ಕಿಡಿ ಕಿಡಿಯಾಗಿ ರಾಜೀನಾಮೆ ನೀಡಲು ಹೊರಟ ರಮೇಶ್‌ ಜಾರಕಿಹೊಳಿ

ಸತೀಶ್‌ ಜಾರಕಿಹೊಳಿ ದ್ರೋಹಿ,ಲಕ್ಷ್ಮೀ ಹೆಬ್ಬಾಳ್ಕರ್‌ ಬಗ್ಗೆ ಹೇಳುವುದು ಬಹಳ ಇದೆ

Team Udayavani, Apr 24, 2019, 2:29 PM IST

ಬೆಳಗಾವಿ : ಬಂಡಾಯ ಶಾಸಕ ರಮೇಶ್‌ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ , ಕಾಂಗ್ರೆಸ್‌ಗೆ ಗುಡ್‌ಬೈ ಹೇಳುವುದು ಖಚಿತಾಗಿದೆ.

ಬುಧವಾರ ಮಧ್ಯಾಹ್ನ ಬೆಂಗಳೂರಿಗೆ ಹೊರಟ ವೇಳೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್‌ ಜಾರಕಿಹೊಳಿ, ಸತೀಶ್‌ ಜಾರಕಿಹೊಳಿ ಗೋಮುಖ ನೋಡಿ ಮೋಸ ಹೋಗಿದ್ದೇನೆ. ಕಾಂಗ್ರೆಸ್‌ನಲ್ಲಿ ಭಿನ್ನಮತ ಆರಂಭಿಸಿದ್ದೇ ಸತೀಶ್‌.ನಮ್ಮ ಮನೆಗೆ ಬಂದು ಅಳುತ್ತಾ ಕುಳಿತಿದ್ದ. ಬರೀ ಸಚಿವನಾದರೆ ನಮ್ಮ ಮನೆತನಕ್ಕೆ ಹಿನ್ನಡೆ ಎಂದಿದ್ದ. ದ್ರೋಹಿಗಳಿಂದ ಕಾಂಗ್ರೆಸ್‌ ಪಕ್ಷ ಹಾಳಾಗಿ ಹೋಗಿದೆ ಎಂದು ಕಿಡಿ ಕಾರಿದರು.

ನಾನು ಉಪ ಚುನಾವಣೆಯಲ್ಲಿ ಮಾತ್ರ ಗೋಕಾಕ್‌ನಿಂದ ಸ್ಪರ್ಧಿಸುತ್ತೇನೆ. ಮುಂದಿನ ವಿಧಾನ ಸಭಾ ಚುನಾವಣೆ ಯಮಕನ ಮರಡಿಯಲ್ಲಿ ಸ್ಪರ್ಧಿಸುತ್ತೇನೆ ಎಂದು ಸಹೋದರ, ಸಚಿವ ಸತೀಶ್‌ ಜಾರಕಿಹೊಳಿಗೆ ಶಾಕ್‌ ನೀಡಿದರು.

ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧವೂ ಆಕ್ರೋಶ ಹೊರ ಹಾಕಿದ ರಮೇಶ್‌ ಜಾರಕಿಹೊಳಿ, ಹೌದು ನಮ್ಮ ಸ್ಥಿತಿ ತೋಳ ಬಂತು ತೋಳ ರೀತಿ ಆಗಿದೆ. ಆಕೆಯ ಬಗ್ಗೆಎದುರು ಬದುರು ಕುಳಿತು ಮಾತನಾಡುವುದು ತುಂಬಾ ಇದೆ. ಆಕೆಯ ಕುಟುಂಬದ ಹಿನ್ನಲೆ ಏನು, ನಮ್ಮ ಕುಟುಂಬದ ಹಿನ್ನಲೆ ಏನು ಎಂದು ಹೇಳಬೇಕು ಎಂದರು.

ಕಾರಜೋಳ ಜೊತೆ ಪ್ರಯಾಣ
ರಮೇಶ್‌ ಜಾರಕಿಹೊಳಿ ಪ್ರಯಾಣಿಸುತ್ತಿರುವ ವಿಮಾನದಲ್ಲೇ ಬಿಜೆಪಿ ನಾಯಕ ಗೋವಿಂದ ಕಾರಜೋಳ ಅವರೂ ಪ್ರಯಾಣಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.


ಈ ವಿಭಾಗದಿಂದ ಇನ್ನಷ್ಟು

  • ಹುಬ್ಬಳ್ಳಿ: ರಾಜ್ಯದ ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ದಾಖಲೆ ಮತದಾನವಾಗಿದೆ. ಕುಂದಗೋಳದಲ್ಲಿ ಶೇ.82.42, ಚಿಂಚೋಳಿಯಲ್ಲಿ ಶೇ.71 ಮತದಾನವಾಗಿದೆ. ಅಲ್ಲಲ್ಲಿ...

  • ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಉಳಿಸಲು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಪ್ರಯತ್ನಪಡುತ್ತಿರುವಂತೆಯೇ, ಜೆಡಿಎಸ್‌ ಜತೆಗಿನ ಮೈತ್ರಿ ಖತಂಗೊಳಿಸುವುದೇ ಉತ್ತಮ...

  • ಬೆಂಗಳೂರು: ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ರೀತಿಯಲ್ಲಿ ಲೋಕಸಭಾ ಚುನಾವಣೋತ್ತರ ಸಮೀಕ್ಷಾ ಫ‌ಲಿತಾಂಶ ಹೊರಬಿದ್ದಿದ್ದು, ಮೈತ್ರಿ ಪಕ್ಷಗಳಿಗೆ ದೊಡ್ಡ ಆಘಾತ...

  • ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಿಗೆ ಭಾನುವಾರ ನಡೆದ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು,...

  • ಕಲಬುರಗಿ: ಚಿಂಚೋಳಿ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನವರು ಮತದಾರರಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಡಾ.ಉಮೇಶ ಜಾಧವ್‌ ಅವರು ಪೊಲೀಸ್‌...

ಹೊಸ ಸೇರ್ಪಡೆ