
ಸೌದಿಯಲ್ಲಿ ಕಾರು ಅಪಘಾತ ದ.ಕ. ಜಿಲ್ಲೆಯ ಮೂವರ ಸಾವು: ಸೌದಿಯಲ್ಲೇ ಅಂತ್ಯಕ್ರಿಯೆ ನಡೆಸಲು ತಯಾರಿ
Team Udayavani, Feb 5, 2023, 8:54 PM IST

ಸುರತ್ಕಲ್: ಸೌದಿ ಅರೇಬಿಯಾದ ಅಲ್-ಹಸಾ ಎನ್ನುವ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದಂತೆ ಮೃತಪಟ್ಟ ಒಟ್ಟು ನಾಲ್ವರು ಅನಿವಾಸಿ ಉದ್ಯೋಗಿಗಳ ಅಂತ್ಯಕ್ರಿಯೆ ಸೌದಿಯಲ್ಲಿ ನಡೆಸಲು ಸಕಲ ತಯಾರಿ ನಡೆಸಲಾಗುತ್ತಿದೆ.
ಹಳೆಯಂಗಡಿ ಬಳಿಯ ಕದಿಕೆ ನಿವಾಸಿ ರಿಝ್ವಾನ್(23) ಸುರತ್ಕಲ್ ಕೃಷ್ಣಾಪುರದ ಶಿಹಾಬ್(25) ಮಂಗಳೂರು ಬೆಂಗರೆ ನಿವಾಸಿ ಅಕೀಲ್(23) ಹಾಗು ಬಾಂಗ್ಲಾದೇಶದ ಇನ್ನೋರ್ವ ಪ್ರಜೆ ನಾಸೀರ್ ಎಂಬ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ದೇಹ ಅಪಘಾತದಿಂದ ಜರ್ಝರಿತವಾದ ಕಾರಣ ಅವರು ಕೆಲಸ ಮಾಡುತ್ತಿದ್ದ ಸ್ಯಾಕೋ ಕಂಪನಿ ಅಲ್ಲಿಯೇ ವ್ಯವಸ್ಥೆ ,ಮಾಡುತ್ತಿದೆ. ಪೋಷಕರು ಇದಕ್ಕೆ ಬೇಕಾದ ಸ್ಟಾಂಪ್ ಪೇಪರ್ ಸಹಿತ ಬೇಕಾದ ದಾಖಲೆ ಪತ್ರ ಕಳಿಸಲು ಒಪ್ಪಿಗೆ ಸೂಚಿಸಿದ್ದಾರೆ.
ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಅಲ್-ಹಸಾ ಎಂಬ ಪ್ರದೇಶದ ಖುರೈಸ್ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿತ್ತು.
ಇದನ್ನೂ ಓದಿ: ವಜ್ರದ ನೆಕ್ಲೇಸ್ ಕದ್ದ ಕಳ್ಳ ‘ಇಲಿ’! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಇಲಿಯ ಕೈಚಳಕ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಮಂಗಳೂರು : ಅಪಾರ್ಟ್ಮೆಂಟ್ ನ 9 ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು

ಚುನಾವಣೆ ಘೋಷಣೆ: ಉಡುಪಿ ಮಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಸೂಚನೆ

ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ಎನ್ ವಿಷನ್ – 2023 ಉದ್ಘಾಟನಾ ಸಮಾರಂಭ

ಮಂಗಳೂರು: ಇಬ್ಬರು ಬೈಕ್ ಕಳ್ಳರ ಬಂಧನ; ಕಳವುಗೈದ ಬೈಕ್ ನಲ್ಲಿ ತಿರುಗಾಡಿ ಸಿಕ್ಕಿಬಿದ್ದರು
MUST WATCH
ಹೊಸ ಸೇರ್ಪಡೆ

ಭಾಷಾ ದ್ವೇಷ ತಡೆಯುವುದು ಅಗತ್ಯ: ವೈದೇಹಿ

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್