ಪ್ರಧಾನಮಂತ್ರಿ ಆವಾಜ್ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆ
Team Udayavani, Dec 8, 2021, 10:00 PM IST
ನವದೆಹಲಿ : ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿಯನ್ನು ಒದಗಿಸುವ ನಿಟ್ಟಿನಲ್ಲಿ ಇರುವ ಪ್ರಧಾನಮಂತ್ರಿ ಆವಾಜ್ ಯೋಜನೆ (ಗ್ರಾಮೀಣ)ಯನ್ನು ಮೂರು ವರ್ಷಗಳ ಕಾಲ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 155.75 ಲಕ್ಷ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಲಾಯಿತು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪರಿಷ್ಕೃತ ನಿರ್ಧಾರದ ಪ್ರಕಾರ ಪಿಎಂಎವೈ (ಆರ್) 2024 ಮಾ.31ಕ್ಕೆ ಮುಕ್ತಾಯವಾಗಿದೆ.
ಅದಕ್ಕಾಗಿ 2,17,257 ಕೋಟಿ ರೂ. ವೆಚ್ಚವಾಗಲಿದೆ. ಈ ಪೈಕಿ ಕೇಂದ್ರ ಸರ್ಕಾರದ ಪಾಲು 1,25,106 ಕೋಟಿ ರೂ. ಇರಲಿದ್ದು, ರಾಜ್ಯ ಸರ್ಕಾರಗಳು 73,475 ಕೋಟಿ ರೂ. ಮೊತ್ತವನ್ನು ಭರಿಸಲಿವೆ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.
ಇದನ್ನೂ ಓದಿ : ರಾವತ್ ಒಬ್ಬ ಅತ್ಯುತ್ತಮ ಸೈನಿಕ,ನಿಜವಾದ ದೇಶಭಕ್ತ: ಪ್ರಧಾನಿ ಮೋದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ