Red Alert: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ
ಉತ್ತರ ಕನ್ನಡದಲ್ಲೂ ವ್ಯಾಪಕ ಮಳೆ : ಹವಾಮಾನ ಇಲಾಖೆ ಮುನ್ನೆಚ್ಚರಿಕೆ
Team Udayavani, Jul 31, 2024, 9:00 PM IST
ಬೆಂಗಳೂರು: ಕರಾವಳಿಯಲ್ಲಿ ಗುರುವಾರ (ಆ.1) ಭಾರಿ ಮಳೆಯಾಗುವ ಸಾಧ್ಯತೆಗಳಿರುವುದರಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದರೆ, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಆ.1ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಮತ್ತು ಕೊಡಗು ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕೊಟ್ಟಿದೆ.
ಜು. 31 ರಿಂದ ಆ. 08 ರವರೆಗೆ #ಮಳೆ #ಮುನ್ಸೂಚನೆ:
ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 03 ರವರೆಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ, ನಂತರ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. pic.twitter.com/DSWe7sEFLJ— Karnataka State Natural Disaster Monitoring Centre (@KarnatakaSNDMC) July 31, 2024
ಗಂಟೆಗೆ 55 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯುದ್ಧಕ್ಕೂ ಹಾಗೂ ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಗಳಿವೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ತುಂತುರು ಮಳೆ ಮತ್ತು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ತುಂತುರು ಮಳೆ ಮತ್ತು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಗುಂಬೆಯಲ್ಲಿ ಅತ್ಯಧಿಕ ಮಳೆ:
ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 21 ಸೆಂ.ಮೀ. ಅತ್ಯಧಿಕ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ, ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್‌ನಲ್ಲಿ ತಲಾ 19, ಉಡುಪಿಯ ಕಾರ್ಕಳದಲ್ಲಿ 18 ಸೆಂ.ಮೀ. ಮಳೆಯಾಗಿದೆ.
ಭದ್ರಾ ನದಿ ಅಪಾಯ ಮಟ್ಟ:
ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಭದ್ರಾ ನದಿಯು ಅತಿ ಹೆಚ್ಚು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತಗ್ಗು ಪ್ರದೇಶದಲ್ಲಿರುವ ಸಾರ್ವಜನಿಕರು ತಮ್ಮ ಅಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆವಹಿಸಿ ಮುಂಜಾಗ್ರತೆ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.