ಸ್ನಾನದ ವಿಡಿಯೋ ಚಿತ್ರೀಕರಿಸಿ… ಬ್ಲ್ಯಾಕ್ ಮೇಲ್; ಅತ್ತಿಗೆ ಮೇಲೆ ಅತ್ಯಾಚಾರ
ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ಮಾಡಿರುವುದಾಗಿ ವಿವರಿಸಿದೆ.
Team Udayavani, Jan 19, 2022, 3:23 PM IST
ಪುಣೆ: ಅತ್ತಿಗೆ ಸ್ನಾನ ಮಾಡುತ್ತಿದ್ದ ವೇಳೆ ರಹಸ್ಯವಾಗಿ ವಿಡಿಯೋ ಚಿತ್ರೀಕರಣ ಮಾಡಿಕೊಂಡು, ಬಳಿಕ ಆಕೆಯನ್ನು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿರುವ ಆರೋಪದಲ್ಲಿ 25 ವರ್ಷದ ಯುವಕನ ವಿರುದ್ಧ ದೂರು ದಾಖಲಾಗಿರುವ ಘಟನೆ ಪುಣೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಮೊದಲ ಏಕದಿನ: ವೆಂಕಟೇಶ್ ಅಯ್ಯರ್ ಪಾದಾರ್ಪಣೆ ; ಟಾಸ್ ಗೆದ್ದ ದಕ್ಷಿಣ ಆಫ್ರಿಕಾ
ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ಪರ್ಭಾನಿ ಜಿಲ್ಲೆಯ ಆರೋಪಿ ಯುವಕನ ವಿರುದ್ಧ ಮಹಿಳೆ ನೀಡಿರುವ ದೂರಿನ ಆಧಾರದ ಮೇಲೆ ಹಿಂಜೆವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ.
“ದೂರಿನಲ್ಲಿ ಉಲ್ಲೇಖಿಸಿರುವಂತೆ, ಆಕೆ ಸ್ನಾನ ಮಾಡುತ್ತಿದ್ದಾಗ ಆರೋಪಿ ಅತ್ತಿಗೆಗೆ ತಿಳಿಯದಂತೆ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದ. ಬಳಿಕ ತನ್ನ ಜೊತೆ ದೈಹಿಕ ಸಂಬಂಧ ಬೆಳೆಸದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ಮಾಡಿರುವುದಾಗಿ ವಿವರಿಸಿದೆ.
ಲೈಂಗಿಕ ಸಂಪರ್ಕ ವಿರೋಧಿಸಿದಾಗ ಮೈದುನ ತನ್ನ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಎಸಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ ಎಂದು ವರದಿ ಹೇಳಿದೆ. ಈ ಘಟನೆ ಕಳೆದ ತಿಂಗಳು ನಡೆದಿದ್ದು, ಆತ ಪದೇ,ಪದೇ ಕಿರುಕುಳ ನೀಡಲು ಆರಂಭಿಸಿದಾಗ ಘಟನೆ ಬಗ್ಗೆ ಪತಿಗೆ ವಿಷಯ ತಿಳಿಸಿದ್ದು, ಬಳಿಕ ಪೊಲೀಸರಿಗೆ ದೂರು ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬೆನ್ನಲ್ಲೇ ಆರೋಪಿ ಪರ್ಭಾನಿ ಜಿಲ್ಲೆಯಿಂದ ನಾಪತ್ತೆಯಾಗಿದ್ದ. ಕೂಡಲೇ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ