ಪುತ್ರನ ಚಿತ್ರಕ್ಕೆ ರವಿಚಂದ್ರನ್ ಆ್ಯಕ್ಷನ್-ಕಟ್..!
ಲಾಕ್ಡೌನ್ ಸಮಯದಲ್ಲಿ ಎಡಿಟ್ ಡೆಸ್ಕ್ನಲ್ಲಿ ನಿರತರಾಗಿರುವ ಹಿರಿಯ ನಟ ಚಿತ್ರಕಥೆಯ ಬಗ್ಗೆ ಸುಳಿವು ನೀಡಿಲ್ಲ.
Team Udayavani, May 31, 2020, 7:24 PM IST
ಬೆಂಗಳೂರು: ರವಿಚಂದ್ರನ್ ಅವರ ಪುತ್ರನ ಸಿನಿಮಾವನ್ನು ನಿರ್ದೇಶನ ಮಾಡುವ ಬಗ್ಗೆ ಸೂಚನೆ ನೀಡಿದ್ದಾರೆ. ನಟ-ನಿರ್ದೇಶಕ-ನಿರ್ಮಾಪಕ, ಅಭಿಮಾನಿಗಳ ಕ್ರೇಜಿ ಸ್ಟಾರ್ ತಮ್ಮ ಪುತ್ರನಿಗಾಗಿ ಸ್ಕ್ರಿಪ್ಟ್ನ ತಯಾರಿ ನಡೆಸಲು ಲಾಕ್ಡೌನ್ ಸಮಯವನ್ನು ಬಳಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ರವಿಚಂದ್ರ ಜತೆಗೆ ಅವರ ಎರಡನೇ ಮಗನಾದ ವಿಕ್ರಂ ರವಿಚಂದ್ರನ್ ತೆರೆಯ ಮೇಲೆ ಕಾಣಿಸಲಿದ್ದಾರೆ.
ಲಾಕ್ಡೌನ್ ಸಮಯದಲ್ಲಿ ಎಡಿಟ್ ಡೆಸ್ಕ್ನಲ್ಲಿ ನಿರತರಾಗಿರುವ ಹಿರಿಯ ನಟ ಚಿತ್ರಕಥೆಯ ಬಗ್ಗೆ ಸುಳಿವು ನೀಡಿಲ್ಲ. “ನಾನು ರವಿ ಬೋಪಣ್ಣ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದೇನೆ ಮತ್ತು ಈ ನಡುವೆ ಮೂರು ಸ್ಕ್ರಿಪ್ಟ್ಗಳನ್ನು ಪೂರ್ಣಗೊಳಿಸಿದೆ. ಒಂದು ಚಿತ್ರದಲ್ಲಿ ತಂದೆ ಮತ್ತು ಮಗ ಒಟ್ಟಿಗೆ ಸೇರಲಿದ್ದೇವೆ. ನಾನು ಹಾಗೂ ವಿಕ್ರಮ್ ಆ ಚಿತ್ರದಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದು ಚಿತ್ರ ನಿರ್ದೇಶನ ನನ್ನದೇ ಆಗಿರಲಿದೆ’ ಎಂದಿದ್ದಾರೆ.
“ಇದು ನನ್ನ ಕಡೆಯಿಂದ ಇನ್ನೊಂದು ವಿಶಿಷ್ಟ ಪ್ರಯತ್ನವಾಗಿದೆ. ವಿನೂತನ ಚಿತ್ರಕಥೆಯನ್ನಿದು ಹೊಂದಿರಲಿದೆ. ರಾಜ್ಯವು ಲಾಕ್ ಡೌನ್ ನಿಂದ ಹೊರಬಂದ ನಂತರ ನಾನು ಯೋಜನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸುತ್ತೇನೆ” ಎಂದು ರವಿಚಂದ್ರನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ