ಸಂಕ್ರಾಂತಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ
Team Udayavani, Dec 28, 2019, 8:10 PM IST
ಹುಬ್ಬಳ್ಳಿ: ಜನವರಿ ಮೊದಲ ವಾರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದಿಲ್ಲಿಗೆ ತೆರಳಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಿದ್ದು, ಸಂಕ್ರಾಂತಿ ಅನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಶಾಸಕ ಬಿ.ಸಿ.ಪಾಟೀಲ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಬಿಜೆಪಿ ಪರ ಸ್ಪರ್ಧಿಸಿದ ಎಲ್ಲರಿಗೂ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ.
ಯಾರನ್ನೂ ಕೈ ಬಿಡುವ ಪ್ರಶ್ನೆಯಿಲ್ಲ. ಎಂಟಿಬಿ ನಾಗರಾಜ್ ಮತ್ತು ವಿಶ್ವನಾಥ್ ಅವರು ಬಿಜೆಪಿ ಸರಕಾರ ರಚನೆಗೆ ತ್ಯಾಗ ಮಾಡಿದ್ದಾರೆ. ಅವರಿಗೂ ಸಚಿವ ಸ್ಥಾನ ನೀಡುವುದಾಗಿ ಸಿಎಂ ಹೇಳಿದ್ದು, ಅವರಿಬ್ಬರಿಗೂ ಸಚಿವ ಸ್ಥಾನ ಸಿಗಬೇಕೆಂಬುದು ನನ್ನ ಒತ್ತಾಸೆಯಾಗಿದೆ ಎಂದರು.
ಝಾರ್ಖಂಡ್ ಚುನಾವಣೆ ಸಹಿತ ಹಲವು ಕಾರಣಗಳಿಂದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿದೆ. ನನಗೆ ಯಾವ ಖಾತೆ ನೀಡುತ್ತಾರೋ ಗೊತ್ತಿಲ್ಲ. ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
MUST WATCH
ಹೊಸ ಸೇರ್ಪಡೆ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್