ದಕ್ಷಿಣಕನ್ನಡ ; ಸಾರಿಗೆ ನೌಕರರ ಮುಷ್ಕರಕ್ಕೆ ಖಾಸಗಿ ಬಸ್ ಗಳ ಬೆಂಬಲವಿಲ್ಲ : ದಿಲ್ ರಾಜ್ ಆಳ್ವ
Team Udayavani, Dec 13, 2020, 9:57 PM IST
ಮಂಗಳೂರು : ರಾಜ್ಯಾದ್ಯಂತ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳು ಬೆಂಬಲ ನೀಡುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲೀಕರ ಸಂಘದ ಅಧ್ಯಕ್ಷರಾದ ದಿಲ್ ರಾಜ್ ಆಳ್ವ ಅವರು ತಿಳಿಸಿದ್ದಾರೆ.
ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಗಳೂರಿನಲ್ಲಿ ಖಾಸಗಿ ಬಸ್ ಮಾಲಕರು ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ಮಾತನಾಡಿದ ದಿಲ್ ರಾಜ್ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸೋಮವಾರ ಖಾಸಗಿ ಬಸ್ಸುಗಳು ಎಂದಿನಂತೆ ಸಂಚರಿಸುತ್ತದೆ.
KSRTC ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ನಾವು ತಟಸ್ಥ ನಿಲುವನ್ನು ಹೊಂದಿದ್ದೇವೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಸರಕಾರ ಬಯಸಿದರೆ ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಪ್ರದೇಶಕ್ಕೂ ನಮ್ಮ ಖಾಸಗಿ ಬಸ್ ಸೇವೆಯನ್ನು ನೀಡಲು ತಯಾರಾಗಿದ್ದೇವೆ ಎಂದು ಹೇಳಿದ್ದಾರೆ.