ವಿಧಾನಸೌಧಕ್ಕೂ ತಟ್ಟಿದ ಕೊರೊನಾ ಆತಂಕ ಗ್ಯಾಲರಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ
Team Udayavani, Mar 16, 2020, 6:03 PM IST
ವಿಧಾನಸಭೆ:ಕೊರೊನಾ ಆತಂಕ ವಿಧಾನಸೌಧಕ್ಕೂ ತಟ್ಟಿದ್ದು, ವಿಧಾನಸಭೆ ಕಲಾಪ ವೀಕ್ಷಿಸಲು ಬರುವ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
ಮಾರ್ಚ್ 17 ರಿಂದ 20 ರವರೆಗೆ ಸ್ಪೀಕರ್ ಗ್ಯಾಲರಿ ಹಾಗೂ ಸಾರ್ವಜನಿಕರ ಗ್ಯಾಲರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಸೋಮವಾರ ಸದನದಲ್ಲಿ ಈ ಕುರಿತು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಕಟಣೆ ಹೊರಡಿಸಿದ್ದು, ಕೊರೊನಾ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಗ್ಯಾಲರಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಶಾಸಕರು ಹಾಗೂ ಸಚಿವರು ಸಹ ಗ್ಯಾಲರಿ ಪ್ರವೇಶ ಕೋರಿ ಮನವಿ ಸಲ್ಲಿಸಬಾರದು. ಪಾಸ್ ಸಹ ವಿತರಿಸಬಾರದು ಎಂದು ಹೇಳಿದರು.