ಅತಿಥಿ ಉಪನ್ಯಾಸಕರ ಗೌರವಧನ ಬಿಡುಗಡೆ
Team Udayavani, May 8, 2020, 9:27 PM IST
ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ 2019- 20ನೇ ಸಾಲಿನ ಬಾಕಿ ಗೌರವಧನವನ್ನು ಹಣಕಾಸು ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದೆ.
ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಅತಿಥಿ ಉಪನ್ಯಾಸಕರಿಗೆ ಗೌರವಧನ ಬಿಡುಗಡೆ ಮಾಡಿರಲಿಲ್ಲ. ಅಲ್ಲದೇ ವಿಶ್ವವಿದ್ಯಾನಿಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೂ ವಿವಿಗಳಿಂದ ವೇತನ ನೀಡಿರಲಿಲ್ಲ. ಗೌರವಧನ ಬಿಡುಗಡೆ ಮಾಡದೇ ಇರುವ ಬಗ್ಗೆ ಅತಿಥಿ ಉಪನ್ಯಾಸಕರು ಸರಕಾರಕ್ಕೆ ಮನವಿ ಸಲ್ಲಿದ್ದರು. ಅದಂರಂತೆ ವಿಶ್ವವಿದ್ಯಾನಿಲಯಗಳು ಅತಿಥಿ ಉಪನ್ಯಾಸಕರ ಗೌರವಧನ ಬಿಡುಗಡೆ ಮಾಡಿತ್ತು. ಈಗ ಸರಕಾರವು ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನದ ಬಾಕಿ ಹಣ ಬಿಡುಗಡೆ ಮಾಡಿದೆ.
ಬಾಕಿ ಹಣ ಬಿಡುಗಡೆ ಸಂಬಂಧ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ಒಪ್ಪಿದ್ದು ಮುಂದಿನ ವಾರ ಉಪನ್ಯಾಸಕರಿಗೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ| ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.