ಪಿಎಸ್‌ಐ ನೇಮಕ ಅಕ್ರಮ: ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಿ

Team Udayavani, Apr 19, 2022, 6:00 AM IST

ಪಿಎಸ್‌ಐ ನೇಮಕ ಅಕ್ರಮ: ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಿ

545 ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪದ ಪ್ರಕರಣದ ರಾಜ್ಯಾದ್ಯಂತ ದೊಡ್ಡ ಮಟ್ಟದ ಸುದ್ದಿಯಾಗಿದ್ದು ಇದು ಲಕ್ಷಾಂತರ ಅಭ್ಯರ್ಥಿಗಳ ಭವಿಷ್ಯದ ಪ್ರಶ್ನೆಯೂ ಆಗಿದೆ.

ಅಕ್ರಮ ಪ್ರಕರಣ ಬೆಳಕಿಗೆ ಬಂದ ಅನಂತರ ರಾಜ್ಯ ಸರಕಾರ ತನಿಖೆಗೆ ವಹಿಸಿ ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿರುವ ಎಲ್ಲ ಅಭ್ಯರ್ಥಿಗಳ ಪೂರ್ವಾಪರ ಪರಿಶೀಲಿಸಲು ಆದೇಶಿಸಿರುವುದು ಒಂದು ಕಡೆ. ಇದರ ನಡುವೆ, 402 ಪಿಎಸ್‌ಐ ನೇಮಕಾತಿ ಸಂಬಂಧ ಅರ್ಜಿ ಸಲ್ಲಿಸಿರುವವರು ಲಿಖೀತ ಪರೀಕ್ಷೆಗಾಗಿ ಕಾಯುತ್ತಿದ್ದಾರೆ. 545 ಪಿಎಸ್‌ಐ ನೇಮಕಾತಿ ಪ್ರಕರಣದ ಅಕ್ರಮ ಆರೋಪದ ತನಿಖೆ ಮುಗಿಯುವವರೆಗೂ ಲಿಖೀತ ಪರೀಕ್ಷೆಯೂ ಸಾಧ್ಯವಿಲ್ಲದಂತಾಗಿರುವುದು ಮತ್ತೂಂದು ಕಡೆ.

ಆದರೆ, ನೇಮಕಾತಿ ಪ್ರಕ್ರಿಯೆಗಳಲ್ಲಿ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಬೇಕಾದ ಹೊಣೆಗಾರಿಕೆ ಸರಕಾರದ ಮೇಲಿದೆ. ಏಕೆಂದರೆ, ಇದೊಂದು ಅಪಾಯಕಾರಿ ಬೆಳವಣಿಗೆ. ಇದಕ್ಕೆ ಅಂತ್ಯ ಹಾಡದಿದ್ದರೆ ಬೇರೆ ಬೇರೆ ರೀತಿಯ ಸಂದೇಶ ರವಾನೆಯಾಗುತ್ತದೆ.

ಲಕ್ಷಾಂತರ ವಿದ್ಯಾರ್ಥಿಗಳು ಉದ್ಯೋಗ ಅರಸಿ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದಿರುತ್ತಾರೆ. ಜೀವನದಲ್ಲಿ ಉದ್ಯೋಗ ಎಂಬುದು ಸಿಕ್ಕರೆ ಬದುಕಿಗೆ ನೆಲೆ ಸಿಕ್ಕಂತೆ ಎಂಬ ಕನಸು ಕಟ್ಟಿಕೊಂಡಿರುತ್ತಾರೆ. ಪರೀಕ್ಷೆ ಬರೆಯಲು ಹಗಲು ರಾತ್ರಿ ಶ್ರಮ ಪಟ್ಟಿರುತ್ತಾರೆ.ಲಕ್ಷಾಂತರ ಯುವಕರ ಬದುಕು ಇದರಲ್ಲಿದೆ. ತಮ್ಮ ಮಕ್ಕಳಿಗೆ ಓದಿಸಿ, ಸರಕಾರಿ ಕೆಲಸ ಸಿಗಬೇಕು ಎಂದು ಪೋಷಕರು ಹಗಳಿರುಳು ಶ್ರಮಿಸುತ್ತಾರೆ. ಹೀಗಿರುವಾಗ ಅಕ್ರಮಗಳು ನಡೆದು ಅರ್ಹರಿಗೆ ಉದ್ಯೋಗ ಕೈ ತಪ್ಪಿದರೆ ಅದು ಆಡಳಿತ ವೈಫ‌ಲ್ಯವೇ ಸರಿ. ಮೊದಲ ಹಂತದ ನೇಮಕಾತಿ ಪರೀಕ್ಷೆಯಲ್ಲಿ ಸಾಕಷ್ಟು ಅಕ್ರಮ ನಡೆದಿರುವ ಮಾಹಿತಿ ಇದ್ದು ಎರಡನೇ ಹಂತದ ನೇಮಕಾತಿಯಲ್ಲಿ ಪಾರದರ್ಶಕತೆ ಕಾಪಾಡಿ ಎಂದು ಅಭ್ಯರ್ಥಿಗಳು ಮನವಿ ಮಾಡಿದ್ದಾರೆ.

ರಾಜ್ಯ ಸರಕಾರವು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಪರೀಕ್ಷಾ ವ್ಯವಸ್ಥೆ ಬಿಗಿಗೊಳಿಸಬೇಕು. ಎಂತಹ ಪರಿಸ್ಥಿತಿಯಲ್ಲೂ ಎಚ್ಚರತಪ್ಪಬಾರದು. ಇಲ್ಲವಾದರೆ ಸರಕಾರಕ್ಕೂ ಕಳಂಕ, ಪರೀಕ್ಷಾ ವ್ಯವಸ್ಥೆಗೂ ಕಳಂಕ ತಪ್ಪಿದ್ದಲ್ಲ.

ಪ್ರಸ್ತುತ 545 ಪಿಎಸ್‌ಐ ನೇಮಕಾತಿ ಅಕ್ರಮಗಳ ಆರೋಪಗಳ ಕುರಿತು ನಡೆಸುತ್ತಿರುವ ತನಿಖೆ ನಿಷ್ಪಕ್ಷಪಾತವಾಗಿ ಮಾಡಬೇಕು. ಯಾವ ಹಂತದಲ್ಲಿ ತಪ್ಪು ನಡೆದಿದ್ದರೂ ಪತ್ತೆ ಹಚ್ಚಿ ಅರ್ಹರಿಗೆ ಉದ್ಯೋಗ ಸಿಗುವಂತೆ ಮಾಡಬೇಕು. ಆಗ ಮಾತ್ರ ನಂಬಿಕೆ ಬರಲು ಸಾಧ್ಯ. ನೇಮಕಾತಿಗಳ ಮೇಲೆಯೇ ಅಪನಂಬಿಕೆ, ಅನುಮಾನ ಪ್ರಾರಂಭವಾದರೆ ಇಡೀ ವ್ಯವಸ್ಥೆ ವಿರುದ್ಧ ಅಸಮಾಧಾನ ಸ್ಫೋಟಗೊಳ್ಳುತ್ತದೆ. ಅದು ಇತರೆ ಸಮಸ್ಯೆಗಳಿಗೂ ಕಾರಣವಾಗುತ್ತದೆ. ಹೀಗಾಗಿ, ಸರಕಾರ ಈ ಪ್ರಕರಣ ಗಂಭೀರವಾಗಿ ತೆಗೆದುಕೊಂಡು ಸಮಗ್ರ ತನಿಖೆ ನಡೆಸಿ ತಪ್ಪು ಆಗಿದ್ದರೆ ಯಾರೇ ಅದರ ಹಿಂದಿದ್ದರೂ ಕಠಿನ ಶಿಕ್ಷೆಯಾಗುವಂತೆ ಮಾಡಬೇಕಾಗಿದೆ.

40 ಪರ್ಸೆಂಟ್‌ ಭ್ರಷ್ಟಾಚಾರ ಆರೋಪವನ್ನೇ ಅಸ್ತ್ರ ಮಾಡಿಕೊಂಡಿರುವ ವಿಪಕ್ಷಗಳು ಸರಕಾರದ ಮೇಲೆ ಪಿಎಸ್‌ಐ ನೇಮಕಾತಿ ಅಕ್ರಮ ಕುರಿತು ಮುಗಿಬೀಳುತ್ತಿವೆ. ಇಂತಹ ಸಂದರ್ಭದಲ್ಲಿ ಸರಕಾರ ನಿಷ್ಪಕ್ಷಪಾತ ತನಿಖೆ ನಡೆಸಿ ಅರ್ಹರಿಗೆ ಅನ್ಯಾಯವಾಗದಂತೆ ನ್ಯಾಯ ಕಲ್ಪಿಸಬೇಕಾಗಿದೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.