ಬಿಬಿಎಂಪಿ ಅಧಿಕಾರಿಗಳ ಸಾರ್ವಜನಿಕ ರಜೆ ರದ್ದು
Team Udayavani, Apr 23, 2021, 8:29 PM IST
ಬೆಂಗಳೂರು : ನಗರದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಪಾಲಿಕೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸಾರ್ವಜನಿಕ ರಜೆಗಳನ್ನು ರದ್ದು ಮಾಡಿ ಬಿಬಿಎಂಪಿ ಮುಖ್ಯ ಆಯುಕ್ತ ಆದೇಶ ಮಾಡಿದ್ದಾಾರೆ.
ನಗರದಲ್ಲಿ ಕೋವಿಡ್ ಸೋಂಕು ಪರಿಸ್ಥಿತಿ ನಿಯಂತ್ರಣ ಮೀರಿತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿ ಸಕ್ರಿಯರಾಗಿರುವ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಾವುದೇ ಕಾರಣಕ್ಕೂ ಅವರ ಅಧಿಕಾರದ ಕೇಂದ್ರ ಸ್ಥಾನ ಬಿಟ್ಟು ಬೇರೆ ಎಲ್ಲಿಯೂ ಹೋಗದಂತೆ ಹಾಗೂ ಮೊಬೈಲ್ ದೂರವಾಣಿ ಸಂಖ್ಯೆಯನ್ನು ಚಾಲ್ತಿಯಲ್ಲಿ ಇರಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.
ಅಲ್ಲದೆ, ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ, ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.