ಪುನೀತ್ ವೇದಿಕೆ: ನಾಳೆ ಕಲಬುರಗಿಯಲ್ಲಿ ‘ಉದ್ಯಮಿಯಾಗು ಉದ್ಯೋಗ ನೀಡು’

ಕೈಗಾರಿಕಾ ಅದಾಲತ್ ಕಾರ್ಯಕ್ರಮಕ್ಕೆ ಸಚಿವ ಮುರುಗೇಶ್ ನಿರಾಣಿ ಅವರಿಂದ ಚಾಲನೆ

Team Udayavani, Jan 2, 2022, 4:57 PM IST

1-ffdsf

ಬೆಂಗಳೂರು: ವಿದ್ಯಾವಂತ ಯುವಕರಿಗೆ ಸ್ಥಳದಲ್ಲೇ ಉದ್ಯೋಗ ಹಾಗೂ ಉದ್ಯಮ ಆರಂಭಿಸುವವರಿಗೆ ಸೂಕ್ತ ಮಾರ್ಗದರ್ಶನ ನೀಡುವ ಬಹುನಿರೀಕ್ಷಿತ ಉದ್ಯಮಿಯಾಗು ಉದ್ಯೋಗ ನೀಡು ಹಾಗೂ ಕೈಗಾರಿಕಾ ಅದಾಲತ್ ಕಾರ್ಯಕ್ರಮ ನಾಳೆ, ಸೋಮವಾರ ಕಲಬುರಗಿಯಲ್ಲಿ ನಡೆಯಲಿದೆ.

ಕಲ್ಯಾಣ ಕರ್ನಾಟಕ ಭಾಗದ ಕೇಂದ್ರಬಿಂದು ಕಲಬುರಗಿಯಲ್ಲಿ ನಾಳೆ ಗುಲ್ಬರ್ಗ ವಿವಿಯ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರು ಚಾಲನೆ ನೀಡುವರು.

ಕಾರ್ಯಕ್ರಮ ನಡೆಯುವ ವೇದಿಕೆಗೆ ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ.

ಪುನೀತ್ ರಾಜ್‍ಕುಮಾರ್ ಕೇವಲ ಚಿತ್ರನಟರಂಗಕ್ಕೆ ತಮ್ಮನ್ನು ಗುರುತಿಸಿಕೊಳ್ಳದೆ ಅವರೊಬ್ಬ ಯಶಸ್ವಿ ಉದ್ಯಮಿಯೂ ಹೌದು. ತಮ್ಮ ಸಂಸ್ಥೆಗಳಲ್ಲಿ ನೂರಾರು ಜನರಿಗೆ ಉದ್ಯೋಗ ನೀಡುವ ಮೂಲಕ ಉದ್ಯೋಗದಾತರೂ ಆಗಿದ್ದರು. ಈಗಾಗಲೇ ಕರ್ನಾಟಕ ಸರ್ಕಾರ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥವಾಗಿ ಅವರಿಗೆ ಪ್ರತಿಶಿಷ್ಟ ಕರ್ನಾಟಕ ರತ್ನ ಪ್ರಶಸ್ತಿಯನ್ನು ಸಹ ಘೋಷಿಸಿದೆ.

ಯುವಕರನ್ನು ಉದ್ಯಮದತ್ತ ಆಕರ್ಷಿಸಲು ಮುಂದಾಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರು ಮುಂದೆ ನಡೆಯಲಿರುವ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮದ ವೇದಿಕೆಗೆ ಅವರ ಹೆಸರನ್ನು ನಾಮಕರಣ ಮಾಡಲು ತೀರ್ಮಾನಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಜನತೆಯ ಜೊತೆ ಪುನೀತ್ ರಾಜ್‍ಕುಮಾರ್ ಅವಿನಾಭಾವ ಸಂಬಂಧ ಹೊಂದಿದ್ದರು. ಅನೇಕ ಸಂದರ್ಭಗಳಲ್ಲಿ ಇಲ್ಲಿಗೆ ಬಂದಾಗ ಪ್ರವಾಸಿ ತಾಣಗಳು ಮತ್ತು ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದರು.

ಅವರ ಹೆಸರನ್ನು ಅಜಾರಾಮರಗೊಳಿಸಲು ಮುಂದಾಗಿದ್ದು, ನಾಳೆ ನಡೆಯುವ ಕಾರ್ಯಕ್ರಮದ ವೇದಿಕೆಗೆ ಅವರ ಹೆಸರನ್ನೇ ನಾಮಕರಣ ಮಾಡಿರುವುದು ವಿಶೇಷವಾಗಿದೆ.

ಬೆಳಗ್ಗೆ 10 ಗಂಟೆಗೆ ಆರಂಭವಾಗಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಈಗಾಗಲೇ ಎಲ್ಲ ಸಿದ್ದತೆಗಳನ್ನು ಕೈಗೊಳ್ಳಲಾಗಿದ್ದು, ಕಲ್ಯಾಣ ಕರ್ನಾಟಕದ ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಮತ್ತು ಬೀದರ್ ಜಿಲ್ಲೆಯ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವ ಉದ್ಯಮಿಗಳು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹೊರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಾಗಾರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬಂದಲ್ಲಿ ಮುಂಜಾಗ್ರತವಾಗಿ ಭವನದ ಹೊರಗಡೆಯೂ ವೀಕ್ಷಣೆಗೆ ಸ್ಕ್ರೀನ್ ಅಳವಡಿಸಲಾಗುತ್ತಿದೆ.

ಈಗಾಗಲೇ ಕಳೆದ ನವೆಂಬರ್ ನಲ್ಲಿ ಬೆಂಗಳೂರಿನ ಅರಮನೆಯಲ್ಲಿ ಮೊದಲ ಉದ್ಯಮಿಯಾಗು ಉದ್ಯೋಗ ನೀಡು ಮತ್ತು ಕೈಗಾರಿಕಾ ಅದಾಲತ್ ನಡೆಸಲಾಗಿತ್ತು.

ಮೊದಲ ಬಾರಿಗೆ ನಡೆಸಿದ ಈ ಕಾರ್ಯಕ್ರಮಕ್ಕೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಯ ಸಾವಿರಾರು ಐಟಿಐ, ಎಂಜಿನಿಯರಿಂಗ್, ಎಂಬಿಎ, ಬಿಬಿಎಂ ಸೇರಿದಂತೆ ಮತ್ತಿತರ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಅರ್ಹತೆಗೆ ಅನುಗುಣವಾಗಿ ಉದ್ಯೋಗ ಪಡೆದಿದ್ದರು.

ಜೊತೆಗೆ ಹೊಸದಾಗಿ ಉದ್ಯಮ ಆರಂಭಿಸುವವರಿಗೆ ಯಶಸ್ವಿ ಉದ್ಯಮಿಗಳಿಂದ ಮಾರ್ಗದರ್ಶನ, ಸಲಹೆ ನೀಡಲಾಗಿತ್ತು. ಇದು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದರಿಂದ ಇದೀಗ ಕಲಬುರಗಿಯಲ್ಲಿ 2ನೇ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಮೂಲಕ ಸರ್ಕಾರವೇ ಉದ್ಯಮಿಗಳ ಮನೆ ಬಾಗಿಲಿಗೆ ಹೋಗಿ ಉದ್ಯಮದಾರರ ಸಮಸ್ಯೆ ಆಲಿಸಿ, ಸಮಸ್ಯೆ ಇತ್ಯರ್ಥ ಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿದೆ.

ಇದೇ 18ರಂದು ಸಾಂಸ್ಕ್ರತಿಕ ನಗರಿ ಮೈಸೂರು ಹಾಗೂ 28ರಂದು ಕುಂದಾನಗರ, ಬೆಳಗಾವಿ ಹಾಗೂ ಫೆಬ್ರವರಿಯಲ್ಲಿ ದಕ್ಷಿಣ ಕನ್ನಡ ಮತ್ತು ತುಮಕೂರಿನಲ್ಲಿ ಆಯೋಜಿಸಲಾಗಿದೆ.

ಎರಡು ದಿನಗಳ ಕಾಲ ಕಲಬುರಗಿ ಪ್ರವಾಸ ನಡೆಸಲಿರುವ ಜಿಲ್ಲಾ ನಿಯೋಜಿತ ಉಸ್ತುವಾರಿ ಸಚಿವರಾಗಿರುವ ಮುರುಗೇಶ್ ನಿರಾಣಿಯವರು ಸೋಮವಾರ ಸಂಜೆ 6 ಗಂಟೆಗೆ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಅಂಗವಾಗಿ ಏರ್ಪಡಿಸಿರುವ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಕಾರ್ಯಕ್ರಮವು ಪೂಜ್ಯ ಶ್ರೀ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

1-wwqwq

ಫ್ರೆಂಚ್‌ ಲೇಖಕಿ ಆ್ಯನಿ ಎರ್ನಾಕ್ಸ್‌ಗೆ ಒಲಿದ ಸಾಹಿತ್ಯ ನೊಬೆಲ್‌

1-ssdsdda

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ,

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ

ಜಪಾನ್‌ನತ್ತ ಉ.ಕೊರಿಯಾ ಕ್ಷಿಪಣಿ : ಭಾರತ ಖಂಡನೆ

ಜಪಾನ್‌ ಕಡೆಗೆ ಉತ್ತರ ಕೊರಿಯಾ ಕ್ಷಿಪಣಿ ಉಡಾವಣೆ : ಭಾರತ ಖಂಡನೆ

CM-@-4

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಪ್ರಧಾನಿಗಳಿಂದ ಉದ್ಘಾಟನೆ

ಉತ್ತರಕಾಶಿ ಹಿಮಪಾತ: ಅಸುನೀಗಿದವರ ಸಂಖ್ಯೆ 16ಕ್ಕೆ ಏರಿಕೆ

ಉತ್ತರಕಾಶಿ ಹಿಮಪಾತ: ಅಸುನೀಗಿದವರ ಸಂಖ್ಯೆ 16ಕ್ಕೆ ಏರಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-@-4

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಪ್ರಧಾನಿಗಳಿಂದ ಉದ್ಘಾಟನೆ

1-ADSAD

ಯುವಕನಾದ ಸಿದ್ದರಾಮಯ್ಯ ..! ; ರಾಹುಲ್ ಜತೆ ರೇಸ್ ….!; ವಿಡಿಯೋ ವೈರಲ್

dr-sudhakar

ಡಿಸೆಂಬರ್‌ 15 ರ ವೇಳೆಗೆ ರಾಜ್ಯದಲ್ಲಿ 438 ʼನಮ್ಮ ಕ್ಲಿನಿಕ್‌ʼ ಕಾರ್ಯಾರಂಭ: ಡಾ.ಕೆ.ಸುಧಾಕರ್‌

hd-k

ನವೆಂಬರ್ 1ರಿಂದ ಜೆಡಿಎಸ್ ಜನತಾ ಪಂಚರತ್ನ ಯಾತ್ರೆ ಆರಂಭ

ಸಚಿವ ಸುನಿಲ್‌ ಕುಮಾರ್

ಅಕ್ಟೋಬರ್‌ 28 ರಂದು ವಿನೂತನ ಕೋಟಿ ಕಂಠ ಗಾಯನ: ಸಚಿವ ಸುನಿಲ್‌ ಕುಮಾರ್

MUST WATCH

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

udayavani youtube

ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್..! ಇವರ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ

ಹೊಸ ಸೇರ್ಪಡೆ

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

1-wwqwq

ಫ್ರೆಂಚ್‌ ಲೇಖಕಿ ಆ್ಯನಿ ಎರ್ನಾಕ್ಸ್‌ಗೆ ಒಲಿದ ಸಾಹಿತ್ಯ ನೊಬೆಲ್‌

1-sddsdsad

ಸಿಎಂ ಕೃಪೆಯಿಂದಾದರೂ ಕುಷ್ಟಗಿ ಮುಖ್ಯ ರಸ್ತೆ ಅಭಿವೃದ್ಧಿ ಹೊಂದುವುದೇ?

1-ssdsdda

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ,

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.