ಶ್ರೀಮಂತ ಕುಮಾರ್ ಅಪಹರಣ ಪ್ರಕರಣ : ವಿಡಿಯೋ ಬಿಡುಗಡೆ

Team Udayavani, Jul 18, 2019, 11:07 PM IST

ಬೆಂಗಳೂರು : ಸದನದಲ್ಲಿ ತೀವ್ರ ಚರ್ಚೆಗೆ ಕಾರಣವಾದ ಕಾಂಗ್ರೆಸ್ ಕಾಗವಾಡ ಶಾಸಕ ಶ್ರೀಮಂತ ಕುಮಾರ್ ಪ್ರಕರಣ. ಬೆಂಗಳೂರಿನ ಕಾಂಗ್ರೆಸ್ ಶಾಸಕರೊಂದಿಗೆ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದ ಶಾಸಕ ರಾತ್ರೋರಾತ್ರಿ ಬೆಂಗಳೂರಿನಿಂದ ಮುಂಬಯಿಗೆ ತೆರಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸ್ ಶಾಸಕರು ಬಿಜೆಪಿ ವಿರುದ್ಧ ತಮ್ಮ ಶಾಸಕ ಶ್ರೀಮಂತ ಕುಮಾರ್ ಅವರನ್ನು ಅಪಹರಿಸಿ ಬಲವಂತವಾಗಿ ಬಂಧನದಲ್ಲಿ ಇರಿಸಿದ್ದಾರೆ ಎಂದು ಕಾಂಗ್ರೆಸ್‌ ವತಿಯಿಂದ ನಗರ ಪೊಲೀಸ್‌ ಆಯುಕ್ತ ಅಲೋಕ್‌ಕುಮಾರ್‌ಗೆ ದೂರು ಸಲ್ಲಿಸಲಾಗಿದೆ.

ಕೆಪಿಸಿಸಿ ಕಾರ್ಯದರ್ಶಿ ನಟರಾಜ್‌ ಗೌಡ ಹಾಗೂ ವಕ್ತಾರ ಮಂಜುನಾಥ ಅದ್ದೆ ದೂರು ಸಲ್ಲಿಸಿದ್ದು, ರಾಜ್ಯ ಸರ್ಕಾರದ ವಿಶ್ವಾಸ ಮತ ಯಾಚನೆಯನ್ನು ವಿಫ‌ಲಗೊಳಿಸಲು ಬಿಜೆಪಿಯ ಮಾಜಿ ಶಾಸಕ ಲಕ್ಷ್ಮಣ ಸವದಿ, ಶ್ರೀಮಂತ ಪಾಟೀಲ್‌ ಅವರನ್ನು ಅಪಹರಣಗೊಳಿಸಿದ್ದಾರೆ.

ಶ್ರೀಮಂತ ಪಾಟೀಲ್‌ ಅವರಿಗೆ ಕಾಂಗ್ರೆಸ್‌ ಪಕ್ಷದ ವತಿಯಿಂದ ವಿಪ್‌ ಜಾರಿಗೊಳಿಸಲಾಗಿದೆ.

ಅವರನ್ನು ಕಾನೂನು ಬಾಹಿರವಾಗಿ ಅಪಹರಿಸಿ, ಸರ್ಕಾರವನ್ನು ಪತನಗೊಳಿಸುವ ಹುನ್ನಾರ ಅಡಗಿದೆ. ಹೀಗಾಗಿ ಇದೊಂದು ಗಂಭೀರ ಪ್ರಕರಣವಾಗಿರುವುದರಿಂದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಆದರೆ, ಶ್ರೀಮಂತ ಪಾಟೀಲ್‌ ತಮ್ಮ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದು, ನನಗೆ ಎದು ನೋವು ಕಂಡ ತಕ್ಷಣ ನಾನು ಚಿಕಿತ್ಸೆಗೆ ಮುಂಬೈಗೆ ಬಂದಿದ್ದೇನೆ. ಇನ್ನೂ ಎದೆಯಲ್ಲಿ ನೋವು ಇದೆ.

ಹೀಗಾಗಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿದ್ದೇನೆ ಎಂದು ವಿಡಿಯೋ ಬಿಡುಗಗಡೆ ಮಾಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ