ಸಿದ್ದರಾಮಯ್ಯ,ಗುಂಡೂರಾವ್‌ ವಿರುದ್ಧ ರೋಷನ್‌ ಬೇಗ್‌ ಆಕ್ರೋಶ

ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ, ಜಮೀರ್‌ ಅಹಮದ್‌ ಖಾನ್‌ ತಿರುಗೇಟು

Team Udayavani, May 21, 2019, 1:34 PM IST

Roshan Baig, outrage ,Dinesh Gundu rao, Siddaramaiah

ಬೆಂಗಳೂರು : ಚುನಾವಣೋತ್ತರ ಸಮೀಕ್ಷೆಗಳು ಎನ್‌ಡಿಎ ಗೆಲುವಿನ ಭವಿಷ್ಯ ನುಡಿದ ಬೆನ್ನಲ್ಲೇ ವಿಪಕ್ಷಗಳಲ್ಲಿ ತಳಮಳ ಆರಂಭವಾಗಿದ್ದು, ರಾಜ್ಯ ಕಾಂಗ್ರೆಸ್‌ನಲ್ಲಿ ಭಿನ್ನಮತಭುಗಿಲೆದ್ದಿದ್ದು, ಮಾಜಿ ಸಚಿವ, ಶಾಸಕ ರೋಷನ್‌ ಬೇಗ್‌ ಅವರು ಕಾಂಗ್ರೆಸ್‌ ನಾಯಕರ ವಿರುದ್ಧ ಬಹಿರಂಗ ಆಕ್ರೋಶ ಹೊರ ಹಾಕಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೋಷನ್‌ ಬೇಗ್‌ , ಎಕ್ಸಿಟ್‌ ಪೋಲ್‌ ನೋಡಿದರೆ ನನಗೆ ಬೇಸರವಾಗುತ್ತದೆ. ಸಿದ್ದರಾಮಯ್ಯ ಮತ್ತು ದಿನೇಶ್‌ ಗುಂಡೂರಾವ್‌ ಸೇರಿಕೊಂಡು ಕಾಂಗ್ರೆಸ್‌ ಪಕ್ಷವನ್ನು ಈ ಗತಿಗೆ ತಂದಿದ್ದಾರೆ ಎಂದರು.

ಕಾಂಗ್ರೆಸ್‌ ನಾಯಕರು ನಡೆದುಕೊಂಡ ರೀತಿ ಸರಿಯಿಲ್ಲ, ಅಹಂಕಾರ, ದುರಹಂಕಾರ ಸರಿಯಲ್ಲ . ನಿಮ್ಮ ನಡತೆ ನೋಡಿ ಎಲ್ಲರಿಗೂ ಬೇಸರ ಆಗಿದೆ ಎಂದರು.

ಇದೇ ವೇಳೆ ಕಾಂಗ್ರೆಸ್‌ ಅಲ್ಪಸಂಖ್ಯಾತರ ಪರ ಕೆಲಸ ಮಾಡುತ್ತಿಲ್ಲ, ಅಲ್ಪಸಂಖ್ಯಾತರನ್ನು ತುಳಿಯುತ್ತಿದೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಅದಕ್ಕಾಗಿ ಕಾಂಗ್ರೆಸ್‌ಗೆ ಈ ಗತಿ ಬಂದಿದೆ. ದಿನೇಶ್‌ ಗುಂಡೂರಾವ್‌ ನೈತಿಕತೆ ಇದ್ದರೆ ರಾಜೀನಾಮೆ ನೀಡಲಿ ಎಂದು ಸವಾಲು ಹಾಕಿದರು.

ಲಿಂಗಾಯತ ಧರ್ಮ ಒಡೆಯಲು ಮುಂದಾಗಿರುವುದರಿಂದ ಕಾಂಗ್ರೆಸ್ 79 ಸ್ಥಾನಕ್ಕೆ.ಇಳಿಯಲು ಕಾರಣವಾಗಿದೆ ಎಂದರು.

ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಯೋಚನೆ ಮಾಡಿಲ್ಲ. ಮುಂದೆ ಯೋಚಿಸುತ್ತೇನೆ ಎಂದು ಕುತೂಹಲ ಮೂಡಿಸಿದ್ದಾರೆ.

ಜಮೀರ್‌ ತಿರುಗೇಟು
ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ಸುದ್ದಿಗೋಷ್ಠಿ ನಡೆಸಿ ರೋಷನ್‌ ಬೇಗ್‌ಗೆ ತಿರುಗೇಟು ನೀಡಿದರು. ಬೇಗ್‌ ಅಧಿಕಾರ ದಾಹಿ, ಅವರಿಗೆ ಗೊತ್ತಿದ್ದರೆ ಮೊದಲೆ ಯಾಕೆ ಹೇಳಲಿಲ್ಲ, ಕಾಂಗ್ರೆಸ್‌ ಸರ್ಕಾರ ಬಂದಾಗಲೆಲ್ಲ ಸಚಿವರಾಗಿದ್ದಾರೆ, ಅವರು ಅಧಿಕಾರ ಅನುಭವಿಸಿದ್ದಾರೆ. ಅಧಿಕಾರ ಕೊಟ್ಟಾಗ ಕಾಂಗ್ರೆಸ್‌ ಒಳ್ಳೆಯ ಪಕ್ಷ ವೇ ಎಂದು ತೀವ್ರ ವಾಗ್ಧಾಳಿ ನಡೆಸಿದ್ದಾರೆ.

ಇಷ್ಟು ದಿನ ಕಾಂಗ್ರೆಸ್ ನಲ್ಲಿ ಅಧಿಕಾರ ಅನುಭವಿಸಿದಾಗ ಎಲ್ಲವೂ ಸರಿಯಾಗಿತ್ತು. ಇವರಿಗೆ ಎಂಪಿ ಟಿಕೆಟ್ ನೀಡಿಲ್ಲ ಎಂದ ಮಾತ್ರಕ್ಕೆ ಕಾಂಗ್ರೆಸ್ ಸರಿಯಿಲ್ಲ ಎಂದು ಹೇಳುತ್ತಿದ್ದಾರೆ. ಎಕ್ಸಿಟ್ ಪೋಲ್ ನೋಡಿ ಅವರು ಹೇಳಿಕೆ ನೀಡುತ್ತಿದ್ದಾರೆ. ಅವರು ರಾಜಕೀಯವಾಗಿ ಬೇರೆ ತೀರ್ಮಾನ ಮಾಡಿದಂತೆ ಕಾಣುತ್ತದೆ. ಅವರು ಹಿರಿಯ ನಾಯಕರು ಅವರ ಹೇಳಿಕೆಯನ್ನು ಖಂಡಿಸುತ್ತೇನೆ ಎಂದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ