ಸೋಂಕಿನ ವಿರುದ್ಧ ಹೋರಾಟ : ವೈದ್ಯರಿಗೆ ಪ್ರಧಾನಿ ಮೆಚ್ಚುಗೆ
Team Udayavani, May 17, 2021, 10:37 PM IST
ನವದೆಹಲಿ: ಕೊರೊನಾ ಸೋಂಕಿನ ವಿರುದ್ಧ ಹೋರಾಟದಲ್ಲಿ ಪಾಲ್ಗೊಂಡಿರುವ ವೈದ್ಯರಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ದೇಶವಾಸಿಗಳ ಹಾರೈಕೆಯ ಬೆಂಬಲ ಅವರ ಮೇಲೆ ಇರಲಿದೆ ಎಂದು ಹೇಳಿದ್ದಾರೆ.
ಈಶಾನ್ಯ ರಾಜ್ಯಗಳು ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ದೇಶದ ವಿವಿಧ ಭಾಗಗಳ ವೈದ್ಯರ ಜತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಸಂದರ್ಭದಲ್ಲಿ ಪ್ರಧಾನಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮುಂಚೂಣಿ ಕಾರ್ಯಕರ್ತರಿಗೆ ಆದ್ಯತೆಯಲ್ಲಿ ಕೊರೊನಾ ಲಸಿಕೆ ನೀಡಿದ್ದು 2ನೇ ಅಲೆಯ ಸಂದರ್ಭದಲ್ಲಿ ಪ್ರಯೋಜನಕ್ಕೆ ಬಂದಿದೆ ಎಂದರು. ಮನೆಯಲ್ಲಿಯೇ ಚೇತರಿಕೆ ಕಾಣುತ್ತಿರುವ ಸೋಂಕಿತರಿಗೆ ಟೆಲೆ ಮೆಡಿಸಿನ್ ಬಹಳಷ್ಟು ಸಹಾಯಕಾರಿಯಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ :ತೌಕ್ತೇ ರೌದ್ರಾವತಾರಕ್ಕೆ ನಡುಗಿದ ಮುಂಬೈ : 6 ಮಂದಿ ಸಾವು, ಮೂವರು ನಾಪತ್ತೆ
ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಮತ್ತು ಇಂಟರ್ನಿಗಳಿಗೆ ರಾಜ್ಯಗಳ ಮಟ್ಟದಲ್ಲಿಯೂ ತರಬೇತಿ ನೀಡುವ ಬಗ್ಗೆ ವೈದ್ಯರು ಮುತುವರ್ಜಿ ವಹಿಸಬೇಕು. ಎಲ್ಲಾ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿಯೂ ಟೆಲೆಮೆಡಿಸಿನ್ ವ್ಯವಸ್ಥೆ ಲಭ್ಯವಾಗುವಂತೆ ಮಾಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ