ರಾಹುಲ್‌ ಗಾಂಧಿಯಿಂದಲೇ ಕಾಂಗ್ರೆಸ್‌ ಸರ್ವನಾಶ: ಶೆಟ್ಟರ್‌

Team Udayavani, Dec 15, 2019, 10:31 PM IST

ಜಮಖಂಡಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಪ್ರಬುದ್ಧತೆಯಿಲ್ಲ. ಅವರಿಗೆ ಯಾವ ವಿಷಯ ಹೇಳಬೇಕೆಂಬ ಪರಿಜ್ಞಾನ ಇಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏನನ್ನೂ ಆರಿಯದೇ ಮಾತಾಡುವ ರಾಜಕಾರಣಿ ರಾಹುಲ್‌ ಗಾಂಧಿ ಬಚ್ಚಾ. ಅವರಿಂದಲೇ ಕಾಂಗ್ರೆಸ್‌ ಹಿನ್ನಡೆ ಅನುಭವಿಸುತ್ತಿದೆ. ಅವರಿಂದಲೇ ಕಾಂಗ್ರೆಸ್‌ ಸರ್ವನಾಶ ಆಗಲಿದೆ.

“ರೇಪ್‌ ಇನ್‌ ಇಂಡಿಯಾ’ ಹೇಳಿಕೆ ದೇಶಕ್ಕೆ ಮಾಡಿದ ಅಪಮಾನ. ಕೂಡಲೇ ದೇಶದ ಜನತೆಯ ಕ್ಷಮೆಯಾಚಿಸಬೇಕು. ವೀರ ಸಾರ್ವಕರ್‌ ಬಗ್ಗೆ ಮಾತನಾಡುವ ಹಕ್ಕು ಅವರಿಗಿಲ್ಲ. ವೀರ ಸಾರ್ವಕರ್‌ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ್ದು ದೇಶಕ್ಕೆ ಗೊತ್ತಿದೆ ಎಂದರು.

ಅಧಿಕಾರ ದಾಹಕ್ಕೆ ಕಾಂಗ್ರೆಸ್‌-ಎನ್‌ಸಿಪಿ ಜತೆ ಕೈಜೋಡಿಸಿದ ಶಿವಸೇನೆ ನಡೆ ನಾಚಿಕೆಗೇಡಿತನ. ಬೆಳಗಾವಿ ಗಡಿ ಸಮಸ್ಯೆ, ಜಾತಿ ಸಮಸ್ಯೆ ಬಗ್ಗೆ ವಿನಾಕಾರಣ ಕ್ಯಾತೆ ತೆಗೆದಿರುವುದರ ಶಿವಸೇನೆ ಬಗ್ಗೆ ಕಾಂಗ್ರೆಸ್‌ ತನ್ನ ನಿಲುವನ್ನು ಸ್ಪಷ್ಟ ಪಡಿಸಬೇಕು ಎಂದವರು ಆಗ್ರಹಿಸಿದರು.

ಹೈಕಮಾಂಡ್‌ ಜತೆ ಚರ್ಚಿಸಿ ಶೀಘ್ರ ಸಚಿವ ಸಂಪುಟ ರಚನೆ ನಡೆಯಲಿದೆ. ಡಿಸಿಎಂ ಸ್ಥಾನವನ್ನು ಹೆಚ್ಚಿಸುವ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳಲಿದೆ. ಬಿಜೆಪಿ ಸರಕಾರ ತನ್ನು ಅವಧಿಯನ್ನು ಪೂರೈಸಲಿದೆ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ