ಮರಳು ಸಾಗಾಣಿಕೆ ವ್ಯವಹಾರ ಆಗಬಾರದು :ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಜಿಲ್ಲಾಧಿಕಾರಿ

ಹೊಸ ಮರಳು ನೀತಿ-2020ರ ಅನ್ವಯ ಮರಳು ನಿಕ್ಷೇಪ ಗುರುತಿಸಿ: ಜಿಲ್ಲಾಧಿಕಾರಿ

Team Udayavani, Oct 22, 2020, 7:06 PM IST

ಮರಳು ಸಾಗಾಣಿಕೆ ವ್ಯವಹಾರ ಆಗಬಾರದು :ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಜಿಲ್ಲಾಧಿಕಾರಿ

ಕಾರವಾರ : ಹೊಸ ಮರಳು ನೀತಿ-2020ರ ಅನ್ವಯ ಜಿಲ್ಲೆಯ ಹಳ್ಳ, ಕೊಳ್ಳ, ನದಿ ಹಾಗೂ ಅಣೆಕಟ್ಟಿನ ಹಿನ್ನಿರಿನಲ್ಲಿ ಲಭ್ಯವಿರುವ ಮರಳು ನಿಕ್ಷೇಪವನ್ನು ಗುರುತಿಸುವ ಕಾರ್ಯವನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಕೆ.ಹರೀಶ್ ಕುಮಾರ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ಎಸಿ, ತಹಶೀಲ್ದಾರ್ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿ, ಈ ಹೊಸ ಮರಳು ನೀತಿ ಪ್ರಕಾರ , ಬಡವರಿಗೆ ಮತ್ತು ಸ್ಥಳೀಯರಿಗೆ ದೊರೆಯಬೇಕೆಂಬ ಉದ್ದೇಶದಿಂದ ಹೊಸ ನೀತಿ ಮಾಡಲಾಗಿರುವುದರಿಂದ ಹಳ್ಳ, ಕೊಳ್ಳ, ನದಿ, ಅಣೆಕಟ್ಟಿನ ಹಿನ್ನೀರಿನಲ್ಲಿರುವ ಮರಳು ನಿಕ್ಷೇಪಗಳನ್ನು ಗುರುತಿಸಿ ಅರ್ಹರಿಗೆ ಮರಳು ದೊರಕುವಂತೆ ಮಾಡಿ. ಈ ನಿಟ್ಟಿನಲ್ಲಿ ಸ್ಥಳೀಯ ಅಧಿಕಾರಿಗಳ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಮರಳು ಸಾಗಾಣಿಕೆ ದಂಧೆ ಆಗಿ ಮಾರ್ಪಾಡಬಾರದು ಎಂದು ಅವರು ಖಡಕ್ ಆಗಿ ಸೂಚಿಸಿದರು.

ಇದನ್ನೂ ಓದಿ:ನೌಕಾದಳ ಮುಖ್ಯಸ್ಥ ಅಡ್ಮಿರಲ್ ಕರಮ್‌ ಬೀರ್‌ ಸಿಂಗ್ ಕಾರವಾರ ನೌಕಾನೆಲೆಗೆ ಭೇಟಿ

ರಾಜ್ಯದ ಭೌಗೋಳಿಕ, ಭೂವೈಜ್ಞಾನಿಕ ಮತ್ತು ಆಡಳಿತಾತ್ಮಕ ಹಿನ್ನೆಲೆಯನ್ನು ಪರಿಗಣಿಸಿ ಸರ್ಕಾರಿ ಮತ್ತು ಸಾರ್ವಜನಿಕ ನಿರ್ಮಾಣ ಕಾಮಗಾರಿಗಳಿಗೆ ನಿಯಮಿತವಾಗಿ ಮತ್ತು ಸುಲಭವಾಗಿ ಕೈಗೆಟುಕುವ ದರದಲ್ಲಿ ಮರಳು ದೊರೆಯುವಂತೆ ಇರಬೇಕು ಮತ್ತು ಪರಿಸರಕ್ಕೆ ಧಕ್ಕೆಯಾಗದಂತೆ ವೈಜ್ಞಾನಿಕವಾಗಿ ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಲು ಹಳ್ಳ, ನದಿ, ಕೆರೆ, ಅಣೆಕಟ್ಟು ಮತ್ತು ಅಣೆಕಟ್ಟಿನ ಹಿನ್ನೀರಿನ ನದಿಪಾತ್ರದಲ್ಲಿನ ಮರಳು ನಿಕ್ಷೇಪಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲು ಹೊಸ ಮರಳು ನೀತಿಯನ್ನು ಪ್ರಸ್ತಾಪಿಸಿದೆ. ಈ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಹೇಳಿದರು.

ಈ ಪ್ರಸ್ತಾವನೆಯಂತೆ ಮೊದಲನೇ, ಎರಡನೇ ಮತ್ತು ಮೂರನೇ ಶ್ರೇಣಿಯ ಹಳ್ಳ ಮತ್ತು ಕೆರೆಗಳಲ್ಲಿ ಲಭ್ಯವಿರುವ ಮರಳು ನಿಕ್ಷೇಪಗಳನ್ನು  ಕಂದಾಯ, ಅರಣ್ಯ, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ ಗುರುತಿಸಬೇಕು. ನಾಲ್ಕು, ಐದು ಮತ್ತು ಆರನೇ ಕ್ರಮಾಂಕದ ಹೊಸ ನೀತಿ ನದಿ, ಜಲಾಶಯ ಹಾಗೂ ಅಣೆಕಟ್ಟಿನ ಹಿನ್ನೀರಿನ ನದಿಪಾತ್ರದಲ್ಲಿನ ಮರಳು ನಿಕ್ಷೇಪಗಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ, ಜಲಸಂಪನ್ಮೂಲ ಇಲಾಖೆ, ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಬೇಕು. ತಾಲೂಕು ವ್ಯಾಪ್ತಿಗಳಲ್ಲಿ ಬರುವ ಹಳ್ಳ, ತೊರೆ, ಕರೆ, ಹೊಳೆ ಮತ್ತು ಅಣೆಕಟ್ಟಿನ ಹಿನ್ನೀರಿನ ನದಿಪಾತ್ರಗಳಲ್ಲಿ ಹೊಸ ಮರಳು ನೀತಿ-2020ರ ಆದೇಶದಲ್ಲಿ ತಿಳಿಸಿರುವ ಅಂಶಗಳನ್ವಯ ಮರಳು ನಿಕ್ಷೇಪಗಳನ್ನು ಗುರುತಿಸಿ, ತಾಲೂಕು ಮರಳು ಉಸ್ತುವಾರಿ ಸಮಿತಿ ಮೂಲಕ, ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಅನುಮೋದನೆಯೊಂದಿಗೆ ತೆರವುಗೊಳಿಸುವಿಕೆಗೆ ಕ್ರಮವಹಿಸಬೇಕಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ರೋಷನ್, ಸಹಾಯಕ ಕಮಿಷನರ್ ಪ್ರಿಯಾಂಗಾ .ಎಂ ಹಾಗೂ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರಾದ ಸೋಮಶೇಖರ. ಎಂ ಅವರು ಸೇರಿದಂತೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.