
ದಾವಣಗೆರೆಯಲ್ಲಿ ಎಸ್‌ಟಿಪಿಐ ಉಪಕೇಂದ್ರ ಉದ್ಘಾಟಿಸಿದ ಸಚಿವ ರಾಜೀವ್ ಚಂದ್ರಶೇಖರ್
Team Udayavani, Nov 25, 2022, 7:34 PM IST

ದಾವಣಗೆರೆ: ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯಲ್ಲಿ ಸ್ಥಾಪಿಸಿರುವ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾದ (ಎಸ್‌ಟಿಪಿಐ) ದೇಶದ 63ನೇ ಹಾಗೂ ರಾಜ್ಯದ ಐದನೇ ಉಪಕೇಂದ್ರವನ್ನು ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ರಾಜ್ಯ ಖಾತೆ ಸಚಿವ ರಾಜೀವ್ ಚಂದ್ರಶೇಖರ್ ಉದ್ಘಾಟಿಸಿದರು.
ಇಲ್ಲಿಯ ಜಿ.ಎಚ್. ಪಾಟೀಲ್ ನಗರದ ಕರ್ನಾಟಕ ಮುಕ್ತ ವಿವಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರಾರಂಭಿಸಿರುವ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಉಪಕೇಂದ್ರಕ್ಕೆ ಶುಕ್ರವಾರ ವರ್ಚುವಲ್ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಭಾರತದ ಯುವಜನರು ಸ್ಥಾಪಿಸಿರುವ ಸ್ಟಾರ್ಟ್ ಅಪ್‌ಗ್ಳು ತಮ್ಮ ಸಂಶೋಧನೆ ಹಾಗೂ ಸಾಮರ್ಥ್ಯಗಳಿಂದ ಜಾಗತಿಕ ಮನ್ನಣೆ ಗಳಿಸಿವೆ. ನವಯುವ ಡಿಜಿಟಲ್ ಉದ್ದಿಮೆದಾರ ಕನಸಿಗೆ ಇಂಬು ಕೊಡುವ ನಿಟ್ಟಿನಲ್ಲಿ ದಾವಣಗೆರೆ ನಗರದಲ್ಲಿ ಎಸ್‌ಟಿಪಿಐ ಕೇಂದ್ರ ಸ್ಥಾಪಿಸಲಾಗಿದೆ. ಇದನ್ನು ಸದುಪಯೋಗ ಪಡಿಸಿಕೊಂಡು ಯುವ ಜನರು ತಂತ್ರಜ್ಞಾನ ಆಧಾರಿತ ಡಿಜಿಟಲ್ ಉತ್ಪನ್ನಗಳ ತಯಾರಿಕೆಯಲ್ಲಿ ಪ್ರಗತಿ ಸಾಧಿಸಬೇಕು ಎಂದರು.
ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಭೈರತಿ ಬಸವರಾಜ ಹಾಗೂ ಐಟಿ, ಬಿಟಿ, ಕೌಶಲ್ಯಾಭಿವೃದ್ಧಿ ಮತ್ತು ತರಬೇತಿ, ಕೈಗಾರಿಕೆ ವಾಣಿಜ್ಯ ಇಲಾಖೆ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ| ಇ.ವಿ.ರಮಣರೆಡ್ಡಿ ವರ್ಚುವಲ್ ಮೂಲಕ ಮಾತನಾಡಿದರು. ಸಂಸದ ಡಾ|ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ್ ರೆಡ್ಡಿ ಸೇರಿದಂತೆ ಮತ್ತಿತರು ಇದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
