ಮಹದಾಯಿ ವಿಚಾರದಲ್ಲಿ ಕರ್ನಾಟಕ ತಪ್ಪು ಮಾಡಿದ್ದು ಸಾಬೀತುಪಡಿಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ
Team Udayavani, Nov 30, 2020, 4:52 PM IST
ಬೆಳಗಾವಿ: ಮಹದಾಯಿ ವಿಚಾರದಲ್ಲಿ ಕರ್ನಾಟಕ ಯಾವತ್ತೂ ಕಾನೂನು ಉಲ್ಲಂಘನೆ ಮಾಡಿಲ್ಲ. ನಾವು ಹಾಗೆ ಮಾಡಿದ್ದೇವೆ ಎಂದು ಸಾಬೀತು ಪಡಿಸಿದರೆ ಈಗಲೇ ರಾಜೀನಾಮೆ ನೀಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಗೋವಾ ಮುಖ್ಯಮಂತ್ರಿಗಳಿಗೆ ನೇರ ಸವಾಲು ಹಾಕಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಗೋವಾದವರು ಮಹದಾಯಿ ವಿಷಯದಲ್ಲಿ ಮೊದಲಿಂದಲೂ ರಾಜಕಾರಣ ಮಾಡುತ್ತ ಬಂದಿದ್ದಾರೆ. ಅವರ ರಾಜಕಾರಣಕ್ಕೆ ನಾವು ತಲೆಕೆಡಿಸಿಕೊಳ್ಳುವದಿಲ್ಲ ಎಂದರು.
ಕರ್ನಾಟಕದವರು ಮಹದಾಯಿ ನೀರನ್ನು ತಿರುಗಿಸಿಕೊಂಡಿರುವದರಿಂದ ನದಿಯಲ್ಲಿ ನೀರಿನ ಅಭಾವ ಉಂಟಾಗಿದೆ ಎಂಬ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ ಹೇಳಿರುವದರಲ್ಲಿ ಯಾವುದೇ ಸತ್ಯಾಂಶವಿಲ್ಲ. ತಮ್ಮ ಆರೋಪ ಸಾಬೀತು ಪಡಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ತಿರುಗೇಟು ನೀಡಿದರು.
ಇದನ್ನೂ ಓದಿ:ಎಂಎಲ್ ಸಿ ವಿಶ್ವನಾಥ್ ಸಚಿವ ಸ್ಥಾನ ಆಸೆಗೆ ತಣ್ಣೀರೆರಚಿದ ಹೈಕೋರ್ಟ್
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444