“ಭಾರತದ ಯಶಸ್ಸಿಗೆ ರಾಹುಲ್‌ ಡ್ರಾವಿಡ್‌ ಕಾರಣ’ : ಗ್ರೆಗ್‌ ಚಾಪೆಲ್‌

Team Udayavani, May 15, 2021, 1:10 AM IST

“ಭಾರತದ ಯಶಸ್ಸಿಗೆ ರಾಹುಲ್‌ ಡ್ರಾವಿಡ್‌ ಕಾರಣ’ : ಗ್ರೆಗ್‌ ಚಾಪೆಲ್‌

ಸಿಡ್ನಿ : ಇಂದು ಕ್ರಿಕೆಟ್‌ ಜಗತ್ತಿನಲ್ಲಿ ಭಾರತ ರಾಜನಂತೆ ಮೆರೆಯುತ್ತಿದ್ದರೆ ಅದಕ್ಕೆ ಮಾಜಿ ಆಟಗಾರ ರಾಹುಲ್‌ ದ್ರಾವಿಡ್‌ ಅವರೇ ಕಾರಣ ಎಂಬುದಾಗಿ ಆಸ್ಟ್ರೇಲಿಯದ ಮಾಜಿ ನಾಯಕ ಗ್ರೆಗ್‌ ಚಾಪೆಲ್‌ ಹೇಳಿದ್ದಾರೆ.

ಆಸ್ಟ್ರೇಲಿಯದ ಕ್ರಿಕೆಟ್‌ ವೆಬ್‌ ಸೈಟ್‌ ಜತೆಗಿನ ಸಂದರ್ಶನವೊಂದಲ್ಲಿ ಮಾತನಾಡಿದ ಚಾಪೆಲ್, “ಆಸ್ಟ್ರೇಲಿಯದಲ್ಲಿ ಪ್ರತಿಭೆಗಳಿಗೆ ಕೊರತೆಯೇ ಇಲ್ಲ ಎಂಬ ಮಾತಿಗೆ ಈಗ ಬೆಲೆ ಇಲ್ಲ. ಆದರೆ ಭಾರತ ತಂಡ ಪ್ರತಿಭೆಯ ಮಹಾಪೂರವನ್ನೇ ಹೊಂದಿದೆ. ಇದಕ್ಕೆ ರಾಹುಲ್‌ ದ್ರಾವಿಡ್‌ ಅವರ ಕಠಿನ ಪರಿಶ್ರಮವೇ ಕಾರಣ’ ಎಂದು ಹೇಳಿದ್ದಾರೆ.

“ಇತಿಹಾಸವನ್ನು ಗಮನಿಸಿದರೆ ಕೇವಲ ಆಸ್ಟ್ರೇಲಿಯದಲ್ಲಿ ಮಾತ್ರ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಪೋಷಿಸುವ ಕೆಲಸ ಮಾಡಲಾಗುತ್ತಿತ್ತು. ಆದರೆ ಕಳೆದ ಕೆಲವು ವರ್ಷಗಳಲ್ಲಿ ಎಲ್ಲವೂ ಬದಲಾಗಿದೆ. ಇಂದು ಆಸ್ಟ್ರೇಲಿಯದಲ್ಲಿ ಪ್ರತಿಭಾನ್ವಿತ ಆಟಗಾರರು ಕಳೆದುಹೋಗುತ್ತಿದ್ದಾರೆ. ಆಟಗಾರರನ್ನು ಈ ರೀತಿ ಕಳೆದುಕೊಳ್ಳುವುದು ಸರಿಯಲ್ಲ’ ಎಂದು ಚಾಪೆಲ್‌ ಬೇಸರ ವ್ಯಕ್ತಪಡಿಸಿದರು.

ಬಲಾಡ್ಯ ಮೀಸಲು ಸಾಮರ್ಥ್ಯ
“ರಾಹುಲ್‌ ದ್ರಾವಿಡ್‌ ಭಾರತ “ಎ’ ಹಾಗೂ ಭಾರತ ಕಿರಿಯರ ತಂಡದ ಕೋಚ್‌ ಆಗಿ ಭವಿಷ್ಯದ ಆಟಗಾರರನ್ನು ರೂಪಿಸುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ. ಹೀಗಾಗಿ ಇಂದು ಟೀಮ್‌ ಇಂಡಿಯಾದ ಮೀಸಲು ಸಾಮರ್ಥ್ಯ ಅತ್ಯಂತ ಶಕ್ತಿಶಾಲಿಯಾಗಿದೆ. ಒಬ್ಬರನ್ನೊಬ್ಬರು ಮೀರಿಸುವಂತಹ ಪ್ರಚಂಡ ಆಟಗಾರರು ತಂಡದಲ್ಲಿ ಇದ್ದಾರೆ’ ಎಂದು ಚಾಪೆಲ್‌ ಪ್ರಶಂಸಿಸಿದರು.

“ಇದಕ್ಕೆ ಅತ್ಯುತ್ತಮ ನಿದರ್ಶನವೆಂದರೆ, ಭಾರತ ತಂಡದ ಕಳೆದ ಆಸ್ಟ್ರೇಲಿಯ ಪ್ರವಾಸ. ತಂಡ ಪ್ರಮುಖ ಆಟಗಾರರ ಸೇವೆಯನ್ನು ಕಳೆದುಕೊಂಡೂ ಯುವ ಪ್ರತಿಭೆಗಳ ಬಲದಿಂದ 2-1 ಅಂತರದಲ್ಲಿ ಸರಣಿ ಗೆದ್ದು ಇತಿಹಾಸ ನಿರ್ಮಿಸಿತ್ತು. ಇದರ ಹಿಂದೆ ದ್ರಾವಿಡ್‌ ಅವರ ಪರಿಶ್ರಮ ಅಪಾರ. ಇಂದು ಭಾರತ ತಂಡದಲ್ಲಿ ಮಿಂಚುತ್ತಿರುವ ಪ್ರತಿಯೊಬ್ಬ ಯುವ ಆಟಗಾರನೂ ದ್ರಾವಿಡ್‌ ಗರಡಿಯಲ್ಲಿ ಪಳಗಿದವನೇ ಆಗಿದ್ದಾನೆಂಬುದು ವಿಶೇಷ’ ಎಂದು ಗ್ರೆಗ್‌ ಚಾಪೆಲ್‌ ಹೇಳಿದರು.

ಟಾಪ್ ನ್ಯೂಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.