ರಾಣೆಬೆನ್ನೂರು ಟಿಕೆಟ್ ಅರುಣ್ ಕುಮಾರ್ ಪಾಲು: ಶಂಕರ್, ಈಶ್ವರಪ್ಪ ಪುತ್ರನಿಗೆ ನಿರಾಸೆ

Team Udayavani, Nov 15, 2019, 10:30 AM IST

ಬೆಂಗಳೂರು: ಉಪಚುನಾವಣೆಯಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಅರುಣ್ ಕುಮಾರ್ ಪೂಜಾರ ಪಾಲಾಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಅನರ್ಹ ಶಾಸಕ ಆರ್ ಶಂಕರ್ ಗೆ ನಿರಾಸೆಯಾಗಿದೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಣೆಬೆನ್ನೂರು ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದರು.

ಆರ್ ಶಂಕರ್ ಅವರನ್ನು ವಿಧಾನಪರಿಷತ್ ಗೆ ಆಯ್ಕೆ ಮಾಡಿಸಿ ಅಲ್ಲಿಂದ ಮಂತ್ರಿ ಮಾಡಿಸುವ ಬಗ್ಗೆ ಮಾತು ಕೊಟ್ಟಿದ್ದೇನೆ. ಶಂಕರ್ ಕೂಡಾ ಸಂತೋಷದಿಂದ ಒಪ್ಪಿದ್ದಾರೆ ಎಂದು ಬಿಎಸ್ ವೈ ಹೇಳಿದರು.

ರಾಣೆಬೆನ್ನೂರು ಕ್ಷೇತ್ರದ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಹಲವು ಆಕಾಂಕ್ಷಿಗಳಿದ್ದರು. ಸಚಿವ ಈಶ್ವರಪ್ಪ ಪುತ್ರ ಕಾಂತೇಶ್ ಕೂಡಾ ರೇಸ್ ನಲ್ಲಿದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ