ಮೂತ್ರಪಿಂಡ ವೈಫಲ್ಯದಿಂದ ಕಿರುತೆರೆ ನಟಿ ಲೀನಾ ಆಚಾರ್ಯ ನಿಧನ
Team Udayavani, Nov 22, 2020, 5:06 PM IST
ಮುಂಬೈ: ಕ್ಲಾಸ್ ಆಫ್ 2020 ಮತ್ತು ಸೇಠ್ ಜಿ ಮುಂತಾದ ಟಿವಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದ ನಟಿ ಲೀನಾ ಆಚಾರ್ಯ ಅವರು ಮೂತ್ರಪಿಂಡ ಸಮಸ್ಯೆಯಿಂದ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ನಟಿ ಲೀನಾ ಆಚಾರ್ಯ ಅವರ ಜೊತೆ ನಟಿಸಿದ್ದ ನಟ ರೋಹನ್ ಮೆಹ್ರಾ ಮಾಹಿತಿ ನೀಡಿದ್ದಾರೆ. ಮೆಹ್ರಾ ಅವರು “ಕ್ಲಾಸ್ ಆಫ್ 2020′ ನಲ್ಲಿ ಆಚಾರ್ಯ ಜತೆಗೆ ನಟಿಸಿದ್ದರು. ಸಾವಿನ ಬಗ್ಗೆ ಪ್ರತಿಕ್ರಿಯೆ ನೀಡಿದ ನಟ ಆಯುಷ್ ಆನಂದ್ ಲೀನಾ ತನಗೆ ಇದ್ದ ಆರೋಗ್ಯ ಸಮಸ್ಯೆಯನ್ನು ಯಾರಲ್ಲೂ ಹೇಳಿಕೊಂಡಿರಲಿಲ್ಲ. ಶನಿವಾರವಷ್ಟೇ ಅವರ ಸಹೋದರನ ಜತೆಗೆ ಮಾತುಕತೆ ನಡೆಸಿದಾಗ ಅವರಿಗೆ ಮೂತ್ರಪಿಂಡ ಸಮಸ್ಯೆ ಇದ್ದ ಬಗ್ಗೆ ಮಾಹಿತಿ ತಿಳಿದುಬಂತು ಎಂದು ಬೇಸರ ವ್ಯಕ್ತಪಡಿಸಿದರು.
2018-2019ರಲ್ಲಿ ಆಚಾರ್ಯ ಅವರೊಂದಿಗೆ ಪರ್ಫೆಕ್ಟ್ ಪತಿಯಲ್ಲಿ ಕೆಲಸ ಮಾಡಿದ ನಟ ಆಯುಷ್ ಆನಂದ್ ಹೇಳುವಂತೆ ಲೀನಾ ಅವರು ಚಿತ್ರೀಕರಣದ ವೇಳೆ ಯಾವತ್ತೂ ತಮ್ಮ ಆರೋಗ್ಯದ ಸಮಸ್ಯೆ ಬಗ್ಗೆ ಹೇಳಿಕೊಂಡಿರಲಿಲ್ಲ ಅಲ್ಲದೆ ತಮ್ಮ ನಗುಮೊಗದಲ್ಲೇ ಎಲ್ಲರೊಂದಿಗೆ ಬೆರೆಯುತ್ತಿದ್ದಳು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?