ಮೀಸಲಾತಿಗೆ ಧರಣಿ : ಪಕ್ಷಭೇದ ಮರೆತು ಸದನದ ಬಾವಿಗಿಳಿದು ಪ್ರತಿಭಟನೆ!
Team Udayavani, Feb 3, 2021, 7:00 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ
ಬೆಂಗಳೂರು: ಒಂದೆಡೆ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಹಾಗೂ ಕುರುಬ ಸಮುದಾಯದ ಮಂದಿ ಪಾದಯಾತ್ರೆ ನಡೆಸುತ್ತಿರುವ ಬೆನ್ನಲ್ಲೇ ರಾಜ್ಯ ವಿಧಾನ ಸಭೆಯಲ್ಲೂ ಮಂಗಳವಾರ ಈ ವಿಷಯ ಪ್ರತಿಧ್ವನಿಗೊಂಡು ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತು.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ, ಕುರುಬ ಹಾಗೂ ಗಂಗಾಮತಸ್ಥ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ವಿಧಾನಸಭೆಯಲ್ಲಿ ಮೂರೂ ಪಕ್ಷಗಳ ಪಂಚಮಸಾಲಿ ಹಾಗೂ ಕುರುಬ ಸಮುದಾಯದ ಶಾಸಕರು ಸದನದ ಬಾವಿಗಿಳಿದು ಧರಣಿ ನಡೆಸಿದರು.
ಶೂನ್ಯವೇಳೆಯಲ್ಲಿ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ವಿಷಯ ಪ್ರಸ್ತಾವಿಸಿ, ಪಂಚಮಸಾಲಿ ಲಿಂಗಾಯತ ಸಮುದಾಯವನ್ನು 2ಎ ಮೀಸಲಾತಿಗೆ ಸೇರಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಎರಡು ಬಾರಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಪರಿಶೀಲನೆ ನಡೆಸಿ ಕ್ರಮ
ಯತ್ನಾಳ್ ಪ್ರಸ್ತಾವಕ್ಕೆ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಉತ್ತರಿಸಿ, ಇದು ಸೂಕ್ಷ್ಮ ವಿಷಯ. ಪರಿಶೀಲಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದರು.
ಎಲ್ಲ ಪಕ್ಷಗಳ ನಾಯಕರೂ ಸಾಥ್
ಇದರಿಂದ ಅಸಮಾಧಾನಗೊಂಡ ಯತ್ನಾಳ್ ಸದನದ ಬಾವಿಗಿಳಿದು ಧರಣಿಗೆ ಮುಂದಾದರು, ಜೆಡಿಎಸ್‌ನ ಬಂಡೆಪ್ಪ ಕಾಶಂಪೂರ್, ವೆಂಕಟರಾವ್ ನಾಡಗೌಡ ಜತೆಗೂಡಿದರು. ಕಾಂಗ್ರೆಸ್‌ನ ಡಾ| ಯತೀಂದ್ರ ಸಿದ್ದರಾಮಯ್ಯ, ಕುಸುಮಾ ಶಿವಳ್ಳಿ, ರಾಘವೇಂದ್ರ ಹಿಟ್ನಾಳ್, ಬೈರತಿ ಸುರೇಶ್, ಅಮರೇ ಗೌಡ ಬಯ್ನಾಪುರ, ಯಶವಂತ ರಾಯ ಗೌಡ ಪಾಟೀಲ್ ಕೂಡ ಪ್ರತಿಭಟನೆಗೆ ಮುಂದಾದರು. ಬಿಜೆಪಿಯ ಸಿದ್ದು ಸವದಿ, ಅರವಿಂದ ಬೆಲ್ಲದ ಕೂಡ ಸದನದ ಬಾವಿಗಿಳಿದು ಧರಣಿಗೆ ಬೆಂಬಲ ಸೂಚಿಸಿ ಸರಕಾರಕ್ಕೆ ಮುಜುಗರ ಉಂಟು ಮಾಡಿದರು.
ಮುಖ್ಯಮಂತ್ರಿ ಮೌನ
ಧರಣಿ ಸಂದರ್ಭ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಜ ರಿದ್ದರೂ ಯಾವುದೇ ಪ್ರತಿಕ್ರಿಯೆ ನೀಡದೇ ಮೌನ ವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
MUST WATCH
ಹೊಸ ಸೇರ್ಪಡೆ
Sandalwood: ಗಾಡ್ ಪ್ರಾಮಿಸ್ಗೆ ಸ್ಕ್ರಿಪ್ಟ್ ಪೂಜೆ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್ ನಿರೀಕ್ಷೆ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ