ಆಪರೇಷನ್‌ಗೆ ಕೃಷ್ಣ ಸಾರಥ್ಯ?

ಎಸ್‌ಎಂಕೆ ಭೇಟಿಯಾದ ರಮೇಶ್‌ ಜಾರಕಿಹೊಳಿ, ಡಾ.ಸುಧಾಕರ್‌

Team Udayavani, May 27, 2019, 6:15 AM IST

ಬೆಂಗಳೂರು: ಲೋಕಸಭೆ ಚುನಾವಣೆ ಫ‌ಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಮತ್ತೆ ಆಪರೇಷನ್‌ ಕಮಲಕ್ಕೆ ಚಾಲನೆ ನೀಡುವ ಲಕ್ಷಣಗಳು ಕಂಡುಬರುತ್ತಿವೆ. ಇದಕ್ಕೆ ಇಂಬು ಕೊಡುವಂತೆ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಕಾಂಗ್ರೆಸ್‌ ಶಾಸಕರ ಬಂಡಾಯ ಗುಂಪಿನಲ್ಲಿ ಗುರುತಿಸಿಕೊಂಡಿರುವ ರಮೇಶ್‌ ಜಾರಕಿಹೊಳಿ ಹಾಗೂ ಡಾ.ಕೆ.ಸುಧಾಕರ್‌ ಭೇಟಿ ನೀಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್‌.ಆಶೋಕ್‌ ಅವರು ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲೇ, ಈ ಇಬ್ಬರು ಶಾಸಕರು ಭೇಟಿ ಮಾಡಿರುವುದು ನಾನಾ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ. ಈ ಬಾರಿ ಆಪರೇಷನ್‌ ಕಮಲವನ್ನು ಹೇಗಾದರೂ ‘ಸಕ್ಸಸ್‌’ ಮಾಡಬೇಕೆಂದು ಉದ್ದೇಶಿಸಿರುವ ಬಿಜೆಪಿ, ಈ ಬಾರಿ ಕೃಷ್ಣ ಗೆ ‘ಸಾರಥ್ಯ’ ನೀಡಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಜತೆಗೆ, ಜೆಡಿಎಸ್‌ ಸರ್ಕಾರ ಪತನಗೊಂಡಲ್ಲಿ, ಅದಕ್ಕೆ ‘ಜಾತಿ ಬಣ್ಣ ‘ ಅಂಟಿಕೊಳ್ಳಬಾರದೆಂಬ ಕಾರಣಕ್ಕಾಗಿ ಒಕ್ಕಲಿಗ ಸಮುದಾಯದ ನಾಯಕ ಕೃಷ್ಣ ಅವರ ‘ನಾಯಕತ್ವ’ದಲ್ಲಿ ಆಪರೇಷನ್‌ ನಡೆಸುವ ರಕ್ಷಣಾತ್ಮಕ ನಡೆಯನ್ನು ಬಿಜೆಪಿ ಇರಿಸುತ್ತಿದೆ ಎನ್ನಲಾಗಿದೆ.

ಈ ನಡುವೆ, ರಮೇಶ್‌ ಜಾರಕಿಹೊಳಿ ಜತೆ ಗುರುತಿಸಿಕೊಂಡಿರುವ ಮಹೇಶ್‌ ಕುಮಟಳ್ಳಿ ಹಾಗೂ ಶ್ರೀಮಂತ ಪಾಟೀಲ್ ಬೆಂಗಳೂರಿಗೆ ಆಗಮಿಸಿದ್ದು ಕುತೂಹಲ ಮೂಡಿಸಿದೆ. ಆದರೆ, ನೀರಾವರಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರ ಭೇಟಿಗೆ ನಾವು ಬಂದಿದ್ದೇವೆ. ನಾವು ಭಿನ್ನಮತೀಯರ ಜತೆ ಗುರುತಿಸಿಕೊಂಡಿಲ್ಲ ಎಂದು ಮಹೇಶ್‌ ಕುಮಟಳ್ಳಿ ಹೇಳಿದ್ದಾರೆ. ಆದರೆ, ಬಿ.ಸಿ.ಪಾಟೀಲ್ ಸೇರಿದಂತೆ ಹಲವರು ರಮೇಶ್‌ ಜಾರಕಿಹೊಳಿ ಸಂಪರ್ಕದಲ್ಲಿರುವುದಂತೂ ಹೌದು ಎಂದು ಕಾಂಗ್ರೆಸ್‌ ಮೂಲಗಳು ಅನುಮಾನ ವ್ಯಕ್ತಪಡಿಸಿವೆ.

ಪ್ರಮಾಣದ ನಂತರ: ಕೇಂದ್ರದಲ್ಲಿ ಮತ್ತೂಮ್ಮೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಇತ್ತ ರಾಜ್ಯ ರಾಜಕೀಯದಲ್ಲಿ ಬದಲಾವಣೆಗಳಿಗೆ ಚಾಲನೆ ಸಿಗಲಿದೆ. ಮೇ 30ರಂದು ನರೇಂದ್ರಮೋದಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಆ ನಂತರವಷ್ಟೇ ರಾಜ್ಯದ ಬಗ್ಗೆ ಕೇಂದ್ರದ ನಾಯಕರು ಗಮನ ಹರಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಬಿಜೆಪಿ ಮೂಲಗಳ ಪ್ರಕಾರ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ 20 ಕ್ಕೂ ಹೆಚ್ಚು ಶಾಸಕರು ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾಗುವವರೆಗೂ ಆಪರೇಷನ್‌ ಕಮಲದ ಬಗ್ಗೆ ಯಾವುದೇ ರೀತಿಯ ಚಟುವಟಿಕೆ ನಡೆಸದಂತೆ ಪಕ್ಷದ ಹೈಕಮಾಂಡ್‌ ಸೂಚನೆ ನೀಡಿರುವುದರಿಂದ, ರಾಜ್ಯ ನಾಯಕರು ಆಪರೇಷನ್‌ ಬಗ್ಗೆ ಮಾತನಾಡುತ್ತಿಲ್ಲ.

ಇದರ ನಡುವೆಯೇ ಮೇ 29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ದೆಹಲಿಯಲ್ಲಿ ಶುಕ್ರವಾರ ಸಿಡಬ್ಲ್ಯೂಸಿ ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಪರಿಸ್ಥಿತಿ ಬಗ್ಗೆ ರಾಹುಲ್ಗಾಂಧಿಯವರಿಗೆ ಮನವರಿಕೆ ಮಾಡಿಕೊಟ್ಟಿದ್ದು, ಶಾಸಕಾಂಗ ಪಕ್ಷದ ಸಭೆ ಕುತೂಹಲ ಮೂಡಿಸಿದೆ.

ಈ ಮಧ್ಯೆ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಸಹ ಬೆಳವಣಿಗೆಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜತೆ ಭಾನುವಾರವೂ ಚರ್ಚಿಸಿದ್ದಾರೆ.

ಅತೃಪ್ತರನ್ನು ಹಿಡಿದಿಟ್ಟುಕೊಳ್ಳಲು ಸಚಿವಗಿರಿ ಆಮಿಷ ನೀಡಲು ಯೋಜನೆ ರೂಪಿಸಲಾಗಿದೆ. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯ ನಂತರವಷ್ಟೇ ಈ ಕುರಿತು ಸ್ಪಷ್ಟತೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಶಾಸಕಾಂಗ ಪಕ್ಷದ ಸಭೆಗೆ ಮುನ್ನ ಸಿದ್ದರಾಮಯ್ಯ ಅವರ ಜತೆ ಚರ್ಚಿಸುವ ಸಾಧ್ಯತೆಯೂ ಇದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಮೈಸೂರು/ ಬೆಂಗಳೂರು: ಪಾಕಿಸ್ಥಾನ ಪರ ಘೋಷಣೆ ಕೂಗಿದ ವಿದ್ಯಾರ್ಥಿನಿ ಅಮೂಲ್ಯಾ ಲಿಯೋನಾಗೆ ನಕ್ಸಲ್‌ ನಂಟು ಇರುವುದು ಸಾಬೀತಾ ಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ...

  • ಬೆಂಗಳೂರು: ಅನಕ್ಷರತೆ, ಬಡತನ, ಮೂಢನಂಬಿಕೆ, ಸಂಪ್ರದಾಯಗಳು,ಅರಿವಿನ ಕೊರತೆಯಿಂದಾಗಿ ರಾಜ್ಯದಲ್ಲಿ ಬಾಲ್ಯವಿವಾಹ ಹೆಚ್ಚುತ್ತಲೇ ಇದೆ. ಕಳೆದ ಐದು ವರ್ಷಗಳಲ್ಲಿ 453...

  • ಬೆಂಗಳೂರು: ಅಮೂಲ್ಯಾ ಹೇಳಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ "ಮುಸಲ್ಮಾನ್‌,ದಲಿತ,ಕಾಶ್ಮೀರಿ, ಟ್ರಾನ್ಸ್‌,ಆದಿವಾಸಿ-ಮುಕ್ತಿ, ಮುಕ್ತಿ, ಮುಕ್ತಿ, ಈ ಕೂಡಲೇ' ಎಂಬ...

  • ಬೆಂಗಳೂರು: ರಾಜ್ಯದ ಸರಕಾರಿ, ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ವಿದೇಶೀ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಸಂದರ್ಭದಲ್ಲಿ ಹೆಚ್ಚು ನಿಗಾ ವಹಿಸಬೇಕು ಎಂದು ಕಾಲೇಜು...

  • ಬೆಂಗಳೂರು: ಗ್ರಾಮೀಣ ಭಾಗದ ಗ್ರಂಥಾಲಯಗಳಿಗೆ ಆಧುನಿಕ ಸ್ಪರ್ಶ ಕೊಟ್ಟು, ಅವುಗಳನ್ನು ಓದುಗ ಸ್ನೇಹಿ ಮತ್ತು ಜನಸ್ನೇಹಿ ಜ್ಞಾನ ಕೇಂದ್ರಗಳನ್ನಾಗಿ ಮಾಡಲು ಗ್ರಾಮೀಣಾಭಿವೃದ್ಧಿ...

ಹೊಸ ಸೇರ್ಪಡೆ