ಇಂದು ಖಾಸಗಿ ಆಸ್ಪತ್ರೆ ಒಪಿಡಿ ಬಂದ್
Team Udayavani, Nov 8, 2019, 5:30 AM IST
ಬೆಂಗಳೂರು: ಕಿರಿಯ ವೈದ್ಯರ ಮೇಲೆ ಹಲ್ಲೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಬಂಧನಕ್ಕೆ ಆಗ್ರಹಿಸಿ ಬೆಂಗಳೂರು ಮೆಡಿಕಲ್ ಕಾಲೇಜು ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ನಿವಾಸಿ ವೈದ್ಯರ ಸಂಘ ಆರು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆಗೆ ಭಾರತೀಯ ವೈದ್ಯರ ಸಂಘ (ಐಎಂಎ) ಮತ್ತು ಫನಾ (ಖಾಸಗಿ ಆಸ್ಪತ್ರೆ ಹಾಗೂ ನರ್ಸಿಂಗ್ ಹೋಂ ಅಸೋಸಿಯೇಶನ್) ಸಹಕಾರ ನೀಡಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗ (ಒಪಿಡಿ) ಬಂದ್ ಆಗಿರುವ ಸಾಧ್ಯತೆ ಇದೆ. ಆಸ್ಪತ್ರೆಗಳಲ್ಲಿ ಐಸಿಯು ಮತ್ತು ತುರ್ತುಸೇವೆಗಳು ಲಭ್ಯವಿರಲಿವೆ.
ಸರಕಾರಿ ಆಸ್ಪತ್ರೆಗಳಲ್ಲಿ ಎಂದಿನಂತೆ ಸೇವೆ
ಸರಕಾರಿ ಆಸ್ಪತ್ರೆಗಳ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಬಂದ್ ಮಾಡಲು ನಿರ್ಧರಿಸಿದ್ದು, ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ದಟ್ಟಣೆ ಹೆಚ್ಚಿರುತ್ತದೆ. ಹೀಗಾಗಿ ವೈದ್ಯರು ರಜೆ ಪಡೆಯದೆ ಕಡ್ಡಾಯವಾಗಿ ಸೇವೆಗೆ ಹಾಜರಾಗಬೇಕು ಎಂದು ಇಲಾಖೆ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
MUST WATCH
ಹೊಸ ಸೇರ್ಪಡೆ
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?