ಅಂತಾರಾಷ್ಟ್ರೀಯ ಖ್ಯಾತಿಯ ಇತಿಹಾಸಕಾರ ಷ.ಶೆಟ್ಟರ್ ನಿಧನ
Team Udayavani, Feb 28, 2020, 8:42 AM IST
ಬೆಂಗಳೂರು: ಅಂತಾರಾಷ್ಟ್ರೀಯ ಖ್ಯಾತಿಯ ಇತಿಹಾಸಕಾರ ಷ.ಶೆಟ್ಟರ್ ಶುಕ್ರವಾರ ಮುಂಜಾನೆ ನಿಧನರಾದರು. 85 ವರ್ಷದ ಷ. ಶೆಟ್ಟರ್ ಅವರು ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಭೂಪಸಂದ್ರದ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತ್ಯಕ್ರಿಯೆ ಬಗ್ಗೆ ಈವರೆಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಬಳ್ಳಾರಿ ಜಿಲ್ಲೆಯ ಹಂಪಸಾಗರದಲ್ಲಿ 1935ರ ಡಿಸೆಂಬರ್ 11ರಂದು ಷ.ಶೆಟ್ಟರ್ ಅವರು ಜನಿಸಿದ್ದರು. ಮೈಸೂರು, ಧಾರವಾಡ ಮತ್ತು ಕೇಂಬ್ರಿಡ್ಜ್ ಗಳಲ್ಲಿ ಉನ್ನತ ವ್ಯಾಸಂಗ ನಡೆಸಿದ್ದರು.