಡ್ಯಾಂನಿಂದ ಹೂಳೆತ್ತುವುದಕ್ಕೆ ತಡೆ

police siren

88.22 ಕೋ.ರೂ. ನಷ್ಟ: ಬ್ಯಾಂಕ್‌ ಮುಖ್ಯಸ್ಥರಿಂದ ದೂರು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-csadsasadsa

ಗೋಡೆಯ ಬಿರುಕಿನಲ್ಲಿ ಅಡಗಿದ್ದವು ನಾಗರಹಾವು ಮತ್ತು 10 ಮರಿಗಳು!

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

1-sadsad-d

ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಬಂಧನ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ

1-w-ewqewqeq

ಐಪಿಎಲ್ 2023: ವರ್ಣರಂಜಿತ ಚಾಲನೆ; ಟಾಸ್ ಗೆದ್ದ ಗುಜರಾತ್ ಟೈಟಾನ್ಸ್